ಶಿವರಾಜಕುಮಾರ್‌ ನಟನೆಯ 131ನೇ ಸಿನಿಮಾದ ಶೂಟಿಂಗ್ ಆಗಸ್ಟ್ ನಲ್ಲಿ ಆರಂಭ 
ಸಿನಿಮಾ ಸುದ್ದಿ

ಶಿವರಾಜಕುಮಾರ್‌ ನಟನೆಯ 131ನೇ ಸಿನಿಮಾದ ಶೂಟಿಂಗ್ ಆಗಸ್ಟ್ ನಲ್ಲಿ ಆರಂಭ

ನಿರ್ದೇಶಕ ಕಾರ್ತಿಕ್ ಅದ್ವೈತ್, ನಿರ್ಮಾಪಕರಾದ ಎನ್ ಎಸ್ ರೆಡ್ಡಿ ಮತ್ತು ಸುಧೀರ್, ಛಾಯಾಗ್ರಾಹಕ ಎಜೆ ಶೆಟ್ಟಿ ಮತ್ತು ಸಂಕಲನಕಾರ ದೀಪು ಎಸ್ ಕುಮಾರ್ ಸೇರಿದಂತೆ ಇಡೀ ತಂಡವು ಶಿವರಾಜಕುಮಾರ್ ಅವರ ನಿವಾಸದಲ್ಲಿ ಸಭೆ ಸೇರಿದ್ದು, ಆಗಸ್ಟ್‌ನಲ್ಲಿ ಚಿತ್ರೀಕರಣ ಶೂಟಿಂಗ್ ಆರಂಭಿಸಲು ನಿರ್ಧರಿಸಿದೆ.

ಭುವನೇಶ್ವರಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾದ ಸೆಂಚುರಿ ಸ್ಟಾರ್ ಅವರ 131 ನೇ ಚಿತ್ರದ ಶೂಟಿಂಗ್ ಆಗಸ್ಟ್ ನಲ್ಲಿ ಆರಂಭವಾಗಲಿದೆ. ಶಿವಣ್ಣನ ಹುಟ್ಟುಹಬ್ಬದಂದು ಟೀಸರ್ ಬಿಡುಗಡೆಯಾಗಿದ್ದು, ಅಭಿಮಾನಿಗಳು ಸಂತಸಗೊಂಡಿದ್ದಾರೆ. ನಿರ್ಮಾಣ ತಂಡವು ಈಗ ಚಿತ್ರದ ಶೂಟಿಂಗ್ ಆರಂಭಿಸಲು ಸಜ್ಜಾಗಿದೆ.

ನಿರ್ದೇಶಕ ಕಾರ್ತಿಕ್ ಅದ್ವೈತ್, ನಿರ್ಮಾಪಕರಾದ ಎನ್ ಎಸ್ ರೆಡ್ಡಿ ಮತ್ತು ಸುಧೀರ್, ಛಾಯಾಗ್ರಾಹಕ ಎಜೆ ಶೆಟ್ಟಿ ಮತ್ತು ಸಂಕಲನಕಾರ ದೀಪು ಎಸ್ ಕುಮಾರ್ ಸೇರಿದಂತೆ ಇಡೀ ತಂಡವು ಶಿವರಾಜಕುಮಾರ್ ಅವರ ನಿವಾಸದಲ್ಲಿ ಸಭೆ ಸೇರಿದ್ದು, ಆಗಸ್ಟ್‌ನಲ್ಲಿ ಚಿತ್ರೀಕರಣ ಶೂಟಿಂಗ್ ಆರಂಭಿಸಲು ನಿರ್ಧರಿಸಿದೆ. ಕಾರ್ತಿಕ್ ಅದ್ವೈತ್, ಶಿವಣ್ಣನಿಗೆ ಆ್ಯಕ್ಷನ್ ಕಟ್ ಹೇಳುವ ಮೂಲಕ ಸ್ಯಾಂಡಲ್​ವುಡ್​​ ಅಂಗಳಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಅಂದಹಾಗೆ, ಇವರಿಗೆ ಇದು ನಿರ್ದೇಶಕನಾಗಿ ಎರಡನೇ ಸಿನಿಮಾ. ಇದೊಂದು ಆ್ಯಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಶಿವಣ್ಣ ಡಿಫ್ರೆಂಟ್ ಲುಕ್​​​ನಲ್ಲಿ, ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. 'ಘೋಸ್ಟ್' ಖ್ಯಾತಿಯ ವಿ.ಎಂ.ಪ್ರಸನ್ನ ಹಾಗೂ 'ಸೀತಾರಾಮಂ' ಖ್ಯಾತಿಯ ಜಯಕೃಷ್ಣ ಬರಹಗಾರರಾಗಿ ಸಾಥ್ ಕೊಡುತ್ತಿದ್ದಾರೆ.

ವಿಕ್ರಂ ವೇದ, ಆರ್​ಡಿಎಕ್ಸ್, ಖೈದಿ ಸಿನಿಮಾ ಖ್ಯಾತಿಯ ಸ್ಯಾಮ್ ಸಿ.ಎಸ್. ಸಂಗೀತ ಸಂಯೋಜಿಸಲಿದ್ದಾರೆ. ಎ.ಜೆ.ಶೆಟ್ಟಿ ಛಾಯಾಗ್ರಹಣ ನಿರ್ವಹಿಸಲಿದ್ದಾರೆ. ದೀಪು ಎಸ್.ಕುಮಾರ್ ಅವರ ಸಂಕಲನ ಹಾಗೂ ರವಿ ಸಂತೆಹಕ್ಲು ಅವರ ಕಲಾ ನಿರ್ದೇಶನ ಚಿತ್ರಕ್ಕಿರಲಿದೆ. ಭುವನೇಶ್ವರಿ ಪ್ರೊಡಕ್ಷನ್ ಅಡಿ ಎಸ್.ಎನ್.ರೆಡ್ಡಿ ಹಾಗೂ ಸುಧೀರ್ ಪಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದು, ರಮಣ ರೆಡ್ಡಿ ಕಾರ್ಯಕಾರಿ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT