ಚೈತ್ರಾ ಆಚಾರ್ 
ಸಿನಿಮಾ ಸುದ್ದಿ

ಕಾಲಿವುಡ್ ಗೆ ಚೈತ್ರಾ ಆಚಾರ್ ಎಂಟ್ರಿ: ರಾಜು ಮುರುಗನ್ ನಿರ್ದೇಶನದ ಸಿನಿಮಾದಲ್ಲಿ ಟೋಬಿ ಬೆಡಗಿ!

ರಾಜು ಮುರುಗನ್ ನಿರ್ದೇಶನದ ಈ ಚಿತ್ರದಲ್ಲಿ ನಟ ಶಶಿಕುಮಾರ್ ಅವರಿಗೆ ಚೈತ್ರಾ ಜೋಡಿಯಾಗಿದ್ದಾರೆ, 135 ಚಿತ್ರಗಳಲ್ಲಿ ಕಾಣಿಸಿಕೊಂಡಿರುವ ಅನುಭವಿ ತಾರೆಯ ಎದುರು ಅವರ ಚೊಚ್ಚಲ ಸಿನಿಮಾವಾಗಿದೆ.

ಚೈತ್ರಾ ಆಚಾರ್ ಕನ್ನಡ ಚಿತ್ರರಂಗದಲ್ಲಿ ಪರಿಚಿತ ಮುಖವಾಗಿದ್ದಾರೆ. ಗಿಲ್ಕಿ, ಟೋಬಿಯಂತಹ ಅವರ ಪಾತ್ರಗಳಿಗೆ ಮತ್ತು ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ಚಿತ್ರದಲ್ಲಿನ ಅವರ ಇತ್ತೀಚಿನ ನಟನೆಗಾಗಿ ಮೆಚ್ಚುಗೆ ಗಳಿಸಿದ್ದಾರೆ. ಸದ್ಯ ಚೈತ್ರಾ ಆಚಾರ್ ಇತರ ಭಾಷೆಗಳಿಗೆ ತಮ್ಮ ನಟನಾ ಪರಿಧಿಯನ್ನು ವಿಸ್ತರಿಸುತ್ತಿದ್ದಾರೆ, ಅವರ ತಮಿಳಿನ ಚೊಚ್ಚಲ ಸಿನಿಮಾಗೆ ಸಹಿ ಹಾಕಿದ್ದಾರೆ.

ಇತ್ತೀಚಿನ ವರದಿಗಳ ಪ್ರಕಾರ, ಅವರು ಎರಡು ತಮಿಳು ಪ್ರಾಜೆಕ್ಟ್‌ಗಳಿಗೆ ಸಹಿ ಹಾಕಿದ್ದಾರೆ, ಈಗಾಗಲೇ ಒಂದರ ಶೂಟಿಂಗ್ ನಡೆಯುತ್ತಿದೆ. ರಾಜು ಮುರುಗನ್ ನಿರ್ದೇಶನದ ಈ ಚಿತ್ರದಲ್ಲಿ ನಟ ಶಶಿಕುಮಾರ್ ಅವರಿಗೆ ಚೈತ್ರಾ ಜೋಡಿಯಾಗಿದ್ದಾರೆ, 135 ಚಿತ್ರಗಳಲ್ಲಿ ಕಾಣಿಸಿಕೊಂಡಿರುವ ಅನುಭವಿ ತಾರೆಯ ಎದುರು ಅವರ ಚೊಚ್ಚಲ ಸಿನಿಮಾವಾಗಿದೆ.

ಖ್ಯಾತ ಛಾಯಾಗ್ರಾಹಕ ಶಿವಕುಮಾರ್ ಈ ಗ್ರಾಮೀಣ ಕೌಟುಂಬಿಕ ಕಥೆಗೆ ದೃಶ್ಯಗಳನ್ನು ಸಂಯೋಜಿಸುತ್ತಿ್ದಾರೆ, ಪ್ರಸ್ತುತ ಕೋವಿಲ್ಪಟ್ಟಿಯಲ್ಲಿ ಶೂಟಿಂಗ್ ನಡೆಸಲಾಗುತ್ತಿದೆ. ಕನ್ನಡಕ್ಕೆ ಸಂಬಂಧಿಸಿದಂತೆ, ಚೈತ್ರ ಆಚಾರ್ ಕೊನೆಯದಾಗಿ ಕಾಣಿಸಿಕೊಂಡಿದ್ದು ಹ್ಯಾಪಿ ಬರ್ತ್‌ಡೇ ಟು ಮಿ ಸಿನಿಮಾದಲ್ಲಿ, ಇದು ನೇರ OTT ಬಿಡುಗಡೆಯಾಗಿದೆ. ಜೊತೆಗೆ ರೋಹಿತ್ ಪದಕಿಯ ಉತ್ತರಕಾಂಡ ಚಿತ್ರದಲ್ಲೂ ನಟಿಸುತ್ತಿದ್ದಾರೆ. ಇದು ದಿಗಂತ್, ಧನಂಜಯ್ ಮತ್ತು ಐಶ್ವರ್ಯಾ ರಂಗರಾಜನ್ ನಟಿಸಿರುವ ಗ್ಯಾಂಗ್‌ಸ್ಟರ್ ಕಥೆಯುಳ್ಳ ಸಿನಿಮಾವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!