ವಿನೋದ್ ವಿ ದೊಂಡಾಲೆ 
ಸಿನಿಮಾ ಸುದ್ದಿ

ಬೆಂಗಳೂರು: ಕನ್ನಡ ಕಿರುತೆರೆ ನಿರ್ದೇಶಕ ವಿನೋದ್ ವಿ. ದೊಂಡಾಲೆ ನೇಣಿಗೆ ಶರಣು!

ಸದ್ಯ ನಿನಾಸಮ್ ಸತೀಶ್ ನಟನೆಯ ʻಅಶೋಕ ಬ್ಲೇಡ್ʼ ಚಿತ್ರ ನಿರ್ದೇಶನಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಮುಂದಿನ ವಾರದಿಂದ ಚಿತ್ರೀಕರಣ ಶುರು ಮಾಡಬೇಕಿತ್ತು. ಕಳೆದ ಎರಡು ವರ್ಷಗಳಿಂದಲೂ ಚಿತ್ರದ ಶೂಟಿಂಗ್ ಕುಂಟುತ್ತಲೇ ಸಾಗಿತ್ತು.

ಬೆಂಗಳೂರು: ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ʻಕರಿಮಣಿʼ, ʻಶಾಂತಂ ಪಾಪಂʼ ಸೇರಿದಂತೆ ಹಲವು ಧಾರವಾಹಿಗಳಿಗೆ ವಿನೋದ್ ನಿರ್ದೇಶನ ಮಾಡಿದ್ದರು.

ಸದ್ಯ ನಿನಾಸಮ್ ಸತೀಶ್ ನಟನೆಯ ʻಅಶೋಕ ಬ್ಲೇಡ್ʼ ಚಿತ್ರ ನಿರ್ದೇಶನಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಮುಂದಿನ ವಾರದಿಂದ ಚಿತ್ರೀಕರಣ ಶುರು ಮಾಡಬೇಕಿತ್ತು. ಕಳೆದ ಎರಡು ವರ್ಷಗಳಿಂದಲೂ ಚಿತ್ರದ ಶೂಟಿಂಗ್ ಕುಂಟುತ್ತಲೇ ಸಾಗಿತ್ತು. ನಿರ್ಮಾಪಕರಾಗಿದ್ದರಿಂದ ಸಾಲದ ಸುಳಿಗೆ ಸಿಲುಕಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ವಿನೋದ್ ವಿ ದೋಂಡಾಲೆ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಿರ್ದೇಶಕ. ಪಿ.ಶೇಷಾದ್ರಿ, ಟಿ.ಎನ್, ಸೀತಾರಾಂ ಅವರ ಜೊತೆ ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಸಂಚಿಕೆ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ನಾಗರಬಾವಿಯಲ್ಲಿ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸದ್ಯ ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. ಅತಿಥಿ, ಬೇರು, ತುತ್ತೂರಿ, ವಿಮುಕ್ತಿ ಸೇರಿದಂತೆ ಹಲವು ಚಿತ್ರಗಳಲ್ಲಿ ವಿನೋದ್ ಕೆಲಸ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!