ಸದಾನಂದ ಸುವರ್ಣ 
ಸಿನಿಮಾ ಸುದ್ದಿ

'ಘಟಶ್ರಾದ್ಧ' ನಿರ್ಮಾಪಕ ಸದಾನಂದ ಸುವರ್ಣ ವಿಧಿವಶ

ಅವರ ನಿರ್ದೇಶನದ 'ಕೋರ್ಟ್‌ ಮಾರ್ಷಲ್' ನಾಟಕವೂ ರಂಗಾಸಕ್ತರ ಮೆಚ್ಚುಗೆಗೆ ಪಾತ್ರವಾಗಿತ್ತು. ಮುಂಬೈನಲ್ಲಿ ರಾತ್ರಿ ಶಾಲೆಯಲ್ಲಿ ಕಲಿತು, ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು.

ಮಂಗಳೂರು: 'ಘಟಶ್ರಾದ್ಧ' ಹಾಗೂ ಗುಡ್ಡದ ಭೂತ ಧಾರವಾಹಿ ಸೇರಿದಂತೆ ಹಲವು ಜನಪ್ರಿಯ ಸಿನಿಮಾ ನಿರ್ಮಿಸಿದ್ದ ಕನ್ನಡದ ಹೆಸರಾಂತ ನಿರ್ಮಾಪಕರಾದ ಸದಾನಂದ ಸುವರ್ಣ (93) ಅವರು ಮಂಗಳೂರಿನಲ್ಲಿ ನಿಧನರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯವರಾದ ಅವರು 1931, ಡಿಸೆಂಬರ್ 24 ರಂದು ಜನಿಸಿದ್ದರು. ಅವರು ನಿರ್ಮಿಸಿದ ಮೊದಲ ಸಿನಿಮಾ ಘಟಶ್ರಾದ್ಧ. ಗಿರೀಶ್ ಕಾಸರವಳ್ಳಿ ನಿರ್ದೇಶನದ ಮೊದಲ ಸಿನಿಮಾ‌ವಿದು. ಬಳಿಕ ಗಿರೀಶ್ ಕಾಸರವಳ್ಳಿ ನಿರ್ದೇಶಿಸಿದ ಮನೆ, ಕುಬಿ ಮತ್ತು ಇಯಾಲ, ತಬರನ ಕಥೆ ಸಿನಿಮಾಗಳ ಕಾರ್ಯನಿರ್ವಾಹಕ ನಿರ್ಮಾಪಕರಾಗಿದ್ದರು. ದೂರದರ್ಶನಕ್ಕೆ ಗುಡ್ಡದ ಭೂತ ಧಾರಾವಾಹಿ ನಿರ್ಮಿಸಿ, ನಿರ್ದೇಶಿಸಿದ್ದರು. ಇದು ಪ್ರಕಾಶ್ ರೈ ಅವರಿಗೆ ಜನಪ್ರಿಯತೆ ತಂದು ಕೊಟ್ಟಿತು. ದೂರದರ್ಶನಕ್ಕೆ‌ ಅವರ ನಿರ್ದೇಶನದ, ಶಿವರಾಮ ಕಾರಂತ ಅವರ ಸಂದರ್ಶನದ 'ಹುಚ್ಚು ಮನಸ್ಸಿನ ಹತ್ತು ಮುಖಗಳು' ಹತ್ತು ಕಂತುಗಳಲ್ಲಿ ಪ್ರಸಾರವಾಗಿತ್ತು.

ಅವರ ನಿರ್ದೇಶನದ 'ಕೋರ್ಟ್‌ ಮಾರ್ಷಲ್' ನಾಟಕವೂ ರಂಗಾಸಕ್ತರ ಮೆಚ್ಚುಗೆಗೆ ಪಾತ್ರವಾಗಿತ್ತು. ಮುಂಬೈನಲ್ಲಿ ರಾತ್ರಿ ಶಾಲೆಯಲ್ಲಿ ಕಲಿತು, ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು. ರಂಗಭೂಮಿಯಲ್ಲಿಯೂ ಸಹ ಸದಾನಂದ ಸುವರ್ಣ ಸಕ್ರಿಯರಾಗಿದ್ದರು, ಇದರ ಜೊತೆಗೆ ‘ಉರುಳು’, ‘ಧರ್ಮಚಕ್ರ’, ‘ಸುಳಿ’, ‘ಡೊಂಕುಬಾಲ’ ಇನ್ನೂ ಕೆಲವು ನಾಟಕಗಳನ್ನು ಸದಾನಂದ ಸುವರ್ಣ ನಿರ್ದೇಶಿಸಿದ್ದರು. ಸದಾನಂದ ಸುವರ್ಣ ನಿರ್ಮಾಣ ಮಾಡಿದ್ದ ‘ಘಟಶ್ರಾದ್ಧ’ ಸಿನಿಮಾಕ್ಕೆ ಕೇಂದ್ರ ಸರ್ಕಾರವು ಸುವರ್ಣ ಕಮಲ ನೀಡಿತ್ತು.

ಚಿಕ್ಕ ವಯಸ್ಸಿನಲ್ಲೇ ಮಂಗಳೂರು ರಂಗಭೂಮಿಗೆ ಸೇರಿದ ಅವರು ತಮ್ಮ ಸೃಜನಶೀಲ ಪ್ರತಿಭೆಯ ಚಿನ್ನದ ಛಾಪು ಮೂಡಿಸಿದರು. ‘ಉರುಳು’, ‘ಕೋರ್ಟ್ ಮಾರ್ಷಲ್’, ‘ಮಳೆ ನಿಂತ ಮೇಲೆ’ ಮುಂತಾದ ನಾಟಕಗಳನ್ನು ನಿರ್ದೇಶಿಸಿದ್ದಾರೆ.ಸುವರ್ಣ ಅವರು ಕರ್ನಾಟಕದಲ್ಲಿ ರಂಗಭೂಮಿ ಮತ್ತು ಚಿತ್ರರಂಗವನ್ನು ಶ್ರೀಮಂತಗೊಳಿಸಿದ ನೂರಾರು ಯುವ ಮತ್ತು ಹಿರಿಯ ಕಲಾವಿದರನ್ನು ಬೆಳೆಸಿದ ಅನನ್ಯ ರಂಗಭೂಮಿ ದಾರ್ಶನಿಕ ಎಂದು ಪರಿಗಣಿಸಲ್ಪಟ್ಟರು.

ಸದಾನಂದ ಸುವರ್ಣ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಹಿರಿಯ ರಂಗಕರ್ಮಿ, ಚಲನಚಿತ್ರ ನಿರ್ದೇಶಕ- ನಿರ್ಮಾಪಕ ಸದಾನಂದ ಸುವರ್ಣರ ನಿಧನದ ಸುದ್ದಿ ಕೇಳಿ ದು:ಖವಾಯಿತು. ಸದಾನಂದ ಸುವರ್ಣರು ನಿರ್ಮಿಸಿದ್ದ ‘‘ಘಟಶ್ರಾದ್ಧ’’ ಚಿತ್ರ ಮತ್ತು ನಿರ್ದೇಶಿಸಿದ್ದ ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ ‘’ಕುಬಿ ಮತ್ತು ಇಯಾಳ’’ ಕತೆಯನ್ನಾಧರಿಸಿದ ಚಿತ್ರಗಳೆರಡೂ ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿಗಳಿಗೆ ಭಾಜನವಾಗಿವೆ.

ನೂರಾರು ಕನ್ನಡ ಮತ್ತು ತುಳು ನಾಟಕಗಳನ್ನು ನಿರ್ದೇಶಿಸಿದ್ದ ಸುವರ್ಣರ ರಂಗಗರಡಿಯಿಂದ ಬಂದಿರುವ ಹಲವಾರು ಪ್ರತಿಭಾವಂತ ನಟ-ನಟಿಯರು ಕಲಾಜಗತ್ತಿನಲ್ಲಿ ಬದುಕು ಕಟ್ಟಿಕೊಂಡಿದ್ದಾರೆ. ಸದಾನಂದ ಸುವರ್ಣರನ್ನು ಕಳೆದುಕೊಂಡಿರುವ ಅವರ ಶಿಷ್ಯವರ್ಗ ಮತ್ತು ಅಭಿಮಾನಿ ಬಳಗದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT