ವಿನಯ್ ರಾಜ್ ಕುಮಾರ್ ನಟನೆಯ ‘ಒಂದು ಸರಳ ಪ್ರೇಮ ಕತೆ’ ಸಿನಿಮಾ ಕೆಲವು ತಿಂಗಳ ಹಿಂದಷ್ಟೆ ಬಿಡುಗಡೆ ಆಗಿ ಸೂಪರ್ ಹಿಟ್ ಎನಿಸಿಕೊಂಡಿದೆ. ಸಿದ್ದಾರ್ಥ್ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಪ್ರವೇಶಿಸಿದ ವಿನಯ್ ರಾಜ್ ಕುಮಾರ್ ಸಿಂಪಲ್ ಸುನಿ ನಿರ್ದೇಶನದ ಒಂದು ಸರಳ ಪ್ರೇಮ ಕತೆ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದರು.
ವಿನಯ್ ರಾಜ್ ಕುಮಾರ್ ನಟನೆಯ ಹೊಸ ಸಿನಿಮಾ ಪೆಪೆ ಸಜ್ಜಾಗಿದೆ, ಸಿನಿಮಾದ ಸೆನ್ಸಾರ್ ಮುಗಿದಿದ್ದು, ಸಿನಿಮಾಕ್ಕೆ ‘ಎ’ ಸರ್ಟಿಫಿಕೇಶನ್ ದೊರೆತಿದೆ. ಶ್ರೀಲೇಶ್ ನಾಯರ್ ನಿರ್ದೇಶನದ ಪೆಪೆ ಸಿನಿಮಾವು ಟೈಟಲ್ ಮೂಲಕವೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ‘ಪೆಪೆ’ ಸಿನಿಮಾವು ಹಳ್ಳಿಗಾಡಿನ ಯುವಕನೊಬ್ಬನ ಕತೆಯನ್ನು ಒಳಗೊಂಡಿದೆ. ಸಿನಿಮಾದಲ್ಲಿ ವಿನಯ್ ರಾಜ್ಕುಮಾರ್ ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾವು ಕ್ರೈಂ ಥ್ರಿಲ್ಲರ್ ಆಗಿದ್ದು, ಸಿನಿಮಾದ ಮೇಕಿಂಗ್ ಭಿನ್ನವಾಗಿದೆ. ಸಿನಿಮಾದಲ್ಲಿ ಕಾಜಲ್ ಕುಂದರ್ ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ಮೇದಿನಿ ಕೆಳಮನೆ, ಮಯೂರ್ ಪಟೇಲ್, ಬಲ ರಾಜವಾಡಿ, ಅರುಣಾ ಬಾಲರಾಜ್, ನವೀನ್ ಡಿ ಪಡೀಲ್ ಇನ್ನೂ ಹಲವರು ನಟಿಸಿದ್ದಾರೆ.
ವಿನಯ್ ಕತೆ ಪ್ರಧಾನ ಸಿನಿಮಾಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ. ಸಮಕಾಲೀನ ಇತರೆ ಯುವ ನಟರಂತೆ ಮಾಸ್, ಕಮರ್ಶಿಯಲ್ ಸಿನಿಮಾಗಳ ಕಡೆಗೆ ವಾಲದೆ ತಮ್ಮದೇ ಹಾದಿಯಲ್ಲಿ ನಡೆಯುತ್ತಾ ಭರವಸೆ ಮೂಡಿಸುತ್ತಿದ್ದಾರೆ. ಕತಾ ಪ್ರಧಾನ ಸಿನಿಮಾಗಳನ್ನಷ್ಟೆ ಆಯ್ಕೆ 1970 ರಿಂದ 2020 ರವರೆಗಿನ ಕಾಲದ ಕಕೆಯಾಗಿದೆ. ಪೆಪೆ ಕಚ್ಚಾ ಮತ್ತು ಸಮಗ್ರ ಮನರಂಜನೆ ನೀಡುವ ಭರವಸೆ ನೀಡಿದ್ದಾರೆ. ಪೆಪೆಗೆ ತವನ್ನು ಪೂರ್ಣಚಂದ್ರ ತೇಜಸ್ವಿ ಸಂಗೀತ ಸಂಯೋಜಿಸಿದ್ದಾರೆ ಮತ್ತು ಅಭಿಷೇಕ್ ಕಾಸರಗೋಡು ಛಾಯಾಗ್ರಹಣ ನಿರ್ವಹಿಸಿದ್ದಾರೆ.ಉದಯ ಶಂಕರ್ ನಿರ್ಮಾಣ ಮಾಡಿದ್ದಾರೆ.