ಮಲಯಾಳಂನ ಸಿನಿಮಾವೊಂದರ ಸಾಹಸ ದೃಶ್ಯದ ಚಿತ್ರೀಕರಣ ವೇಳೆಯಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಮಲಯಾಳಂ ನಟರಾದ ಅರ್ಜುನ್ ಅಶೋಕನ್ ಮತ್ತು ಸಂಗೀತ್ ಪ್ರತಾಪ್ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂದರು ನಗರಿ ಕೊಚ್ಚಿಯ ಎಂಜಿ ರಸ್ತೆಯಲ್ಲಿ ಬೆಳಗಿನ ಜಾವ 1.30ಕ್ಕೆ ಈ ಘಟನೆ ನಡೆದಿದೆ.
''ಬ್ರೋಮಾನ್ಸ್ '' ಚಿತ್ರದ ಚೇಸಿಂಗ್ ದೃಶ್ಯವನ್ನು ಚಿತ್ರೀಕರಿಸುವಾಗ, ನಟರು ಪ್ರಯಾಣಿಸುತ್ತಿದ್ದ ಕಾರು, ಹೋಟೆಲ್ ಮುಂಭಾಗದಲ್ಲಿ ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಡಿಕ್ಕಿ ಹೊಡೆದು ಉರುಳಿರುವುದಾಗಿ ಅವರು ತಿಳಿಸಿದ್ದಾರೆ.
ಕಾರಿನಲ್ಲಿದ್ದ ಅಶೋಕನ್, ಪ್ರತಾಪ್ ಹಾಗೂ ರಸ್ತೆಯಲ್ಲಿ ನಿಂತಿದ್ದ ಫುಡ್ ಡೆಲಿವರಿ ಏಜೆಂಟ್ ಸೇರಿದಂತೆ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಲ್ವರ ಸ್ಥಿತಿ ಈಗ ಸ್ಥಿರವಾಗಿದೆ ಎಂದು ಹೇಳಲಾಗಿದೆ.