ಯಶ್ ತಂಡದವರಿಂದ ಪರಿಹಾರದ ಮೊತ್ತ ವಿತರಣೆ 
ಸಿನಿಮಾ ಸುದ್ದಿ

ಬ್ಯಾನರ್ ಕಟ್ಟುವಾಗ ವಿದ್ಯುತ್ ಸ್ಪರ್ಶಿಸಿ ಮೂವರು ಅಭಿಮಾನಿಗಳ ಸಾವು: ಕುಟುಂಬಕ್ಕೆ ಪರಿಹಾರ ಚೆಕ್ ತಲುಪಿಸಿದ ನಟ ಯಶ್

ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ ದಿನ ಎತ್ತರದಲ್ಲಿ ಬ್ಯಾನರ್ ಕಟ್ಟಲು ಹೋಗಿ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಸೂರಣಗಿ ಗ್ರಾಮದ ಯುವಕರ ಕುಟುಂಬಕ್ಕೆ ನಟನ ಕಡೆಯಿಂದ ಪರಿಹಾರದ ಚೆಕ್ ತಲುಪಿದೆ.

ಬೆಂಗಳೂರು/ಗದಗ: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ ದಿನ ಎತ್ತರದಲ್ಲಿ ಬ್ಯಾನರ್ ಕಟ್ಟಲು ಹೋಗಿ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಸೂರಣಗಿ ಗ್ರಾಮದ ಯುವಕರ ಕುಟುಂಬಕ್ಕೆ ನಟನ ಕಡೆಯಿಂದ ಪರಿಹಾರದ ಚೆಕ್ ತಲುಪಿದೆ.

ಯಶ್ ಅವರ ಆಪ್ತರು ನಿನ್ನೆ ಗ್ರಾಮಕ್ಕೆ ಭೇಟಿ ನೀಡಿ ಯಶೋಮಾರ್ಗ ಫೌಂಡೇಶನ್ ಕಡೆಯಿಂದ 5 ಲಕ್ಷ ರೂಪಾಯಿ ಪರಿಹಾರದ ಚೆಕ್ ನೀಡಿದ್ದಾರೆ. ಯಶ್​ ಸ್ನೇಹಿತರು ಬಂದು ಪರಿಹಾರ ಹಣ ನೀಡಿದ್ದಾಗ ಕುಟುಂಬಸ್ಥರು ಬಿಕ್ಕಿ ಬಿಕ್ಕಿ ಅತ್ತ ದೃಶ್ಯ ಮನಕಲಕುವಂತಿತ್ತು. ಮಕ್ಕಳನ್ನು ಕಳೆದುಕೊಂಡ ನೋವು ಪೋಷಕರನ್ನು ಕಾಡುತ್ತಿದೆ.

ಯಶ್ ಅವರ ಸ್ನೇಹಿತರಾದ ಚೇತನ್ ಹಾಗೂ ರಾಕೇಶ್ ದುರಂತ ಸಂಭವಿಸಿದ್ದ ಸೂರಣಗಿ ಗ್ರಾಮಕ್ಕೆ ಭೇಟಿ ನೀಡಿ ಮನೆ ಮಕ್ಕಳನ್ನು ಕಳೆದುಕೊಂಡ ಮೂರೂ ಕುಟುಂಬಗಳಿಗೆ ಸಾಂತ್ವನ ಹೇಳಿ ಪರಿಹಾರದ ಹಣ ನೀಡಿದರು. 

ಘಟನೆ ಹಿನ್ನೆಲೆ: ಗದಗ ಜಿಲ್ಲೆಯ ಸೊರಣಗಿ ಗ್ರಾಮದ ಅಭಿಮಾನಿಗಳು ಈ ಬಾರಿ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ತಯಾರಿ ಮಾಡಿಕೊಳ್ಳುತ್ತಿದ್ದಾಗ ಜನವರಿ 7ರಂದು ರಾತ್ರಿ ದುರ್ಘಟನೆ ನಡೆದಿದೆ. ಬ್ಯಾನರ್​ ಕಟ್ಟುವಾಗ ವಿದ್ಯುತ್​ ತಂತಿ ತಗುಲಿದ್ದರಿಂದ ಮುರಳಿ, ನವೀನ್​ ಮತ್ತು ಹನುಮಂತ ಮೃತಪಟ್ಟಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಧಾನಸಭೆಯಲ್ಲಿ 'ಸಿಎಂ ಕುರ್ಚಿ ಕದನ' ಸದ್ದು: ಆರ್. ಅಶೋಕ್ ಮಾತಿಗೆ ಕೆರಳಿದ ಬೈರತಿ; ತೀವ್ರ ಮಾತಿನ ಚಕಮಕಿ!

ಸರ್ಕಾರದ ವಿರುದ್ಧ ಹೋರಾಡಿ ಗೆದ್ದ ಅಲೋಕ್ ಕುಮಾರ್​​ಗೆ DGP ಆಗಿ ಮುಂಬಡ್ತಿ: ADGP ಬಿ.ದಯಾನಂದ್ ವರ್ಗಾವಣೆ

Protection of personality rights: ಹೈಕೋರ್ಟ್ ಗೆ ಸಲ್ಮಾನ್ ಖಾನ್; ವ್ಯಕ್ತಿತ್ವ ಹಕ್ಕುಗಳ ರಕ್ಷಣೆ ಟ್ರೆಂಡ್ ಆಗ್ತಿರೋದೇಕೆ?

ದ್ವೇಷ ಭಾಷಣ ಪ್ರಕರಣ: ಕಲ್ಲಡ್ಕ ಪ್ರಭಾಕರ್ ಭಟ್ ಗೆ ನಿರೀಕ್ಷಣಾ ಜಾಮೀನು!

25 ವರ್ಷ ವಯಸ್ಸಿನ ಅವಿವಾಹಿತ ಮಹಿಳೆಯರು..: ಅನಿರುದ್ಧಾಚಾರ್ಯ ವಿರುದ್ಧ ಕೇಸ್ ದಾಖಲು! 'ಪೂಕಿ ಬಾಬಾ' ಹೇಳಿದ್ದೇನು ಗೊತ್ತಾ?

SCROLL FOR NEXT