ಮಾರ್ಟಿನ್ ಚಿತ್ರ 
ಸಿನಿಮಾ ಸುದ್ದಿ

Dhruva Sarja ಅಭಿನಯದ 'ಮಾರ್ಟಿನ್'ಗೆ ಧೋಖಾ; ಗ್ರಾಫಿಕ್ ಡಿಸೈನರ್ ಬಂಧನ

ನಟ ಧ್ರುವ ಸರ್ಜಾ ಅಭಿನಯದ ಮಾರ್ಟಿನ್ ಚಿತ್ರಕ್ಕೆ ಗ್ರಾಫಿಕ್ಸ್ ಮಾಡುವುದಾಗಿ ಹೇಳಿ ಸುಮಾರು 3.20 ಕೋಟಿ ರೂ ಹಣ ವಂಚನೆ ಮಾಡಿದ ಆರೋಪದ ಮೇರೆಗೆ ಗ್ರಾಫಿಕ್ಸ್ ವಿನ್ಯಾಸಕರನೊಬ್ಬನ್ನು ಬಸವೇಶ್ವರನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ನಟ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ಚಿತ್ರ ಮಾರ್ಟಿನ್ ಚಿತ್ರಕ್ಕೆ ಗ್ರಾಫಿಕ್ಸ್ ಮಾಡುವುದಾಗಿ ಕೋಟ್ಯಂತರ ರೂ ಹಣ ವಂಚನೆ ಮಾಡಿದ್ದ ಆರೋಪದ ಮೇರೆಗೆ ಗ್ರಾಫಿಕ್ಸ್ ವಿನ್ಯಾಸಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಹೌದು.. ನಟ ಧ್ರುವ ಸರ್ಜಾ ಅಭಿನಯದ ಮಾರ್ಟಿನ್ ಚಿತ್ರಕ್ಕೆ ಗ್ರಾಫಿಕ್ಸ್ ಮಾಡುವುದಾಗಿ ಹೇಳಿ ಸುಮಾರು 3.20 ಕೋಟಿ ರೂ ಹಣ ವಂಚನೆ ಮಾಡಿದ ಆರೋಪದ ಮೇರೆಗೆ ಗ್ರಾಫಿಕ್ಸ್ ವಿನ್ಯಾಸಕರನೊಬ್ಬನ್ನು ಬಸವೇಶ್ವರನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ ಮಹದೇವಪುರದ ನಿವಾಸಿ ಸತ್ಯರೆಡ್ಡಿ ಎಂಬುವವರನ್ನು ಬಂಧಿಸಲಾಗಿದ್ದು, ಚಿತ್ರತಂಡದ ದೂರಿನ ಮೇರೆಗೆ ಈತನನ್ನು ಬಂಧಿಸಲಾಗಿದೆ ಎನ್ನಲಾಗಿದೆ.

ಈ ವಂಚನೆ ಸಂಬಂಧ ಬಸವೇಶ್ವರನಗರ ಠಾಣೆಗೆ ಮಾರ್ಟಿನ್ ಚಲನಚಿತ್ರದ ನಿರ್ಮಾಪಕ ಉದಯ್‌ ಮೆಹ್ತಾ ದೂರು ನೀಡಿದ್ದರು. ಈ ವಂಚನೆ ಪ್ರಕರಣ ದಾಖಲಾದ ಬಳಿಕ ನಗರ ತೊರೆದು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಆರೋಪಿ ತಲೆಮರೆಸಿಕೊಂಡಿದ್ದ. ಇದೀಗ ಕಾರ್ಯಾಚರಣೆ ನಡೆಸಿದ ಪೊಲೀಸರು ಆತನನ್ನು ಬಂಧಿಸಿ ಕರೆ ತಂದಿದ್ದಾರೆ ಎನ್ನಲಾಗಿದೆ.

ಧ್ರುವ ಸರ್ಜಾ ನಟನೆಯ ಮಾರ್ಟಿನ್‌ ಸಿನಿಮಾಗೆ ವಿಶೇಷ ಗ್ರಾಫಿಕ್ಸ್ ವಿನ್ಯಾಸಕ್ಕೆ ಸತ್ಯರೆಡ್ಡಿ ಜತೆ ನಿರ್ಮಾಪಕ ಮೆಹ್ತಾ ಒಪ್ಪಂದ ಮಾಡಿಕೊಂಡಿದ್ದು, ಅಂತೆಯೇ ಆತನಿಗೆ 3.20 ಕೋಟಿ ರೂ ಹಣನ್ನು ಬ್ಯಾಂಕ್ ಮೂಲಕ ಮೆಹ್ತಾ ಪಾವತಿಸಿದ್ದರು. ಆದರೆ ಹಣ ಸ್ವೀಕರಿಸಿದ ಬಳಿಕ ಪೂರ್ವ ಒಪ್ಪಂದಂತೆ ಕೆಲಸ ಮಾಡದೆ ಸತ್ಯ ರೆಡ್ಡಿ ವಂಚಿಸಿದ್ದ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT