ವಂಶಿ ಮತ್ತು ರಚನಾ ಇಂದರ್ 
ಸಿನಿಮಾ ಸುದ್ದಿ

ನಿವೇದಿತಾ ಶಿವರಾಜ್‌ಕುಮಾರ್‌ ನಿರ್ಮಾಣದ 'ಫೈರ್ ಫ್ಲೈ' ಸಿನಿಮಾದಲ್ಲಿ ವಂಶಿಗೆ ರಚನಾ ಇಂದರ್ ಜೋಡಿ!

ವಂಶಿ ತುಂಬಾ ಹಾರ್ಡ್ ವರ್ಕ್ ಮಾಡಿದ್ದಾರೆ. ದೀಪಾವಳಿಗೆ ನಮ್ಮ ಚಿತ್ರ ತೆರೆಗೆ ಬರುತ್ತಿದೆ ಎಂದಿದ್ದಾರೆ. ಫೈರ್ ಫ್ಲೈ ಸಿನಿಮಾವನ್ನು ಯುವ ನಟ ವಂಶಿ ಡೈರೆಕ್ಟ್ ಮಾಡುತ್ತಿದ್ದಾರೆ.

ಹಿರಿಯ ನಟ ಶಿವರಾಜಕುಮಾರ್ ಅವರ ಪುತ್ರಿ ನಿವೇದಿತಾ ಶಿವರಾಜಕುಮಾರ್ ನಿರ್ಮಿಸುತ್ತಿರುವ ಮುಂಬರುವ ಚಿತ್ರ ಫೈರ್ ಫ್ಲೈ ಚಿತ್ರದಲ್ಲಿ ಯುವ ಪ್ರತಿಭೆ ವಂಶಿ ನಟಿಸಿ ನಿರ್ದೇಶಿಸುತ್ತಿದ್ದಾರೆ. ಫೈರ್ ಫ್ಲೈ ನಲ್ಲಿ ಸುಧಾರಾಣಿ, ಅಚ್ಯುತ್ ಕುಮಾರ್ ಮತ್ತು ಶೀತಲ್ ಶೆಟ್ಟಿ ಮುಂತಾದವರು ನಟಿಸುತ್ತಿದ್ದಾರೆ.

ಈಗ, ಲವ್ ಮಾಕ್‌ಟೇಲ್, ಹರಿಕಥೆ ಅಲ್ಲ ಗಿರಿಕಥೆ, ಟ್ರಿಬಲ್ ರೈಡಿಂಗ್, ಲವ್ 360 ಮತ್ತು ಇತ್ತೀಚಿನ ನಾಟ್ ಔಟ್‌ನಂತಹ ಚಿತ್ರಗಳಲ್ಲಿನ ಪಾತ್ರಗಳಿಗೆ ಹೆಸರುವಾಸಿಯಾಗಿರುವ ರಚನಾ ಇಂದರ್, ಫೈರ್‌ಫ್ಲೈನಲ್ಲಿ ವಂಶಿಗೆ ಜೋಡಿಯಾಗಲಿದ್ದಾರೆ ಎಂದು ನಿರ್ಮಾಪಕರು ಘೋಷಿಸಿದ್ದಾರೆ.

ನಿವೇದಿತಾ ಶಿವರಾಜ್ ಕುಮಾರ್ ಅವರು ಅದ್ಭುತ ಕೆಲಸ ಮಾಡುತ್ತಿದ್ದಾರೆ. ಇಡೀ ತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ. ಸಿನಿಮಾದಲ್ಲಿ ನೇಹಾ ಎಂಬ ಪಾತ್ರ ಮಾಡಿದ್ದೇನೆ. ನೇಹಾ ಬದುಕನ್ನು ತುಂಬಾ ಇಷ್ಟಪಡುತ್ತಾಳೆ. ಎಂಜಾಯ್ ಮಾಡುತ್ತಾಳೆ. ಭವಿಷ್ಯದ ಬಗ್ಗೆ ಯೋಚನೆ ಮಾಡೋದಿಲ್ಲ. ಸಿನಿಮಾವನ್ನು ನಾನು ನೋಡಲು ಕಾತರಳಾಗಿದ್ದಾನೆ. ಚಿತ್ರದ ಒಂದಷ್ಟು ಕ್ಲಿಪ್ ನೋಡಿದಾಗ ಮನರಂಜನೆ ನೀಡುವ ಸಿನಿಮಾ ಎನಿಸಿತು. ವಂಶಿ ತುಂಬಾ ಹಾರ್ಡ್ ವರ್ಕ್ ಮಾಡಿದ್ದಾರೆ. ದೀಪಾವಳಿಗೆ ನಮ್ಮ ಚಿತ್ರ ತೆರೆಗೆ ಬರುತ್ತಿದೆ ಎಂದಿದ್ದಾರೆ. ಫೈರ್ ಫ್ಲೈ ಸಿನಿಮಾವನ್ನು ಯುವ ನಟ ವಂಶಿ ಡೈರೆಕ್ಟ್ ಮಾಡುತ್ತಿದ್ದಾರೆ. ಪೂರ್ಣ ಪ್ರಮಾಣದ ನಾಯಕರಾಗಿಯೂ ಈ ಮೂಲಕ ವಂಶಿ ಕನ್ನಡಕ್ಕೆ ಪರಿಚಯ ಆಗುತ್ತಿದ್ದಾರೆ. ಚಿತ್ರಕ್ಕೆ ಅಭಿಲಾಷ್ ಕಳತ್ತಿ ಛಾಯಾಗ್ರಹಣ ಮಾಡುತ್ತಿದ್ದಾರೆ. ಚರಣ್ ರಾಜ್ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ. ರಘು ನಿಡುವಳ್ಳಿ ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವಿಜಯಪುರ ವಿಮಾನ ನಿಲ್ದಾಣಕ್ಕೆ 618 ಕೋಟಿ ರೂ. ಪರಿಷ್ಕೃತ ಅಂದಾಜುಗೆ ಸಚಿವ ಸಂಪುಟ ಅನುಮೋದನೆ

ಚಪ್ಪರ್, ಭಿಕಾರಿ, ಮರ್ಯಾದೇ ಇಲ್ವ: Bigg Boss ರಂಜಿತ್ ಮನೆಯಲ್ಲಿ ಜಗಳ, Video Viral

ಬೆಂಗಳೂರು - ಬ್ಯಾಂಕಾಕ್ ನಡುವೆ ನೇರ ವಿಮಾನ ಸೇವೆ ಆರಂಭಿಸಿದ ಏರ್ ಇಂಡಿಯಾ

BlackBuck: 'ಹೋಗೋರನ್ನ ತಡೆಯಲ್ಲ.. ಸರ್ಕಾರವನ್ನ ಬ್ಲ್ಯಾಕ್‌ಮೇಲ್‌ ಮಾಡೋಕೆ ಬರಬೇಡಿ'; DCM DK Shivakumar

Shocking: ಮತ್ತೆ ಪಾಕಿಸ್ತಾನಕ್ಕೆ ಜಾಗತಿಕ ಅಪಮಾನ, ನಕಲಿ ಫುಟ್ಬಾಲ್ ತಂಡ ಕಿಕ್ಔಟ್ ಮಾಡಿದ ಜಪಾನ್! ಸಿಕ್ಕಿಬಿದಿದ್ದೇ ರೋಚಕ

SCROLL FOR NEXT