ಮ್ಯಾಡಿ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

'ಮ್ಯಾಡಿ' ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಧನುಷ್ ಕುಮಾರ್ ಪದಾರ್ಪಣೆ

ನಾನು ಹೀರೋ ಆಗಬೇಕೆಂಬ ನನ್ನ ಕನಸಿಗೆ ಮಾರ್ಗದರ್ಶನ ನೀಡಿದ್ದೆ ನನ್ನ ಗುರು ‘ಭರ್ಜರಿ’ ಚೇತನ್ ಕುಮಾರ್.

ನಟ ಶಿವರಾಜಕುಮಾರ್ ಅಪ್ಪಟ ಅಭಿಮಾನಿಯಾಗಿರುವ ಧನುಷ್ ಕುಮಾರ್ ಮ್ಯಾಡಿ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಮಹೇಶ್ಮತಿ ಬ್ಯಾನರ್‌ ಅಡಿಯಲ್ಲಿ ಸರಸ್ವತಿ.ಆರ್.ನಾಗೇಶ್ ನಿರ್ಮಿಸುತ್ತಿರುವ ಚಿತ್ರಕ್ಕೆ ನಾಗಭೂಷಣ್ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ.

ಇತ್ತೀಚೆಗಷ್ಟೇ ಚಿತ್ರದ ಪ್ರಚಾರಕ್ಕಾಗಿ ಸಿದ್ಧಪಡಿಸಿದ ಹಾಡೊಂದು ಬಿಡುಗಡೆಗೊಂಡಿದೆ. ಮಾಜಿ ಸಚಿವರಾದ ಹೆಚ್.ಎಂ.ರೇವಣ್ಣ, ನಿರ್ಮಾಪಕ ಉಮಾಪತಿ ಶ್ರೀನಿವಾಸ್‌ ಗೌಡ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದು ತಂಡಕ್ಕೆ ಶುಭ ಕೋರಿದರು.

ನನಗೆ ಬಾಲ್ಯದಿಂದಲೂ ಸಿನಿಮಾ ಬಗ್ಗೆ ಆಸಕ್ತಿ. ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅಭಿಮಾನಿ. ನಾನು ಹೀರೋ ಆಗಬೇಕೆಂಬ ನನ್ನ ಕನಸಿಗೆ ಮಾರ್ಗದರ್ಶನ ನೀಡಿದ್ದೆ ನನ್ನ ಗುರು ‘ಭರ್ಜರಿ’ ಚೇತನ್ ಕುಮಾರ್. ಡ್ಯಾನ್ಸ್, ಫೈಟ್, ನಟನೆ ಕಲಿತು ಈಗ ಜನರ ಮುಂದೆ ಬರುತ್ತಿದ್ದೇನೆ. ಇದರಲ್ಲಿ ನನ್ನ ಪಾತ್ರ ಕೂಡ ಒಂದು ರೀತಿ ಮ್ಯಾಡ್ ಆಗಿ ಇರುತ್ತದೆ. ಇದೊಂದು ವಿಭಿನ್ನ ಗ್ಯಾಂಗ್‌ಸ್ಟಾರ್‌ ಚಿತ್ರ’ ಎಂದು ಮಾಹಿತಿ ನೀಡಿದರು ನಾಯಕ ಧನುಷ್‌.

ಧನುಷ್ ಕುಮಾರ್ ಹತ್ತು ವರ್ಷಗಳಿಂದ ಆತ್ಮೀಯ ಸ್ನೇಹಿತರಾಗಿದ್ದಾರೆ ಮತ್ತು ನಿರ್ದೇಶಕ ನಾಗಭೂಷಣ್ ಹಲವು ವರ್ಷಗಳಿಂದ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಚಿತ್ರಕ್ಕೆ ಪ್ರಮೋಶನಲ್ ಸಾಂಗ್ ಬರೆದು ಹಾಗೂ ಗಾಯಕರಾಗಿ ಹಾಡಿರುವ ಚೇತನ್ ಕುಮಾರ್ ಮಾತನಾಡುತ್ತಾ, ” ನನಗೆ ಬರೆಯುವುದು ಅಂದರೆ ಇಷ್ಟ. ಈ ‘ಜೋರು ಜೋರು ಸಿಕ್ಕಾಪಟ್ಟೆ ಜೋರು’… ಎಂಬ ಹಾಡು ಆರು ವರ್ಷನ್ ಬದಲಾವಣೆ ನಂತರ ಸುಂದರವಾಗಿ ಮೂಡಿ ಬಂದಿದೆ. ನಾನು ಟ್ರ್ಯಾಕ್ ಮಾತ್ರ ಹಾಡಿದ್ದೆ. ಅದನ್ನೇ ಈಗ ತಂಡ ಬಳಸಿಕೊಂಡು ಸಾಂಗ್ ಹೊರ ತಂದಿದೆ. ಈ ಸಾಂಗ್ ಗೆ ಹಾಕಿರುವ ಎಫರ್ಟ್ ಸ್ಕ್ರೀನ್ ಮೇಲೆ ಕಾಣುತ್ತೆ.ಈ ಹಾಡಿಗೆ ಅದಿತಿ ಸಾಗರ್ ಕೂಡ ಧ್ವನಿ ನೀಡಿದ್ದಾರೆ.

ಈ ಗ್ಯಾಂಗ್‌ಸ್ಟರ್ ಕಥೆಯನ್ನು ಬೆಂಗಳೂರು, ಉತ್ತರ ಕರ್ನಾಟಕ ಮತ್ತು ಕೋಲಾರದಲ್ಲಿ ಚಿತ್ರೀಕರಿಸಲಾಗುತ್ತಿದ್ದು, ಆಕ್ಷನ್, ಪ್ರೀತಿ ಮತ್ತು ಕೌಟುಂಬಿಕ ನಾಟಕವಾಗಿದೆ. ತಾಂತ್ರಿಕ ತಂಡದಲ್ಲಿ, ಮ್ಯಾಡಿ ಲವಿತ್ ಅವರ ಛಾಯಾಗ್ರಹಣ, ವಿಜಯ್ ಕುಮಾರ್ ಅವರ ಸಂಕಲನ ಮತ್ತು ಐದು ಹಾಡುಗಳನ್ನು ಹೊಂದಿದೆ, ಧರ್ಮವಿಶ್ ಸಂಗೀತ ಸಂಯೋಜಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

SIR ಅಕ್ರಮ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ