ಸಲಾರ್ ಚಿತ್ರದಲ್ಲಿ ನಟ ಪ್ರಭಾಸ್ 
ಸಿನಿಮಾ ಸುದ್ದಿ

ಪ್ರಭಾಸ್ ಅಭಿನಯದ ಸಲಾರ್- ಭಾಗ 2ರ ಚಿತ್ರೀಕರಣಕ್ಕೆ ದಿನಾಂಕ ನಿಗದಿ

ಪ್ರಭಾಸ್ ನಟನೆಯ ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಚಿತ್ರತಂಡ ಸದ್ಯ ಯಶಸ್ಸಿನ ಅಲೆಯಲ್ಲಿ ತೇಲುತ್ತಿದೆ. ಚಿತ್ರದ ಎರಡನೇ ಭಾಗವು ಯಾವಾಗ ಸೆಟ್ಟೇರುತ್ತದೆ ಎಂಬುದರ ಕುರಿತು ಸಾಕಷ್ಟು ಊಹಾಪೋಹಗಳಿದ್ದು, ಚಿತ್ರೀಕರಣ ಯಾವಾಗ ಪ್ರಾರಂಭವಾಗುತ್ತದೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಪ್ರಭಾಸ್ ನಟನೆಯ ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಚಿತ್ರತಂಡ ಸದ್ಯ ಯಶಸ್ಸಿನ ಅಲೆಯಲ್ಲಿ ತೇಲುತ್ತಿದೆ. ಚಿತ್ರವು ವಿಶ್ವದಾದ್ಯಂತ ಗಲ್ಲಾಪೆಟ್ಟಿಗೆಯಲ್ಲಿ 700 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿದೆ ಎಂದು ಹೇಳಲಾಗುತ್ತಿದೆ. ಚಿತ್ರದ ಎರಡನೇ ಭಾಗವು ಯಾವಾಗ ಸೆಟ್ಟೇರುತ್ತದೆ ಎಂಬುದರ ಕುರಿತು ಸಾಕಷ್ಟು ಊಹಾಪೋಹಗಳಿದ್ದು, ಸಲಾರ್ ಎರಡನೇ ಭಾಗದ ಚಿತ್ರೀಕರಣ ಮಾರ್ಚ್‌ನಲ್ಲಿ ಪ್ರಾರಂಭವಾಗಲಿದೆ ಎಂದು ಚಿತ್ರತಂಡಕ್ಕೆ ಹತ್ತಿರದ ಮೂಲಗಳು ತಿಳಿಸಿವೆ. 

ಕಾಲ್ಪನಿಕ ನಗರವಾದ ಖಾನ್‌ಸಾರ್‌ನಲ್ಲಿ ನಡೆಯುವ ಈ ಚಿತ್ರವು ದೇವ (ಪ್ರಭಾಸ್) ಮತ್ತು ವರ್ಧ (ಪೃಥ್ವಿರಾಜ್) ಎಂಬ ಇಬ್ಬರು ಸ್ನೇಹಿತರ ಸುತ್ತ ಸುತ್ತುತ್ತದೆ. ಸಲಾರ್- ಭಾಗ 2 ರಲ್ಲಿ ಅಂತಿಮ ಹಣಾಹಣಿಗೆ ವೇದಿಕೆ ಸಿದ್ಧಪಡಿಸಲಾಗಿದೆ.

ಚಿತ್ರದಲ್ಲಿ ಪ್ರಭಾಸ್ ಮತ್ತು ಪೃಥ್ವಿರಾಜ್ ಸುಕುಮಾರನ್ ಅವರನ್ನು ಹೊರತುಪಡಿಸಿ, ಜಗಪತಿ ಬಾಬು, ಶ್ರುತಿ ಹಾಸನ್ ಮತ್ತು ಪ್ರಮೋದ್ ಸಹ ನಟಿಸಿದ್ದಾರೆ.

ಹೊಂಬಾಳೆ ಫಿಲ್ಮ್ಸ್ ಸದ್ಯ ದೊಡ್ಮನೆ ಕುಡಿ ಯುವ ರಾಜಕುಮಾರ್ ಅವರ ಚೊಚ್ಚಲ ಚಿತ್ರವಾದ ಯುವ, ತಮಿಳಿನಲ್ಲಿ ರಘು ತಾತ ಮತ್ತು ಡಾ. ಸೂರಿ ನಿರ್ದೇಶನದ ಶ್ರೀಮುರಳಿ ಅಭಿನಯದ ಬಘೀರಾ ಸೇರಿದಂತೆ ಹಲವು ಆಕರ್ಷಕ ಯೋಜನೆಗಳನ್ನು ಹೊಂದಿದೆ. ಇದರ ಹೊರತಾಗಿ, ಬಹು ನಿರೀಕ್ಷಿತ ಕಾಂತಾರ- ಅಧ್ಯಾಯ 1 ಅನ್ನು ಕೂಡ ಹೊಂದಿದೆ.  ನಿಸ್ಸಂದೇಹವಾಗಿ ಈ ಚಿತ್ರವು ಈ ವರ್ಷ ತೆರೆಕಾಣುತ್ತಿರುವ ಅತಿದೊಡ್ಡ ಚಿತ್ರಗಳಲ್ಲಿ ಒಂದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಐದು ದಿನ ಇರಾನ್ Power Plant ಗಳ ಮೇಲೆ ದಾಳಿ ಮಾಡಲ್ಲ..': Trump ತಾತ್ಕಾಲಿಕ ಕದನ ವಿರಾಮ ಘೋಷಣೆ! ಮಾತುಕತೆ ನಿರಾಕರಿಸಿದ ಇರಾನ್

West Asia Crisis: ಮುಳುಗಿದ D-Street; 13.5 ಲಕ್ಷ ಕೋಟಿ ನಿರ್ನಾಮ!

ಇರಾನ್ ಮೇಲಿನ ದಾಳಿ ಐದು ದಿನ ತಾತ್ಕಾಲಿಕ ಸ್ಥಗಿತ: ಶಾಂತಿ ಸ್ಥಾಪನೆಗಾಗಿ ಪಾಕಿಸ್ತಾನ, ಟರ್ಕಿ, ಈಜಿಪ್ಟ್ ಮಧ್ಯಸ್ಥಿಕೆ!

ಕಾಂಗ್ರೆಸ್ ಪಕ್ಷದಿಂದ ರಾಜ್ಯಸಭೆಗೆ ಉಮರ್ ಖಾಲಿದ್‌ ನಾಮನಿರ್ದೇಶನಕ್ಕೆ ಮುಸ್ಲಿಂ ಸಂಘಟನೆಗಳ ಒತ್ತಾಯ!

ಭಾರತ vs ಪಾಕಿಸ್ತಾನ ಅಲ್ಲ, ಇನ್ಮುಂದೆ Afghanistan vs Pakistan: ನೆರೆ ರಾಷ್ಟ್ರದ Rivalry ಬಿಚ್ಚಿಟ್ಟ ಆಫ್ಘನ್ ಆಟಗಾರ!

SCROLL FOR NEXT