ವಿಜಯ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ 
ಸಿನಿಮಾ ಸುದ್ದಿ

ರಶ್ಮಿಕಾ ಮಂದಣ್ಣ- ವಿಜಯ ದೇವರಕೊಂಡ ನಿಶ್ಚಿತಾರ್ಥ ಫೆಬ್ರವರಿಯಲ್ಲಿ!?

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಬಗ್ಗೆ ಗೊತ್ತೇ ಇದೆ. ಆದರೆ ಜೋಡಿ ಇದುವೆರೆಗೆ ತಾವಿಬ್ಬರೂ ಸಂಬಂಧದಲ್ಲಿ ಇದ್ದೇವೆ ಎಂದು ಸಾರ್ವಜನಿಕವಾಗಿ ಎಲ್ಲಿಯೂ ಹೇಳಿಕೊಂಡಿಲ್ಲ.

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಬಗ್ಗೆ ಗೊತ್ತೇ ಇದೆ. ಆದರೆ ಜೋಡಿ ಇದುವೆರೆಗೆ ತಾವಿಬ್ಬರೂ ಸಂಬಂಧದಲ್ಲಿ ಇದ್ದೇವೆ ಎಂದು ಸಾರ್ವಜನಿಕವಾಗಿ ಎಲ್ಲಿಯೂ ಹೇಳಿಕೊಂಡಿಲ್ಲ.

ಆದರೆ 2024ರ ಫೆಬ್ರವರಿ ಎರಡನೇ ವಾರದಲ್ಲಿ ಇಬ್ಬರೂ ತಮ್ಮ ನಿಶ್ಚಿತಾರ್ಥದ ಬಗ್ಗೆ ಅನೌನ್ಸ್‌ ಮಾಡಲಿದ್ದಾರೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಜೋಡಿ ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

ತೆಲುಗು ನಟ ವಿಜಯ್‌ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಡೇಟಿಂಗ್‌ ನಡೆಸುತ್ತಿರುವ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ. ಈ ಬಗ್ಗೆ ಇಬ್ಬರು ತುಟಿ ಬಿಚ್ಚದಿದ್ದರೂ ಅವರ ನಡುವಿನ ಒಡನಾಟ ಸಾಕಷ್ಟು ಅನುಮಾನ ಹುಟ್ಟು ಹಾಕಿದೆ. ಇಬ್ಬರು ಒಟ್ಟಿಗೆ ಓಡಾಡುತ್ತಿರುವ ಫೋಟೊಗಳು ಹಲವು ಬಾರಿ ವೈರಲ್‌ ಆಗಿದ್ದವು.

ಡೇಟಿಂಗ್ ಬಗ್ಗೆ ಪ್ರಶ್ನೆ ಮಾಡಿದಾಗಲೆಲ್ಲ ನಾವಿಬ್ಬರೂ ಜಸ್ಟ್ ಫ್ರೆಂಡ್ಸ್ ಎಂದೇ ಉತ್ತರಿಸಿದ್ದರು. ಕಳೆದ ಕೆಲವು ದಿನಗಳಿಂದ, ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರ ನಿಶ್ಚಿತಾರ್ಥದ ಬಗ್ಗೆ ವರದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಫೆಬ್ರವರಿ ಎರಡನೇ ವಾರದಲ್ಲಿ ಇಬ್ಬರೂ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ವರದಿಯಾಗಿದೆ.

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಮೊದಲ ಬಾರಿಗೆ ಪರಶುರಾಮ್ ನಿರ್ದೇಶನದ 2018ರ ʻಗೀತ ಗೋವಿಂದಂʼ ಚಿತ್ರದಲ್ಲಿ ಒಟ್ಟಿಗೆ ಕೆಲಸ ಮಾಡಿದರು. ಚಲನಚಿತ್ರ ಸೂಪರ್‌ ಸಕ್ಸಸ್ ಆಗಿತ್ತು. 2019 ರಲ್ಲಿ, ರಶ್ಮಿಕಾ ಮತ್ತು ವಿಜಯ್ ಮತ್ತೆ ʻಡಿಯರ್ ಕಾಮ್ರೇಡ್ʼ ಚಿತ್ರದಲ್ಲಿ ಒಟ್ಟಿಗೆ ಕೆಲಸ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT