ಶ್ರೇಯಸ್ ಚಿಂಗಾ ಮತ್ತು ಮಾನ್ವಿತಾ ಹರೀಶ್ 
ಸಿನಿಮಾ ಸುದ್ದಿ

'ಒನ್‌ ಅಂಡ್‌ ಹಾಫ್‌' ತಂತ್ರಜ್ಞರ ಸಿನಿಮಾ ಎಂದು ಬಣ್ಣಿಸಿದ ಶ್ರೇಯಸ್ ಚಿಂಗಾ

'ಒನ್‌ ಅಂಡ್‌ ಹಾಫ್‌' ಚಿತ್ರವು ಚಿತ್ರೀಕರಣ ಪೂರ್ಣಗೊಳಿಸಿದೆ ಮತ್ತು ಪ್ರಸ್ತುತ ಪೋಸ್ಟ್ ಪ್ರೊಡಕ್ಷನ್‌ನಲ್ಲಿದೆ.

ರಂಗ್ ಬಿರಂಗಿ, ಡೇವಿಡ್, ಮತ್ತು ದಿ ವೆಕೆಂಟ್ ಹೌಸ್ ಚಿತ್ರಗಳ ಮೂಲಕ ನಟನಾ ವೃತ್ತಿಜೀವನ ಪ್ರಾರಂಭಿಸಿದ ನಟ ಶ್ರೇಯಸ್ ಚಿಂಗಾ ಅವರು 'ಒನ್‌ ಅಂಡ್‌ ಹಾಫ್‌' ಚಿತ್ರದ ಮೂಲಕ ನಿರ್ದೇಶನಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಅವರಿಗೆ ನಾಯಕಿಯಾಗಿ ಮಾನ್ವಿತಾ ಹರೀಶ್ ಕಾಮತ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

'ಒನ್‌ ಅಂಡ್‌ ಹಾಫ್‌' ಚಿತ್ರವು ಚಿತ್ರೀಕರಣ ಪೂರ್ಣಗೊಳಿಸಿದೆ ಮತ್ತು ಪ್ರಸ್ತುತ ಪೋಸ್ಟ್ ಪ್ರೊಡಕ್ಷನ್‌ನಲ್ಲಿದೆ. ಇತ್ತೀಚೆಗೆ, ನಿರ್ಮಾಪಕ ಆರ್ ಚರಣ್ ಅವರ ಹುಟ್ಟುಹಬ್ಬದಂದು ಚಿತ್ರತಂಡವು ಒಂದು ಹಾಡನ್ನು ಬಿಡುಗಡೆ ಮಾಡಿದ್ದು, ಈ ವೇಳೆ ಮಾತನಾಡಿದ ಮಾನ್ವಿತಾ, "ಈ ಚಿತ್ರ ನನಗೆ ವಿಶೇಷವಾಗಿದೆ; ಇದು ನನ್ನ ಜೀವನದಲ್ಲಿ ಹೊಸ ವ್ಯಕ್ತಿಯನ್ನು ಪರಿಚಯಿಸಿದೆ. ಚಿತ್ರವೂ ಸುಂದರವಾಗಿ ಮೂಡಿಬಂದಿದೆ. ಮಣಿಕಾಂತ್ ಕದ್ರಿ ಅವರ ಸಂಗೀತ ಅದ್ಭುತವಾಗಿದೆ. ಲಿಖಿತಾ ಸಿರಿ ನನ್ನ ಕೋಸ್ಟಾರ್. ನಮ್ಮ 3 ಜನಕ್ಕೂ ಒಳ್ಳೆ ಬಾಂಡಿಂಗ್ ಇತ್ತು. ಶ್ರೇಯಸ್ ಡೈರೆಕ್ಟರ್ ಆಕ್ಟರ್ ಆಗಿ ಒಳ್ಳೆ ಕೆಲಸ ಮಾಡಿದ್ದಾರೆ ಎಂದರು.

ಇನ್ನು ನಿರ್ದೇಶಕ ಶ್ರೇಯಸ್ ಚಿಂಗಾ ಅವರು ಮಾತನಾಡಿ, ಇದು ತಂತ್ರಜ್ಞರ ಚಿತ್ರ ಎಂದು ಬಣ್ಣಿಸಿದರು. "ಈ ಚಿತ್ರದಲ್ಲಿ ಕೆಲಸ ಮಾಡಿದ ಪ್ರತಿಯೊಬ್ಬ ತಂತ್ರಜ್ಞರು ನನ್ನ ಕುಟುಂಬ ಇದ್ದಂತೆ. ಅವರು ಅವರ ಕರ್ತವ್ಯ ನಿರ್ವಹಿಸಿದ್ದಾರೆ. ನಾನು ಸಿನಿಮಾವನ್ನು ತೆರೆಗೆ ತರಲು ಬೆಂಬಲಿಸಿದ ಇಡೀ ಚಿತ್ರತಂಡಕ್ಕೆ ಧನ್ಯವಾದ ಹೇಳುತ್ತೇನೆ. ಈ ಸಮಯದಲ್ಲಿ ಜನ ಥಿಯೇಟರ್ ಗೆ ಬರುತ್ತಿಲ್ಲ. ನಿಮ್ಮ ಬೆಂಬಲ ನಮಗೆ ಇರಬೇಕು. ಇದು ತುಂಬಾ ವಿಭಿನ್ನ ಸಿನಿಮಾ. ಬೇರೆ ಭಾಷೆಯಲ್ಲಿ ಮಾಡುವ ಸಾಧ್ಯತೆ ನೂರಷ್ಟಿದೆ ಎಂದರು.

ಸುಲಕ್ಷ್ಮಿ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ 'ಒನ್‌ ಅಂಡ್‌ ಹಾಫ್‌' ಚಿತ್ರವು ಹಾಸ್ಯಮಯ ಚಿತ್ರವಾಗಿದೆ. ತಾರಾಗಣದಲ್ಲಿ ಸಾಧು ಕೋಕಿಲ, ಅವಿನಾಶ್, ಸುಚೇಂದ್ರ ಪ್ರಸಾದ್, ಸ್ಪರ್ಶ ರೇಖಾ, ಅನಂತು, ಸುಂದರಶ್ರೀ, ಹಿತೇಶ್ ಕುಮಾರ್, ಮಹಾಂತೇಶ್ ಹಿರೇಮಠ, ನಿಕಿತಾ ದೋರ್ಥೋಡಿ, ಲಲಿತಾ ನಾಯಕ್, ರೋಹಿತ್ ಅರುಣ್ ಅಮನ್, ಮತ್ತು ರಾಖಿ ಭೂತಪ್ಪ ಇದ್ದಾರೆ. ದೇವೇಂದ್ರ ಚಿತ್ರಕ್ಕೆ ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT