ನಿರ್ದೇಶಕ ಎಪಿ ಅರ್ಜುನ್ 
ಸಿನಿಮಾ ಸುದ್ದಿ

ಯಾರಿಂದಲೂ ಹಣ ಪಡೆದಿಲ್ಲ, ಆರೋಪಗಳು ಸುಳ್ಳು: Martin ನಿರ್ದೇಶಕ ಎಪಿ ಅರ್ಜುನ್ ಸುದ್ದಿಗೋಷ್ಠಿ

ನನಗೂ ಮಾಧ್ಯಮದ ಮೂಲಕ ವಿಷಯ ಗೊತ್ತಾಯ್ತು. 50 ಲಕ್ಷ ರೂ., 75 ಲಕ್ಷ ರೂ. ಕಮಿಷನ್ ತಗೊಂಡಿದ್ದೀನಿ ಅಂತ‌ ಆರೋಪಿಸಿ ನನ್ನನ್ನ ಕಮಿಷನ್ ಡೈರೆಕ್ಟರ್ ಅಂತೆಲ್ಲಾ ಹೇಳಿದ್ರು. ಈ ಪ್ರಕರಣದಲ್ಲಿ ಸತ್ಯ ರೆಡ್ಡಿ, ಸುನೀಲ್ ರೆಡ್ಡಿ ಇಬ್ಬರೂ ಆರೋಪಿಗಳು. ಆ ಎಫ್‌ಐಆರ್‌ನಲ್ಲೂ ನನ್ನ ಹೆಸರು ಇರಲಿಲ್ಲ.. ನನ್ನ ಮೇಲಿನ ಆರೋಪ ಸುಳ್ಳು.

ಬೆಂಗಳೂರು: ನಟ ಧ್ರುವ ಸರ್ಜಾ (Dhruva Sarja) ಅಭಿನಯದ ʻಮಾರ್ಟಿನ್‌ʼ ಸಿನಿಮಾ ವಿಎಫ್ಎಕ್ಸ್ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಕೇಳಿಬಂದಿರುವ ಎಲ್ಲ ಆರೋಪಗಳು ಸುಳ್ಳಾಗಿದ್ದು ತಾವೂ ಯಾರಿಂದಲೂ ಹಣ ಪಡೆದಿಲ್ಲ ಎಂದು ನಿರ್ದೇಶಕ ಎಪಿ ಅರ್ಜುನ್ ಸ್ಪಷ್ಟನೆ ನೀಡಿದ್ದಾರೆ.

ಮಾರ್ಟಿನ್ ಚಿತ್ರ ವಿಎಫ್‌ಎಕ್ಸ್‌ಗಾಗಿ ಡಿಜಿಟಲ್ ಟೆರೇನ್ ಪ್ರೊಡಕ್ಷನ್ ಪ್ರೈ. ಲಿಮಿಟೆಡ್ ಕಂಪನಿಗೆ ನಿರ್ಮಾಪಕ ನೀಡಿದ್ದ 2.5 ಕೋಟಿ ರೂ.ಗಳಲ್ಲಿ ನಿರ್ದೇಶಕ ಎ.ಪಿ. ಅರ್ಜುನ್‌ 50 ಲಕ್ಷ ರೂ. ಕಮಿಷನ್‌ ಪಡೆದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಆರೋಪದ ವಿಚಾರವಾಗಿ ಇದೀಗ ಚಿತ್ರದ ನಿರ್ದೇಶಕ ಎಪಿ ಅರ್ಜುನ್ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದು, ''ನನ್ನನ್ನು ಪೊಲೀಸ್ ಸ್ಟೇಷನ್‌ಗೆ ಕರೆದಿದ್ದ ಉದ್ದೇಶ ಏನಂದರೆ, ಸತ್ಯಾ ರೆಡ್ಡಿ ಅನ್ನೋನು ನನ್ನ ಮೇಲೆ ಆರೋಪ ಮಾಡಿದ್ದಾನೆ.

ಅದಕ್ಕೆ ಪೊಲೀಸರು ನಮ್ಮನ್ನೆಲ್ಲ ವಿಚಾರಣೆಗೆ ಕರೆದಿದ್ದರು. ನನ್ನ ಮೇಲೆ ಯಾಕೆ ಆರೋಪ ಮಾಡಿದ್ದಾನೆ ಅಂತ ಗೊತ್ತಿಲ್ಲ. ಆದರೆ, ನನ್ನ ಮೇಲೆ ಮಾಡಿರುವ ಆರೋಪ ಸುಳ್ಳು. ನನಗೆ ಅಷ್ಟೊಂದು ದುಡ್ಡು ಕೊಟ್ಟಿದ್ದರೆ, ಏನಾದರೂ ಒಂದು ದಾಖಲೆ ಇರಬೇಕಿತ್ತಲ್ಲವಾ? ಎಂದು ಪ್ರಶ್ನೆ ಮಾಡಿದ್ದಾರೆ.

''ನನಗೂ ಮಾಧ್ಯಮದ ಮೂಲಕ ವಿಷಯ ಗೊತ್ತಾಯ್ತು. 50 ಲಕ್ಷ ರೂ., 75 ಲಕ್ಷ ರೂ. ಕಮಿಷನ್ ತಗೊಂಡಿದ್ದೀನಿ ಅಂತ‌ ಆರೋಪಿಸಿ ನನ್ನನ್ನ ಕಮಿಷನ್ ಡೈರೆಕ್ಟರ್ ಅಂತೆಲ್ಲಾ ಹೇಳಿದ್ರು. ಈ ಪ್ರಕರಣದಲ್ಲಿ ಸತ್ಯ ರೆಡ್ಡಿ, ಸುನೀಲ್ ರೆಡ್ಡಿ ಇಬ್ಬರೂ ಆರೋಪಿಗಳು. ಆ ಎಫ್‌ಐಆರ್‌ನಲ್ಲೂ ನನ್ನ ಹೆಸರು ಇರಲಿಲ್ಲ.. ನನ್ನ ಮೇಲಿನ ಆರೋಪ ಸುಳ್ಳು. ಸತ್ಯಾ ರೆಡ್ಡಿ ನಟ ರವಿಶಂಕರ್‌ಗೂ 10 ಲಕ್ಷ ರೂ. ಮೋಸ ಮಾಡಿದ್ದಾರೆ, ಕಾಟೇರ ಸಿನಿಮಾಗೂ ಮೋಸ ಮಾಡಿದ್ದಾರೆ ಎಂದು ಅರ್ಜುನ್ ಆರೋಪಿಸಿದರು.

ಇನ್ನು ನಿರ್ಮಾಪಕರ ಜೊತೆಗಿನ ಮನಸ್ತಾಪದ ಬಗ್ಗೆ ಮಾತನಾಡಿದ ಎಪಿ ಅರ್ಜುನ್, ʻದೊಡ್ಡ ಸಿನಿಮಾ ಅಂದ್ಮೇಲೆ ಜಗಳ, ಮನಸ್ತಾಪ ಇದ್ದೇ ಇರುತ್ತದೆ. ನನ್ನ ಮೇಲೆ ಮಾತ್ರ ಅವನು (ಸತ್ಯಾ ರೆಡ್ಡಿ) ಆರೋಪ ಮಾಡಿಲ್ಲ. ನಮ್ಮ ಕ್ಯಾಮರಾಮ್ಯಾನ್, ಎಡಿಟರ್‌ ಹಾಗೂ ಸಹಾಯಕ ನಿರ್ದೇಶಕನ ಮೇಲೂ ಆರೋಪ ಮಾಡಿದ್ದಾನೆ. ಪೊಲೀಸರ ಮುಂದೆ ನಾನು ಏನೇನು ಹೇಳಬೇಕಿತ್ತೋ, ಎಲ್ಲಾ ಹೇಳಿದ್ದೇನೆ.

ಪೊಲೀಸರ ತನಿಖೆಗೆ ಸಹಕರಿಸುತ್ತೇನೆ. ನನಗೂ – ಉದಯ್ ಮೆಹ್ತಾ ಮಧ್ಯೆ ಬೇರೆ ವಿಚಾರಕ್ಕೆ ಮನಃಸ್ತಾಪ ಆಗಿತ್ತು. ಆದ್ರೆ ಸತ್ಯ ರೆಡ್ಡಿ ನನ್ನ ಹೆಸ್ರು ಹಾಳು ಮಾಡೋಕೆ ಟ್ರೈ ಮಾಡ್ತಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾ ಅಂದಾಗ ಬಜೆಟ್ ಡಿಫರೆನ್ಸ್ ಬರುತ್ತೆ, ಆದ್ರೆ ಈ ಸಿನಿಮಾದಲ್ಲಿ ಅದೂ ಕೂಡ ಜಾಸ್ತಿ ಆಗಿಲ್ಲ ಎಂದು ಹೇಳಿದ್ದಾರೆ.

ಇದೇ ವೇಳೆ ಅಕ್ಟೋಬರ್ 11 ರಂದು ‘ಮಾರ್ಟಿನ್’ ಪಕ್ಕಾ ರಿಲೀಸ್ ಆಗುತ್ತೆ’’ ಎಂದು ನಿರ್ದೇಶಕ ಎಪಿ ಅರ್ಜುನ್ ಚಿತ್ರನೋಡಿ ಹರಸಿ ಎಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT