ಯಶ್ 
ಸಿನಿಮಾ ಸುದ್ದಿ

ನಟ ಯಶ್ ಗದಗ ಭೇಟಿ ವೇಳೆ ಮತ್ತೊಂದು ದುರಂತ: ಅಪಘಾತಕ್ಕೀಡಾಗಿದ್ದ ಅಭಿಮಾನಿ ಸಾವು!

ಯಶ್ ಹುಟ್ಟುಹಬ್ಬಕ್ಕೆ ಶುಭಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಸ್ಪರ್ಶದಿಂದ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆ ಬೆನ್ನಲ್ಲೇ ನಟ ಯಶ್‌ ಗದಗ ಭೇಟಿ ವೇಳೆ ಮತ್ತೊಬ್ಬ ಅಭಿಮಾನಿ ಮೃತಪಟ್ಟಿದ್ದಾನೆ.

ಗದಗ : ಯಶ್ ಹುಟ್ಟುಹಬ್ಬಕ್ಕೆ ಶುಭಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಸ್ಪರ್ಶದಿಂದ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆ ಬೆನ್ನಲ್ಲೇ ನಟ ಯಶ್‌ ಗದಗ ಭೇಟಿ ವೇಳೆ ಮತ್ತೊಬ್ಬ ಅಭಿಮಾನಿ ಮೃತಪಟ್ಟಿದ್ದಾನೆ.

ನಟ ಯಶ್‌ ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ವಾಪಸ್ ಆಗುತ್ತಿದ್ದಾಗ ಪೊಲೀಸ್ ವಾಹನಕ್ಕೆ ಬೈಕ್​ ಡಿಕ್ಕಿಯಾಗಿ ಮತ್ತೊಬ್ಬ ಅಭಿಮಾನಿ ಸಾವನ್ನಪ್ಪಿದ್ದಾನೆ. ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದ ನಿಖಿಲ್ (22) ಎಂದು ಗುರುತಿಸಲಾಗಿದೆ.

ಗದಗ ಮುಳುಗುಂದ ರಸ್ತೆಯಲ್ಲಿ ಯಶ್ ಬೆಂಗಾವಲು (ಪೊಲೀಸ್ ಬೆಂಗಾವಲು ವಾಹನ) ವಾಹನಕ್ಕೆ ಸ್ಕೂಟಿ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಯುವಕನನ್ನು ಕೂಡಲೇ ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ರಕ್ತಸ್ರಾವವಾಗಿದ್ದ ಕಾರಣ ಸದ್ಯ, ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ವಿದ್ಯುತ್ ಶಾಕ್ ನಿಂದ ಮೂವರು ಅಭಿಮಾನಿಗಳು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ನಟ ಮೃತರ ಮನೆಗೆ ಭೇಟಿ ನೀಡಿದ್ದರು. ಅದಾದ ನಂತರ ನಟ ಯಶ್ ಗಾಯಾಳುಗಳನ್ನು ನೋಡಲು ಗದಗದ ಆಸ್ಪತ್ರೆಗೆ ತೆರಳಿದ್ದರು. ಗದಗಕ್ಕೆ ಭೇಟಿ ನೀಡಿದ ರಾಕಿಂಗ್ ಸ್ಟಾರ್ ಯಶ್ ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ ವಾಪಸಾಗುತ್ತಿದ್ದರು.

ಈ ವೇಳೆ ಯಶ್ ನೋಡಲು ಅಭಿಮಾನಿಯೊಬ್ಬ ವೇಗವಾಗಿ ಬಂದು ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೆ ನಿಖಿಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET paper leak: ಯುವಕರ ಭವಿಷ್ಯದ ಜೊತೆ ಆಟ, ತಕ್ಷಣ ಧರ್ಮೇಂದ್ರ ಪ್ರಧಾನ್ ವಜಾಗೊಳಿಸಿ: ರಾಹುಲ್ ಗಾಂಧಿ ಆಗ್ರಹ

ನಟ Jayam Ravi ವಿಚ್ಛೇದನ: ನಿರಾಕರಿಸಿದ್ದು ಯಾರು?, ಮದುವೆಯಾಗಿದ್ದು ಯಾರು? ಎಂಬುದನ್ನು ಸಾಬೀತು ಪಡಿಸುತ್ತೇನೆ: ಆರ್ತಿ ತಾಯಿ ಸುಜಾತ

IPL 2026: 2 ಓವರ್ ನಲ್ಲಿ ಪಂದ್ಯ ಕಳೆದುಕೊಂಡ GT, KKRಗೆ 29 ರನ್ ಗಳ ಭರ್ಜರಿ ಜಯ

IPL 2026: ಗಾಯದ ನಡುವೆಯೂ ಭರ್ಜರಿ ಬ್ಯಾಟಿಂಗ್, Sai Sudharsan ದಾಖಲೆ

'ಪ್ಲೀಸ್ ನಾಳೆ ಒಂದಿನ ಗೆಲ್ರಪ್ಪಾ': ಎದುರಾಳಿ RCB ಬೆನ್ನು ಬಿದ್ದ CSK ಫ್ಯಾನ್ಸ್! ಬೆಂಗಳೂರು ಗೆಲುವು ಚೆನ್ನೈಗೇಕೆ ಮುಖ್ಯ?

SCROLL FOR NEXT