ನಿರೂಪ್ ಭಂಡಾರಿ- ಸಾಯಿಕುಮಾರ್ 
ಸಿನಿಮಾ ಸುದ್ದಿ

'ರಂಗಿತರಂಗ' ನಂತರ ಮತ್ತೆ ಜೊತೆಯಾದ ನಿರೂಪ್ ಭಂಡಾರಿ - ಸಾಯಿಕುಮಾರ್!

ಪೋಸ್ಟ್ ಮಾಸ್ಟರ್ ಮತ್ತು ರಂಗಿತರಂಗದಲ್ಲಿ ಖಳನಾಯಕನ ಪಾತ್ರ ನಿರ್ವಹಿಸಿದ್ದ ಸಾಯಿಕುಮಾರ್, ಇನ್ನೂ ಹೆಸರಿಡದ ಈ ಯೋಜನೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುವ ನಿರೀಕ್ಷೆಯಿದೆ.

2015 ರಲ್ಲಿ ಅನುಪ್ ಭಂಡಾರಿ ನಿರ್ದೇಶನದ ರಂಗಿತರಂಗ ಸಿನಿಮಾದಲ್ಲಿ ನಿರೂಪ್ ಭಂಡಾರಿ ಮತ್ತು ಸಾಯಿಕುಮಾರ್ ನಟಿಸಿದ್ದರು. ಆ ಸಿನಿಮಾ ಭಾರೀ ಯಶಸ್ಸು ಕಂಡಿತ್ತು. ಇದೀಗ, ಸಚಿನ್ ವಾಲಿ ನಿರ್ದೇಶನದ ಮುಂಬರುವ ಚಿತ್ರದಲ್ಲಿ ಇಬ್ಬರೂ ಮತ್ತೆ ಒಟ್ಟಿಗೆ ಕೆಲಸ ಮಾಡಲು ಸಿದ್ಧರಾಗಿದ್ದಾರೆ.

ಪೋಸ್ಟ್ ಮಾಸ್ಟರ್ ಮತ್ತು ರಂಗಿತರಂಗದಲ್ಲಿ ಖಳನಾಯಕನ ಪಾತ್ರ ನಿರ್ವಹಿಸಿದ್ದ ಸಾಯಿಕುಮಾರ್, ಇನ್ನೂ ಹೆಸರಿಡದ ಈ ಯೋಜನೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುವ ನಿರೀಕ್ಷೆಯಿದೆ. ಪಾತ್ರಗಳ ವಿವರಗಳು ಮತ್ತು ಶೀರ್ಷಿಕೆಯನ್ನು ತಯಾರಕರು ಮುಚ್ಚಿಟ್ಟಿದ್ದಾರೆ. ಫೆಬ್ರವರಿ 6 ರಂದು ಫಸ್ಟ್ ಲುಕ್ ಜೊತೆಗೆ ಅವುಗಳನ್ನು ಅನಾವರಣಗೊಳಿಸಲು ನಿರ್ಧರಿಸಿದ್ದಾರೆ.

ಸದ್ಯ ಸಿನಿಮಾ ಶೂಟಿಂಗ್ ಹಂತದಲ್ಲಿದೆ, ಚಿತ್ರವು ನೈಜತೆ ಮತ್ತು ಕಾಲ್ಪನಿಕ ಕಥೆಗಳ ಆಕರ್ಷಕ ಸಮ್ಮಿಲ ಹೊಂದಿದೆ, ಸಾಮಾಜಿಕ ಸಂಪರ್ಕಗಳು, ಹಾಸ್ಯ ಮತ್ತು ಕೌಟುಂಬಿಕ ಮನರಂಜನೆಯ ವಿಷಯಗಳನ್ನು ಒಳಗೊಂಡಿದೆ. ಬೃಂದಾ ಆಚಾರ್ಯ ಮತ್ತು ಅಂಕಿತಾ ಅಮರ್ ನಟಿಸಿದ್ದಾರೆ. ಮೊದಲ ಬಾರಿಗೆ ನಿರೂಪ್ ಭಂಡಾರಿ ಜೊತೆ ತೆರೆ ಹಂಚಿಕೊಂಡಿದ್ದಾರೆ.

ಅಂಕಿತ್ ಸೋನಿಗಾರ ನಿರ್ಮಿಸಿದ್ದು, ಪ್ರಶಾಂತ್ ಮುಳಗೆ ಸಹ ನಿರ್ಮಾಪಕರಾಗಿದ್ದಾರೆ. ಸಚಿನ್ ಬಸ್ರೂರು ಸಂಗೀತ ಸಂಯೋಜನೆಯ ಹೊಣೆ ಹೊತ್ತಿದ್ದಾರೆ. ಉಲ್ಲಾಸ್ ಹೈದೂರ್ ಕಲಾ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದು, ಸಂದೀಪ್ ವಲ್ಲೂರಿ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT