ಕಣಂಜಾರು ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

ಆರ್. ಬಾಲಚಂದ್ರ ನಟಿಸಿ- ನಿರ್ದೇಶಿಸಿರುವ 'ಕಣಂಜಾರು' ಟೀಸರ್ ಬಿಡುಗಡೆ

ಆರ್ ಪಿ ಫಿಲ್ಮ್ಸ್ ಬ್ಯಾನರ್ ಅಡಿ ಆರ್.ಬಾಲಚಂದ್ರ ನಿರ್ಮಿಸಿ, ನಿರ್ದೇಶಿಸಿರುವ “ಕಣಂಜಾರು” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಆರ್ ಪಿ ಫಿಲಂಸ್ ಯೂ ಟ್ಯೂಬ್ ಚಾನಲ್ ನಲ್ಲಿ ಟೀಸರ್ ಬಿಡುಗಡೆ ಆಗಿದೆ.

ಆರ್ ಪಿ ಫಿಲ್ಮ್ಸ್ ಬ್ಯಾನರ್ ಅಡಿ ಆರ್.ಬಾಲಚಂದ್ರ ನಿರ್ಮಿಸಿ, ನಿರ್ದೇಶಿಸಿರುವ “ಕಣಂಜಾರು” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಆರ್ ಪಿ ಫಿಲಂಸ್ ಯೂ ಟ್ಯೂಬ್ ಚಾನಲ್ ನಲ್ಲಿ ಟೀಸರ್ ಬಿಡುಗಡೆ ಆಗಿದೆ. ಈಗ ಟೀಸರ್ ಬಿಡುಗಡೆ ಮಾಡಿರುವ ಚಿತ್ರತಂಡಕ್ಕೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಆರಂಭದಲ್ಲಿ, ನಾನು ನಿರ್ದೇಶನದ ಜವಾಬ್ದಾರಿಯನ್ನು ಬೇರೆಯವರಿಗೆ ವಹಿಸಿದ್ದೆ, ಆದರೆ ಯೋಜನೆಗಳು ವಿಫಲವಾದಾಗ, ಅದನ್ನು ನಾನೇ ನಿರ್ದೇಶಿಸಲು ಮುಂದಾದೆ ಎಂದು ಬಾಲಚಂದ್ರ ಹೇಳಿದ್ದಾರೆ.

ಥ್ರಿಲ್ಲರ್ ವಿಷಯವನ್ನು ಮುಂದಿಟ್ಟುಕೊಂಡು ಆರ್.ಬಾಲಚಂದ್ರ ನಿರ್ದೇಶನ ಮಾಡುವ ಜೊತೆಗೆ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವನ್ನು ಕಾರ್ಕಳ, ಉಡುಪಿ, ಹೊನ್ನಾವರ ಸೇರಿದಂತೆ ಮತ್ತಿತರ ಕಡೆ 55ರಿಂದ 60 ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ. ಕಾರ್ಕಳ ಬಳಿಯ ಊರಿನ ಹೆಸರು ಕಣಂಜಾರು ಸಿನಿಮಾ. ಥ್ರಿಲ್ಲರ್ ವಿಷಯ ಆಗಿರುವುದರಿಂದ ಆ ಹೆಸರು ಇಡಲಾಗಿದೆ. ಅದು ಯಾಕೆ ಎನ್ನುವುದನ್ನು ಚಿತ್ರದಲ್ಲಿ ನೋಡಬೇಕು ಎಂದು ನಿರ್ಮಾಪಕರೂ ಆಗಿದ್ದಾರೆ.

ಈ ಹಿಂದೆ ‘ಮಹಾನುಭಾವರು’ ಚಿತ್ರದಲ್ಲಿ ನಾಯಕ ಜೊತೆಗೆ ನಿರ್ಮಾಣ ಮಾಡಿದ್ದೆ, ಇದೊಂದು ಆಸಕ್ತಿ ಮತ್ತು ಕುತೂಹಲ ಕಾರಿ ಸಂಗತಿಯ ಕಥೆಯನ್ನು ಹೊಂದಿದ್ದರಿಂದ ನಾನೇ ನಿರ್ದೇಶನ ಮಾಡಲು ಮುಂದಾದೆ. ಚಿತ್ರದ ಉಳಿದ ಮಾಹಿತಿಯನ್ನು ಹಂತ ಹಂತವಾಗಿ ಬಿಡುಗಡೆ ಹಂಚಿಕೊಳ್ಳುವುದಾಗಿ ಹೇಳಿಕೊಂಡಿದ್ದಾರೆ ಆರ್. ಬಾಲಚಂದ್ರ.

ಬಾಲಚಂದ್ರ, ಅಪೂರ್ವ, ಶರ್ಮಿತಾ ಗೌಡ, ಹಿರಿಯ ನಟ ರಾಮಕೃಷ್ಣ, ಪಿ.ಎಸ್ ಶ್ರೀಧರ್ ಹಾಗು ಮೇಘ ಸೇರಿದಂತೆ ಹೊಸ ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ. ಹರ್ಷವರ್ಧನ್ ರಾಜ್ ಸಂಗೀತ, ಶಶಾಂಕ್ ಶೇಷಗಿರಿ ಹಿನ್ನೆಲೆ ಸಂಗೀತ, ವೆಂಕಿ ಯುಡಿವಿ ಸಂಕಲನ, ಮಂಜುನಾಥ್ ಹೆಗ್ಡ್ ಕ್ಯಾಮರ ಚಿತ್ರಕ್ಕಿದೆ. ಕಣ್ಣಂಜಾರು ಚಿತ್ರದ ಬಿಡುಗಡೆ ದಿನಾಂಕವನ್ನು ನಿರ್ಮಾಪಕರು ಇನ್ನೂ ಘೋಷಿಸಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ: RCB ಗೆ 18 ರನ್ ಗಳ ಭರ್ಜರಿ ಗೆಲುವು!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

SCROLL FOR NEXT