ಬ್ಯಾಚುಲರ್ ಪಾರ್ಟಿ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

‘ಬ್ಯಾಚುಲರ್ ಪಾರ್ಟಿ'ಯಲ್ಲಿ ಅತಿಥಿ ನಟರ ಸಮಾಗಮ; ಜ.26ಕ್ಕೆ ಚಿತ್ರ ಬಿಡುಗಡೆ

ಅಭಿಜಿತ್ ಮಹೇಶ್ ಅವರ ಚೊಚ್ಚಲ ನಿರ್ದೇಶನದ ಬ್ಯಾಚುಲರ್ ಪಾರ್ಟಿ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಚಿತ್ರದಲ್ಲಿ ಅತಿಥಿಗಳ ಸಮಾಗಮವಾಗಲಿದೆ.

ಅಭಿಜಿತ್ ಮಹೇಶ್ ಅವರ ಚೊಚ್ಚಲ ನಿರ್ದೇಶನದ ಬ್ಯಾಚುಲರ್ ಪಾರ್ಟಿ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಚಿತ್ರದಲ್ಲಿ ಅತಿಥಿಗಳ ಸಮಾಗಮವಾಗಲಿದೆ.

ಇತ್ತೀಚೆಗಷ್ಟೇ ಚಿತ್ರತಂಡ ಪೋಸ್ಟರ್‌ಗಳು, ಹಾಡುಗಳು ಮತ್ತು ಟೀಸರ್‌ಗಳನ್ನು ಬಿಡುಗಡೆ ಮಾಡಿದ್ದು, ಇದು ಪ್ರೇಕ್ಷಕರ ಗಮನ ಸೆಳೆದಿದೆ. ಇದೀಗ ಟ್ರೇಲರ್ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ನಡೆಸುತ್ತಿದೆ.

ಈ ನಡುವೆ ಅಭಿಜಿತ್ ಮಹೇಶ್ ಅವರು 'ಬ್ಯಾಚುಲರ್‌ ಪಾರ್ಟಿ’ ಸಿನಿಮಾದಲ್ಲಿ ಅತಿಥಿ ಪಾತ್ರಕ್ಕೆ ಬಣ್ಣ ಹಚ್ಚಿರುವ ಕಲಾವಿದರ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ವಿಕಾಸ್‌, ಗುರುಪ್ರಸಾದ್‌, ಶೈನ್‌ ಶೆಟ್ಟಿ

ಲೂಸಿಯಾ ಪವನ್‌ ಕುಮಾರ್‌, ಮಠ ಗುರುಪ್ರಸಾದ್‌, ನಾ. ಸೋಮೇಶ್ವರ (ಥಟ್‌ ಅಂತ ಹೇಳಿ), ಶೈನ್‌ ಶೆಟ್ಟಿ ಹಾಗೂ ವಿಕ್ಕಿಪೀಡಿಯಾ ಖ್ಯಾತಿಯ ವಿಕಾಸ್‌ ಸೇರಿದಂತೆ ಇನ್ನೂ ಹಲವರು ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆಂಬ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಸದ್ಯ ಈ ಪಟ್ಟಿ ನೀಡಿರುವ ಚಿತ್ರತಂಡ ಇವರೆಲ್ಲ “ಬ್ಯಾಚುಲರ್‌’ಗಳ ಜತೆ ಏನೇನು ಚಮತ್ಕಾರ ಮಾಡಲಿದ್ದಾರೆ ಎಂಬ ಗುಟ್ಟನ್ನು ಮಾತ್ರ ಅವರು ಬಿಟ್ಟುಕೊಟ್ಟಿಲ್ಲ.

ಏಳು ವರ್ಷಗಳ ಹಿಂದೆ ಕಿರಿಕ್ ಪಾರ್ಟಿ ಚಿತ್ರವನ್ನು ನಿರ್ಮಿಸಿದ್ದ ರಕ್ಷಿತ್ ಶೆಟ್ಟಿ ಈಗ ಪರಂವಾ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಬ್ಯಾಚುಲರ್ ಪಾರ್ಟಿ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಕಿರಿಕ್ ಪಾರ್ಟಿ ಸಿನಿಮಾದಲ್ಲಿ ಬರಹಗಾರರಾಗಿ ಕಾರ್ಯನಿರ್ವಹಿಸಿದ್ದ ಅಭಿಜಿತ್ ಮಹೇಶ್, ಬ್ಯಾಚುಲರ್ ಪಾರ್ಟಿ ಸಿನಿಮಾ ಮೂಲಕ ನಿರ್ದೇಶಕರಾಗಿ ಹೊರಹೊಮ್ಮಿದ್ದಾರೆ.

ನಾ. ಸೋಮೇಶ್ವರ ಜೊತೆ ಅಭಿಜಿತ್ ಮಹೇಶ್, ಪವನ್‌ ಕುಮಾರ್‌

ಸಿನಿಮಾಕ್ಕೆ ಅರವಿಂದ್‌ ಛಾಯಾಗ್ರಹಣ, ಅರ್ಜುನ್‌ ರಾಮು ಸಂಗೀತ ನಿರ್ದೇಶನವಿದೆ. ಸದ್ಯ ಭರದಿಂದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ “ಬ್ಯಾಚುಲರ್‌ ಪಾರ್ಟಿ’ ಸಿನಿಮಾ ಇದೇ ಜನವರಿ 26ರಂದು ರಾಜ್ಯಾದ್ಯಂತ ತೆರೆಕಾಣಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT