ಸಿನಿಮಾ ಸುದ್ದಿ

ರಾಜ್ ಬಿ ಶೆಟ್ಟಿ ನಟನೆಯ 'ರೂಪಾಂತರ' ಸಿನಿಮಾ ರಿಲೀಸ್ ಡೇಟ್ ಫಿಕ್ಸ್

ರಾಜ್ ಬಿ ಶೆಟ್ಟಿ ಅವರ ಲೈಟರ್ ಬುದ್ಧ ಫಿಲಂಸ್ ಪ್ರಸ್ತುತಪಡಿಸಿ ವಿತರಿಸಿರುವ ಈ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ಈಗಾಗಲೇ ಗಮನ ಸೆಳೆದಿದೆ.

ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ ‘ರೂಪಾಂತರ’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದೆ‌. ಹಲವು ಬಗೆಯ ವ್ಯಕ್ತಿಗಳು ರೂಪಾಂತರಗೊಳ್ಳುವ ಕಥೆಯನ್ನು ಹೊಂದಿರುವ ಈ ಚಿತ್ರ ಜುಲೈ 26 ರಂದು ಬಿಡುಗಡೆಯಾಗುತ್ತಿದೆ.

ರೂಪಾಂತರ ಸಿನಿಮಾವನ್ನು ಮಿಥಿಲೇಶ್ ಎಡವಲತ್ ನಿರ್ದೇಶಿಸಿದ್ದಾರೆ. ಒಬ್ಬ ವ್ಯಕ್ತಿಯ ಆಯ್ಕೆಗಳು ಇತರರ ಜೀವನದಲ್ಲಿ ಹೇಗೆ ಪ್ರತಿಧ್ವನಿಸುತ್ತವೆ ಎಂಬುದನ್ನು ಪ್ರದರ್ಶಿಸುವ ಪಾತ್ರಗಳ ಹಾದಿಗಳು ಒಮ್ಮುಖವಾಗುವ ಕಥೆ ಎಂದು ನಿರ್ದೇಶಕರು ಇದನ್ನು ವಿವರಿಸುತ್ತಾರೆ. ರಾಜ್ ಬಿ ಶೆಟ್ಟಿ ಅವರ ಲೈಟರ್ ಬುದ್ಧ ಫಿಲಂಸ್ ಪ್ರಸ್ತುತಪಡಿಸಿ ವಿತರಿಸಿರುವ ಈ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ಈಗಾಗಲೇ ಗಮನ ಸೆಳೆದಿದೆ.

ನಾವು ಮಂಗಳೂರಿನಲ್ಲಿ ಸಿನಿಮಾ ಮಾಡಬೇಕಾದರೆ ಮಾರ್ಕೇಟ್ ಬೇಡಿಕೆಗೂ ಹೊರತಾದ ಒಳ್ಳೆಯ ಸಿನಿಮಾಗಳನ್ನು ಮಾಡಬೇಕು. ಆಗ ಜನರು ಸಿನಿಮಾಗಳನ್ನು ನೋಡುತ್ತಾರೆ ಎಂಬ ಉದ್ದೇಶದಿಂದ ಸಿನಿಮಾ ಮಾಡಲು ಆರಂಭಿಸಿದ್ದೆವು. ಅದೇ ಉದ್ದೇಶದಿಂದ ಈ ಸಿನಿಮಾವನ್ನು ಮಾಡಿದ್ದೇವೆ. ‘ರೂಪಾಂತರ’ ನನಗೆ ಬಹಳ ಇಷ್ಟವಾದ ಸಿನಿಮಾ. ಏಕೆಂದರೆ ಈ ಚಿತ್ರದಲ್ಲಿ ನಾನು ನಟ ಮಾತ್ರ. ಸಂಭಾಷಣೆಗೆ ಸ್ವಲ್ಪ ಸಹಾಯ ಮಾಡಿದ್ದೇನೆ. ಮಿಕ್ಕಿದೆಲ್ಲಾ ಈ ತಂಡದ ಕನಸು. ನನ್ನ ಬಿಟ್ಟು ಬೇರೆ ಮುಖ್ಯಪಾತ್ರಗಳು ಈ ಚಿತ್ರದಲ್ಲಿದೆ. ‘ಒಂದು ಮೊಟ್ಟೆಯ ಕಥೆ’ ಚಿತ್ರ ಮಾಡಿದ ತಂಡದೊಂದಿಗೆ ಈ ಚಿತ್ರ ಮಾಡಿರುವುದು ಖುಷಿಯಾಗಿದೆ’ ಎಂದು ರಾಜ್ ಬಿ ಶೆಟ್ಟಿ ತಿಳಿಸಿದ್ದಾರೆ.

ಮಂಗಳೂರಿನವರು ಮಂಗಳೂರಿಗರಿಗೆ ಸಿನಿಮಾ ಮಾಡುತ್ತಾರೆ ಎಂಬ ಮಾತಿದೆ‌. ಆದರೆ ಈ ಚಿತ್ರವನ್ನು ನಾವು ಬೆಂಗಳೂರಿನಲ್ಲಿ ಮಾಡಿದ್ದೇವೆ‌. ರಾಜ್ ಬಿ ಶೆಟ್ಟಿ ಅವರನ್ನು ಹೊರತುಪಡಿಸಿ ಮಿಕ್ಕೆಲ್ಲ ನಟರು ಬೇರೆ ಬೇರೆ ಪ್ರಾಂತ್ಯದವರು’ ನಿರ್ಮಾಪಕ ಸುಹಾನ್ ಪ್ರಸಾದ್ ಹೇಳಿದರು.

ಸೋಮಶೇಖರ್ ಬೋಲೇಗಾಂವ್, ಲೇಖಾ ನಾಯ್ಡು, ಹನುಮ್ಮಕ್ಕ, ಭರತ್ ಜಿ.ಬಿ, ಅಂಜನ್ ಭಾರಧ್ವಾಜ್ ಮತ್ತಿರರ ತಾರಗಣ ಈ ಚಿತ್ರಕ್ಕಿದೆ. ಮಿದುನ್‌ ಮುಕುಂದನ್‌ ಸಂಗೀತ, ಪ್ರವೀಣ್ ಶ್ರೀಯಾನ್ ಛಾಯಾಚಿತ್ರಗ್ರಹಣ, ಭುವನೇಶ್ ಮಣಿವಣ್ಣನ್ ಸಂಕಲನ ಚಿತ್ರಕ್ಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್