ರಿಷಬ್ ಶೆಟ್ಟಿ ಮತ್ತು ಅಶುತೋಷ್ ಗೋವಾರಿಕರ್ 
ಸಿನಿಮಾ ಸುದ್ದಿ

ಅಶುತೋಷ್ ಗೋವರಿಕರ್ ಭೇಟಿಯಾದ ರಿಷಬ್ ಶೆಟ್ಟಿ: 'ಲಗಾನ್’ ಡೈರೆಕ್ಟರ್ ಸಿನಿಮಾದಲ್ಲಿ 'ಕಾಂತಾರ ಶಿವ'?

ನಟ ರಿಷಬ್ ಶೆಟ್ಟಿ - ಲಗಾನ್ ನಿರ್ದೇಶಕ ಅಶುತೋಷ್ ಗೋವರಿಕರ್ ಜೊತೆ ಮುಂಬೈನ ಅವರ ಕಚೇರಿಯ ಮುಂದೆ ಕಾಣಿಸಿಕೊಂಡಿದ್ದಾರೆ. ಆ ಮೂಲಕ ಇಬ್ಬರೂ ಒಟ್ಟಿಗೆ ಸಿನಿಮಾ ಮಾಡುತ್ತಿರುವ ಸ್ಪಷ್ಟ ಸುಳಿವು ನೀಡಿದ್ದಾರೆ.

ಭಾರತ ಸಿನಿಮಾ ಇತಿಹಾಸದ ಅತ್ಯುತ್ತಮ ಸಿನಿಮಾಗಳಲ್ಲಿ ಒಂದಾಗಿರುವ ‘ಲಗಾನ್’ ಸಿನಿಮಾವನ್ನು ನಿರ್ದೇಶನ ಮಾಡಿರುವ ಅಶುತೋಷ್ ಗೋವರೀಕರ್ ಅವರ ಹೊಸ ಸಿನಿಮಾದಲ್ಲಿ ರಿಷಬ್ ಶೆಟ್ಟಿ ನಟಿಸಲಿದ್ದಾರೆ. ಹೀಗೊಂದು ಸುದ್ದಿ ಕಳೆದ ಕೆಲ ತಿಂಗಳುಗಳಿಂದ ಹರಿದಾಡುತ್ತಿತ್ತು.

ಅದಕ್ಕೆ ಪುಷ್ಠಿ ನೀಡುವಂತೆ ನಟ ರಿಷಬ್ ಶೆಟ್ಟಿ - ಲಗಾನ್ ನಿರ್ದೇಶಕ ಅಶುತೋಷ್ ಗೋವರಿಕರ್ ಜೊತೆ ಮುಂಬೈನ ಅವರ ಕಚೇರಿಯ ಮುಂದೆ ಕಾಣಿಸಿಕೊಂಡಿದ್ದಾರೆ. ಆ ಮೂಲಕ ಇಬ್ಬರೂ ಒಟ್ಟಿಗೆ ಸಿನಿಮಾ ಮಾಡುತ್ತಿರುವ ಸ್ಪಷ್ಟ ಸುಳಿವು ನೀಡಿದ್ದಾರೆ.

ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ  ಕಾಂತಾರ ಫ್ರಿಕ್ವೇಲ್ ಗಾಗಿ ರಿಷಬ್ ಶೆಟ್ಟಿ ಸಜ್ಜಾಗುತ್ತಿದ್ದು, ಇದರ ನಡುವೆ ರಿಷಬ್ ಶೆಟ್ಟಿ ಶುಕ್ರವಾರ ಬಾಲಿವುಡ್ ನಿರ್ದೇಶಕ ಅಶುತೋಷ್ ಗೋವಾರಿಕರ್ ಮತ್ತು ವಿಷ್ಣು ವರ್ಧನ್ ಇಂದೂರಿ ಅವರೊಂದಿಗೆ ಸಭೆ ನಡೆಸಿದ್ದು ಮತ್ತಷ್ಟು ಊಹಾಪೋಹಗಳನ್ನು ಸೃಷ್ಟಿಸಿದೆ.

ಸೆಪ್ಟೆಂಬರ್ 2023 ರಿಂದ, ರಿಷಬ್ ಮತ್ತು ಅಶುತೋಷ್ ಗೋವಾರಿಕರ್ ಸಿನಿಮಾ ಬಗ್ಗೆ ಊಹಾಪೋಹಗಳಿವೆ. ಆದಾಗ್ಯೂ, ರಿಷಬ್ ಶೆಟ್ಟಿ ಸಿನಿಮಾ ಎಕ್ಸ್ ಪ್ರೆಸ್ ಗೆ ಈ ಹಿಂದೆ ನೀಡಿದ್ದ ಸಂದರ್ಶನದಲ್ಲಿ, ಸದ್ಯ ಅವರ ಗಮನವು ಕೇವಲ ಕಾಂತಾರ-2 ಮೇಲಿದೆ ಎಂದು ಹೇಳಿದ್ದರು. ಆದರೆ ಈಗ ಈ ಭೇಟಿ ಎಲ್ಲರ ಗಮನ ಸೆಳೆದಿದೆ.

ಕಾಂತಾರ ಪ್ರೀಕ್ವೆಲ್ ನಂತರ ರಿಷಬ್ ಶೆಟ್ಟಿ ಮುಂದಿನ ಪ್ರಾಜೆಕ್ಟ್ ಬಗ್ಗೆ ಕೇಳಿದ ಪ್ರಶ್ನೆಗೆ ಸೂಕ್ತ ಸಮಯದಲ್ಲಿ ಉತ್ತರ ಸಿಗಲಿದೆ ಎಂದಿದ್ದರು. 2022 ರಲ್ಲಿ ಬಿಡುಗಡೆಯಾದ ಕಾಂತಾರ ಗಮನಾರ್ಹ ಯಶಸ್ಸನ್ನು ಕಂಡಿತು, ಕನ್ನಡ ಚಲನಚಿತ್ರವು ವ್ಯಾಪಕವಾದ ಮೆಚ್ಚುಗೆಯನ್ನು ಪಡೆಯಿತು ಮತ್ತು  ಗಲ್ಲಾಪೆಟ್ಟಿಗೆಯಲ್ಲಿ ಗಣನೀಯ ಯಶಸ್ಸು ಸಾಧಿಸಿತು. ಅದರ ಅಪಾರ ಜನಪ್ರಿಯತೆಯಿಂದಾಗಿ, ಪ್ಯಾನ್ ಇಂಡಿಯಾ ಸಿನಿಮಾವಾಯಿತ. ರಾಷ್ಟ್ರೀಯ ಮನ್ನಣೆಯನ್ನು ಗಳಿಸಿತು ಮತ್ತು ಈಗ ಎಲ್ಲರೂ ಕಾಂತಾರ ಪ್ರೀಕ್ವೆಲ್ ಗಾಗಿ ಎದುರು ನೋಡುತ್ತಿದ್ದಾರೆ.

ರಿಷಬ್ ಶೆಟ್ಟಿ ನಾಯಕನಾಗಿ ನಟಿಸುತ್ತಿದ್ದು, ನಿರ್ದೇಶಕರು ಬೇರೆ ಕಲಾವಿದರ ಬಗ್ಗೆ ಇನ್ನೂ ಘೋಷಿಸಿಲ್ಲ. ತಂತ್ರಜ್ಞರಿಗೆ ಸಂಬಂಧಿಸಿದಂತೆ, ಕಾಂತಾರ ಪ್ರೀಕ್ವೆಲ್ ಸಂಗೀತ ಸಂಯೋಜಕ ಅಜನೀಶ್ ಲೋಕನಾಥ್ ಮತ್ತು ಛಾಯಾಗ್ರಾಹಕ ಅರವಿಂದ್ ಎಸ್ ಕಶ್ಯಪ್  ಜೊತೆಗೂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!