ರಾಕ್ಷಸ ಚಿತ್ರದ ಸ್ಟಿಲ್. 
ಸಿನಿಮಾ ಸುದ್ದಿ

‌'ರಾಕ್ಷಸ'ನಾದ ಪ್ರಜ್ವಲ್‌ ದೇವರಾಜ್: ಮೊದಲ ಬಾರಿಗೆ ಹಾರರ್ ಸಿನಿಮಾದಲ್ಲಿ ಡೈನಾಮಿಕ್‌ ಪ್ರಿನ್ಸ್ ನಟನೆ

ಹಾರಾರ್ ಸಿನಿಮಾ ಮೂಲಕವೇ ಪ್ರಖ್ಯಾತಿ ಗಳಿಸಿರೋ ನಿರ್ದೇಶಕ ಲೋಹಿತ್ ಈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ ನಟ ಪ್ರಜ್ವಲ್ ದೇವರಾಜ್ ಅವರು, ವಿಭಿನ್ನ ರೀತಿಯ ಸಿನಿಮಾಗಳನ್ನ ಆಯ್ಕೆ ಮಾಡಿಕೊಳ್ಳುವುದರಲ್ಲಿ ಮುಂದಿದ್ದಾರೆ. ಇದೇ ಮೊದಲ ಬಾರಿಗೆ ಪ್ರಜ್ವಲ್ ಅವರು ಹಾರಾರ್ ಸಿನಿಮಾವೊಂದರಲ್ಲಿ ನಟಿಸಿದ್ದಾರೆ.

ಹಾರಾರ್ ಸಿನಿಮಾ ಮೂಲಕವೇ ಪ್ರಖ್ಯಾತಿ ಗಳಿಸಿರೋ ನಿರ್ದೇಶಕ ಲೋಹಿತ್ ಈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ.

ಪ್ರಜ್ವಲ್ ಹುಟ್ಟುಹಬ್ಬದ ವಿಶೇಷವಾಗಿ (ಜು.4) ಚಿತ್ರತಂಡ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದು, ಪೋಸ್ಟರ್​ನಲ್ಲಿ ಪ್ರಜ್ವಲ್ ಅವರ ಕಣ್ಣು ಗಮನ ಸೆಳೆದಿದೆ.

ಪ್ರಜ್ವಲ್ ಅವರು ಕುರುಡನ ರೀತಿ ಕಾಣಿಸಿಕೊಂಡಿದ್ದಾರೆ. ಹಿಂಭಾಗದಲ್ಲಿ ರೋಮನ್ ಅಂಕೆಯಲ್ಲಿ ಬರೆದ ಗಡಿಯಾರ ಇದೆ. ಗಡಿಯಾರದ ಗಾಜುಗಳು ಪುಡಿಪುಡಿ ಆಗಿವೆ. ಸಿನಿಮಾದ ಹೆಸರಿಗೆ ತಕ್ಕಂತೆಯೇ ಪೋಸ್ಟರ್ ಮೂಡಿ ಬಂದಿದೆ. ಈ ಪೋಸ್ಟರ್​ನಲ್ಲಿ ಪ್ರಜ್ವಲ್ ಅವರು ರಾಕ್ಷಸನ ರೀತಿಯೇ ಕಾಣಿಸಿಕೊಂಡಿದ್ದಾರೆ.

ದೀಪು ಬಿ ಎಸ್ ಮತ್ತು ನವೀನ್ ಗೌಡ ಹಾಗೂ ಮಾನಸ ಜಂಟಿಯಾಗಿ ‘ರಾಕ್ಷಸ’ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾಗೆ ನೋಬಿನ್ ಪೌಲ್ ಸಂಗೀತ ನಿರ್ದೇಶನ ಮಾಡಿದ್ದು, ಜೇಬಿನ್ ಪಿ ಜೋಕಬ್ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ. ಸುಮಾರು 55 ದಿನಗಳ ಕಾಲ ‘ರಾಕ್ಷಸ’ ಸಿನಿಮಾ ಚಿತ್ರೀಕರಣ ಮಾಡಲಾಗಿದ್ದು, ಸಂಪೂರ್ಣ ಸಿನಿಮಾ ಚಿತ್ರೀಕರಣ ರಾಮೋಜಿ ರಾವ್ ಫಿಲ್ಮ್‌ ಸಿಟಿಯಲ್ಲಿ ನಡೆದಿದೆ.

ಪ್ರಜ್ವಲ್ ಜೊತೆ ಅರುಣ್ ರಾಥೋಡ್, ಶ್ರೀಧರ್,ಗೌತಮ್, ಸೋಮಶೇಖರ್, ವಿಹಾನ್ ಕೃಷ್ಣ ಜಯಂತ್ ಇನ್ನು ಅನೇಕರು ಅಭಿನಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ