ಪ್ರಕಾಶ್ ರಾಜ್ ಮತ್ತು ಡಾರ್ಲಿಂಗ್ ಕೃಷ್ಣ 
ಸಿನಿಮಾ ಸುದ್ದಿ

ಪ್ರಸ್ತುತ ಸಮಾಜಕ್ಕೆ 'Father' ಸಿನಿಮಾದಂತಹ ಕಥೆ ಬೇಕು: ಹಿರಿಯ ನಟ ಪ್ರಕಾಶ್ ರಾಜ್

ಫಾದರ್ ಸಿನಿಮಾವನ್ನು ರಾಜ್ ಮೋಹನ್ ಬರೆದು ನಿರ್ದೇಶಿಸಿದ್ದು, ತಂದೆ ಮತ್ತು ಮಗನ ನಡುವಿನ ಬಾಂಧವ್ಯದ ಕಥೆಯಾಗಿದೆ. ಈ ಚಿತ್ರದಲ್ಲಿ ಕೃಷ್ಣ ಮತ್ತು ಹಿರಿಯ ನಟ ಪ್ರಕಾಶ್ ರಾಜ್ ಅಭಿನಯಿಸಿದ್ದಾರೆ.

ಆರ್ ಚಂದ್ರು ನೇತೃತ್ವದ ಪ್ರೊಡಕ್ಷನ್ ಹೌಸ್ ಆರ್‌ಸಿ ಸ್ಟುಡಿಯೋಸ್ ಅಡಿಯಲ್ಲಿ ಫಾದರ್ ಸೇರಿದಂತೆ ಆರು ಸಿನಿಮಾಗಳನ್ನು ಘೋಷಿಸಲಾಯಿತು. ಆರ್ ಸಿ ಸ್ಟುಡಿಯೋ ನಿರ್ಮಾಣದ ಮೊದಲ ಸಿನಿಮಾ ಫಾದರ್ ಶೂಟಿಂಗ್ ಅರಮನೆ ನಗರಿ ಮೈಸೂರಿನಲ್ಲಿ ಆರಂಭವಾಗಿದೆ.

ಫಾದರ್ ಸಿನಿಮಾವನ್ನು ರಾಜ್ ಮೋಹನ್ ಬರೆದು ನಿರ್ದೇಶಿಸಿದ್ದು, ತಂದೆ ಮತ್ತು ಮಗನ ನಡುವಿನ ಬಾಂಧವ್ಯದ ಕಥೆಯಾಗಿದೆ. ಈ ಚಿತ್ರದಲ್ಲಿ ಕೃಷ್ಣ ಮತ್ತು ಹಿರಿಯ ನಟ ಪ್ರಕಾಶ್ ರಾಜ್ ಅಭಿನಯಿಸಿದ್ದಾರೆ. ಇದೇ ಮೊದಲ ಬಾರಿಗೆ ಕೃಷ್ಣ ಮತ್ತು ಪ್ರಕಾಶ್ ರಾಜ್ ಪರದೆಯನ್ನು ಹಂಚಿಕೊಳ್ಳುತ್ತಿದ್ದಾರೆ, ಕೃಷ್ಣಾಗೆ ಅಮೃತಾ ಅಯ್ಯಂಗಾರ್ ನಾಯಕಿಯಾಗಿದ್ದಾರೆ.

ಇನ್ನೂ ಸಿನಿಮಾ ಬಗ್ಗೆ ಮಾತನಾಡಿದ ನಟ ಕೃಷ್ಣ, ಈ ಕಥೆ ಕೇಳಿದಾಗ ನನಗಿಂತ ಮೊದಲು ನನ್ನ ಪತ್ನಿ ಮಿಲನಾಗೆ ಇಷ್ಟವಾಯಿತು. ಕಥೆ ಚೆನ್ನಾಗಿದೆ. ನೀವು ಮಾಡಲೇಬೇಕೆಂದು ಮಿಲನ ಹೇಳಿದರು. ಪ್ರಕಾಶ್ ರಾಜ್ ಅವರ ಜೊತೆ ನಟಿಸುವ ಆಸೆಯಿತ್ತು. ಅವರ ಜೊತೆ ಅಭಿನಯಿಸುವಾಗ ಭಯ ಆಗುತ್ತಿತ್ತು. ಎಷ್ಟೋ ಬಾರಿ ಅವರು ಅಭಿನಯಿಸುವುದನ್ನು ನೋಡುತ್ತಾ, ಪ್ರತಿಕ್ರಿಯೆ ಕೊಡುವುದನ್ನೇ ಮರೆತುಬಿಟ್ಟಿರುತ್ತೇನೆ. ‘ಫಾದರ್’ ಜನರ ಮನಸಿನಲ್ಲಿ ಉಳಿಯುವಂತಹ ಚಿತ್ರವಾಗುತ್ತದೆ ಎಂದು ಹೇಳಿದ್ದಾರೆ. ಹಿರಿಯ ನಟ ಪ್ರಕಾಶ್ ರಾಜ್ ಮಾತನಾಡಿ, ‘ಚಂದ್ರು ಜೊತೆಗೆ ನಾನು ಮೊದಲು ‘ಕಬ್ಜ’ ಚಿತ್ರ ಮಾಡಬೇಕಿತ್ತು. ಆದರೆ, ಕಾರಣಾಂತರಗಳಿಂದ ಅದು ಸಾಧ್ಯವಾಗಲಿಲ್ಲ. ಈಗ 'ಫಾದರ್' ಚಿತ್ರದಲ್ಲಿ ಅಭಿನಯಿಸುತ್ತಿದ್ದೇನೆ. ಇದೊಂದು ಮನಸ್ಸಿಗೆ ಹತ್ತಿರವಾಗುವ ಕಥೆ. ತಂದೆ-ಮಗನ ಪ್ರೀತಿಯ ಜೊತೆಗೆ, ಇವತ್ತಿನ ತಂದೆ ಮಕ್ಕಳ ಸಂಬಂಧದ ಬಗ್ಗೆ ಹೇಳಲಾಗಿದೆ.

ಕಥೆ ಕೇಳಿದಾಗ ನನಗೆ ಇದು ಇಂದಿಗೆ ಮುಖ್ಯವಾಗಿ ಬೇಕಾಗಿರುವ ಸಿನಿಮಾ ಎಂದೆನಿಸಿತು. ಇದೊಂದು ಕಾಡುವಂತಹ ಚಿತ್ರ. ಆರ್.ಚಂದ್ರು ಆರ್ ಸಿ ಸ್ಟುಡಿಯೋಸ್ ಮೂಲಕ ಐದು ಚಿತ್ರಗಳನ್ನು ನಿರ್ಮಿಸುತ್ತಿರುವುದು ಖುಷಿಯ ವಿಚಾರ. ನಾನು ಕೂಡ ನಿರ್ಮಾಪಕನಾಗಿ ಹಲವು ಚಿತ್ರಗಳನ್ನು ನಿರ್ಮಿಸಿದ್ದೇನೆ. ಈ ಚಿತ್ರದಲ್ಲಿ ಅಭಿನಯಿಸುತ್ತಿರುವುದು ಹಾಗೂ ನಾನು ಬಹಳ ಇಷ್ಟೊಡುವ ಮೈಸೂರಿನಲ್ಲಿ ಚಿತ್ರೀಕರಣವಾಗುತ್ತಿರುವುದು ಖುಷಿಯಾಗಿದೆ ಎಂದರು.

ಕೇವಲ 100 ರೂಪಾಯಿ ತೆಗೆದುಕೊಂಡು ಗಾಂಧಿನಗರಕ್ಕೆ ಬಂದ ನಾನು, ಇಂದು ಐದು ಸಿನಿಮಾ ನಿರ್ಮಾಣ ಮಾಡುತ್ತಿದ್ದೇನೆ ಎಂದು ಮಾತು ಆರಂಭಿಸಿದ ನಿರ್ಮಾಪಕ ಆರ್. ಚಂದ್ರು, ‘ಇದು ಆರ್.ಸಿ ಸ್ಟುಡಿಯೋಸ್ ಬ್ಯಾನರ್ ನಿರ್ಮಾಣದ ಮೊದಲ ಸಿನಿಮಾ. ಈ ಚಿತ್ರಕ್ಕೆ ಗಾಡ್ ಫಾದರ್ ಪ್ರಕಾಶ್ ರಾಜ್ ಎನ್ನಬಹುದು. ಕೃಷಜೊತೆಗೆ ಈ ಮೊದಲೇ ಸಿನಿಮಾ ಮಾಡಬೇಕಿತ್ತು. ಆದರೆ, ಅದು ಈಗ ಸಾಧ್ಯವಾಗುತ್ತಿದೆ. ಇದು ‘ತಾಜಮಹಲ್’ ತರಹ ಎಮೋಷನ್ ಇರುವಂತ ಚಿತ್ರ. ಇದರಲ್ಲಿ ತಂದೆ-ಮಗನ ಬಾಂಧವ್ಯ ತೋರಿಸಲಾಗುತ್ತಿದ್ದು, ‘ಫಾದರ್’ ಚಿತ್ರ ಎಲ್ಲರಿಗೂ ಇಷ್ಟವಾಗುತ್ತದೆ ಎಂಬ ನಂಬಿಕೆ ಇದೆ. ತಂದೆಯ ಪಾತ್ರದ ಬಗ್ಗೆ ಕೇಳುತ್ತಿದ್ದಂತೆಯೇ, ಈ ಪಾತ್ರವನ್ನು ಪ್ರಕಾಶ್ ರೈ ಮಾಡಿದರೆ ಚೆನ್ನಾಗಿರುತ್ತದೆ ಎಂದೆನಿಸಿತು. ಅವರು ಈ ಚಿತ್ರದಲ್ಲಿ ಅಭಿನಯಿಸಲು ಪ್ರೀತಿಯಿಂದ ಒಪ್ಪಿಕೊಂಡಿದ್ದಾರೆ ಎಂದು ಚಂದ್ರು ತಿಳಿಸಿದ್ದಾರೆ.

ನಮ್ಮೂರಿರಲ್ಲಿ ಚಿತ್ರೀಕರಣ ನಡೆಯುತ್ತಿರುವುದು ಬಹಳ ಖುಷಿಯಾಗಿದೆ. ಪ್ರಕಾಶ್ ರೈ ಅವರ ಜೊತೆಗೆ ನಟಿಸುವ ಆಸೆ ಈಡೇರಿದೆ ಎಂದರು ನಟಿ ಅಮೃತಾ ಅಯ್ಯಂಗಾರ್ ತಿಳಿಸಿದರು. ಚಂದ್ರು ನನ್ನ `ಸಖ ಸಖಿ’ ಚಿತ್ರಕ್ಕೆ ಸಹಾಯಕ ನಿರ್ದೇಶಕರಾಗಿದ್ದರು. ಈಗ ಅವರ ಜೊತೆಗೆ ಕೆಲಸ ಮಾಡುತ್ತಿರುವುದು ಸಂತೋಷದ ವಿಚಾರ. ನಾನು ಕಾರ್ಯಕಾರಿ ನಿರ್ಮಾಪಕ ಎನ್ನುವುದಕ್ಕಿಂತ ಅವರ ಜೊತೆಗಿದ್ದೀನಿ ಎಂದರು ದಯಾಳ್ ಪದ್ಮನಾಭನ್. ‘ಫಾದರ್’ ಚಿತ್ರಕ್ಕೆ ರಾಜ್ ಮೋಹನ್ ಕಥೆ, ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಸುಜ್ಞಾನ್ ಛಾಯಾಗ್ರಹಣ, ‘ಹನುಮಾನ್’ ಖ್ಯಾತಿಯ ಗೌರಾ ಹರಿ ಸಂಗೀತ ನಿರ್ದೇಶನ, ರಘುನಾಥ್ ಸಂಕಲನ, ವಿನೋದ್ ಸಾಹಸ ನಿರ್ದೇಶನ ಹಾಗೂ ಮದನ್ ಹರಿಣಿ, ಸಂತೋಷ್ ಅವರ ನೃತ್ಯ ನಿರ್ದೇಶನ ವಿರುವ ಈ ಚಿತ್ರಕ್ಕೆ ಮಂಜು ಮಾಂಡವ್ಯ ಸಂಭಾಷಣೆ ಬರೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್