'ಇದು ಎಂಥ ಲೋಕವಯ್ಯಾ' ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

'ಇದು ಎಂಥ ಲೋಕವಯ್ಯಾ' ಸಿನಿಮಾ ಆಗಸ್ಟ್ 9ಕ್ಕೆ ರಿಲೀಸ್

ಇದು ಎಂಥಾ ಲೋಕವಯ್ಯ ಕರ್ನಾಟಕ-ಕೇರಳ ಗಡಿಯಲ್ಲಿರುವ ಆಕರ್ಷಕ ಹಳ್ಳಿಗಳಲ್ಲಿ ನಡೆಯುವ ಸಾಮಾಜಿಕ ವಿಡಂಬನಾತ್ಮಕ ನಾಟಕವಾಗಿದೆ. ಸಿನಿಮಾವು ಎರಡು ದಿನಗಳಲ್ಲಿ ನಡೆಯುವ ಘಟನೆಗಳೊಂದಿಗೆ ಆರಂಭವಾಗುತ್ತದೆ.

ಪ್ರಸಿದ್ಧ ಮಲಯಾಳಂ ನಿರ್ದೇಶಕ ಜಿಯೋ ಬೇಬಿ ಮತ್ತು ಸಿತೇಶ್ ಸಿ ಗೋವಿಂದ್ ನಿರ್ದೇಶನದ 'ಇದು ಎಂಥಾ ಲೋಕವಯ್ಯ' ಎಂಬ ಕನ್ನಡ ಸಿನಿಮಾ ಆಗಸ್ಟ್ 9 ರಂದು ಬಿಡುಗಡೆಯಾಗಲಿದೆ.

ದಿ ಗ್ರೇಟ್ ಇಂಡಿಯನ್ ಕಿಚನ್ ಮತ್ತು ಮಮ್ಮುಟ್ಟಿ ಮತ್ತು ಜ್ಯೋತಿಕಾ ನಟಿಸಿದ ಕಾತಲ್ - ದಿ ಕೋರ್ ನಂತಹ ಹಿಟ್ ಚಿತ್ರಗಳೊಂದಿಗೆ ಮಲಯಾಳಂ ಚಿತ್ರರಂಗದಲ್ಲಿ ಪ್ರಬಲವಾದ ಕಥೆಯನ್ನು ಪ್ರೇಕ್ಷಕರ ಮುಂದಿಟ್ಟು ಸೈ ಎನಿಸಿಕೊಂಡಿರುವ ಜಿಯೋ ಬೇಬಿ, ಕನ್ನಡಕ್ಕೆ ತಮ್ಮ ಪ್ರತಿಭೆಯನ್ನು ಪರಿಚಯಿಸುತ್ತಿದ್ದಾರೆ. ಈ ಮೂಲಕ ಎರಡು ಪ್ರಾದೇಶಿಕ ಚಲನಚಿತ್ರ ಉದ್ಯಮಗಳ ನಡುವಿನ ಸೌಹಾರ್ದಕ್ಕೆ ಮತ್ತಷ್ಟಿ ಪುಷ್ಟಿ ನೀಡುತ್ತಿದ್ದಾರೆ. ಇದು ಎಂಥಾ ಲೋಕವಯ್ಯ ಕರ್ನಾಟಕ-ಕೇರಳ ಗಡಿಯಲ್ಲಿರುವ ಆಕರ್ಷಕ ಹಳ್ಳಿಗಳಲ್ಲಿ ನಡೆಯುವ ಸಾಮಾಜಿಕ ವಿಡಂಬನಾತ್ಮಕ ನಾಟಕವಾಗಿದೆ. ಸಿನಿಮಾವು ಎರಡು ದಿನಗಳಲ್ಲಿ ನಡೆಯುವ ಘಟನೆಗಳೊಂದಿಗೆ ಆರಂಭವಾಗುತ್ತದೆ, ಇಲ್ಲಿನ ಪಾತ್ರಗಳ ಜೀವನದಲ್ಲಿ ಉಂಟಾಗುವ ಕೆಲವು ಆಳವಾದ ಬದಲಾವಣೆಗಳಿಗೆ ಕಾರಣವಾಗುವ ಘಟನೆಗಳು ಈ ಚಿತ್ರದಲ್ಲಿವೆ.

ಚಿತ್ರವು ಕನ್ನಡ, ಮಲಯಾಳಂ, ತುಳು, ಕೊಂಕಣಿ ಮತ್ತು ಬ್ಯಾರಿ ಭಾಷೆಗಳ ವಿಶಿಷ್ಟ ಮಿಶ್ರಣವನ್ನು ಹೊಂದಿದೆ, ಇದು ಗಡಿ ಪ್ರದೇಶದ ಶ್ರೀಮಂತ ಸಾಂಸ್ಕೃತಿಕ ವೈವಿಧ್ಯತೆಯನ್ನು ಪ್ರದರ್ಶಿಸುತ್ತದೆ. ಚಲನಚಿತ್ರದಲ್ಲಿನ ಹಾಡುಗಳು ಮಿಶ್ರ ಭಾಷಾ ಅಂಶಗಳನ್ನು ಒಳಗೊಂಡಿದ್ದು ಮತ್ತಷ್ಟು ಆಕರ್ಷಣೆಯನ್ನು ಹೆಚ್ಚಿಸುತ್ತವೆ. ಸಿತೇಶ್ ಸಿ ಗೋವಿಂದ್ ಅವರು ಕರ್ನಾಟಕ-ಕೇರಳ ಗಡಿಯ ಸಾಂಸ್ಕೃತಿಕ ಸತ್ವ ಮತ್ತು ಅಲ್ಲಿನ ಜನರ ವಿಶಿಷ್ಟ ರೀತಿಯ ನಂಬಿಕೆಗಳನ್ನು ಹೊರತರುವ ಒಳನೋಟವುಳ್ಳ ಸಾಮಾಜಿಕ ವ್ಯಾಖ್ಯಾನವನ್ನು ತಿಳಿಯಾದ ಹಾಸ್ಯದೊಂದಿಗೆ ಸಮತೋಲನಗೊಳಿಸಿ ಕಥೆಯನ್ನು ರಚಿಸಿದ್ದಾರೆ.ಜಿಯೋ ಬೇಬಿ ಮತ್ತು ಸಿತೇಶ್ ಸಿ ಗೋವಿಂದ್ ನಡುವಿನ ಸಹಯೋಗವು ಚಲನಚಿತ್ರ ರಂಗದಲ್ಲಿ ಸಾಕಷ್ಟು ನಿರೀಕ್ಷೆ ಸೃಷ್ಟಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT