ಚಂದನ್ ಶೆಟ್ಟಿ, ನಿವೇದಿತಾ ಗೌಡ 
ಸಿನಿಮಾ ಸುದ್ದಿ

ಚಂದನ್ ಶೆಟ್ಟಿ- ನಿವೇದಿತಾ ದಾಂಪತ್ಯದಲ್ಲಿ ಬಿರುಕು: ವಿಚ್ಚೇದನಕ್ಕೆ ಮುಂದು

ಕನ್ನಡ ಕಿರುತೆರೆಯ ಜನಪ್ರಿಯ ಜೋಡಿಗಳಲ್ಲಿ ಒಂದಾದ ಚಂದನ್ ಶೆಟ್ಟಿ- ನಿವೇದಿತಾ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ಪರಸ್ಪರ ಒಪ್ಪಿಗೆ ಮೂಲಕ ವಿಚ್ಛೇದನ ಪಡೆದುಕೊಳ್ಳಲು ಕೋರ್ಟ್ ಮೆಟ್ಟಿಲೇರಿದ್ದರು.

ಕನ್ನಡ ಕಿರುತೆರೆಯ ಜನಪ್ರಿಯ ಜೋಡಿಗಳಲ್ಲಿ ಒಂದಾದ ಚಂದನ್ ಶೆಟ್ಟಿ- ನಿವೇದಿತಾ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ಪರಸ್ಪರ ಒಪ್ಪಿಗೆ ಮೂಲಕ ವಿಚ್ಛೇದನಕ್ಕೆ ಮುಂದಾಗಿದ್ದಾರೆ. ಈ ಸಂಬಂಧ ಶಾಂತಿನಗರದ ಕೋರ್ಟ್ ನಲ್ಲಿ ನಿನ್ನೆ ಕೇಸ್ ದಾಖಲಿಸಿದ್ದರು. ಪ್ರಕರಣದ ಮೊದಲ ವಿಚಾರಣೆ ಹಿನ್ನೆಲೆಯಲ್ಲಿ ಇಬ್ಬರೂ ಇಂದು 2ನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯಕ್ಕೆ ಹಾಜರಾದರು.

ಬಿಗ್​ ಬಾಸ್​ ಕನ್ನಡ ಸೀಸನ್​ 5’ ರಿಯಾಲಿಟಿ ಶೋನಲ್ಲಿ ನಿವೇದಿತಾ ಗೌಡ ಹಾಗೂ ಚಂದನ್​ ಶೆಟ್ಟಿ ಅವರು ಸ್ಪರ್ಧಿಸಿದ್ದರು. ಅಲ್ಲಿಯೇ ಅವರಿಗೆ ಮೊದಲ ಬಾರಿಗೆ ಪರಿಚಯ ಆಗಿ, ಸ್ನೇಹ ನಂತರ ಪ್ರೀತಿಯಾಗಿ ಬದಲಾಯಿತು. 2017ರಲ್ಲಿ ಮೈಸೂರಿನ ಯುವ ದಸರಾ ವೇದಿಕೆಯಲ್ಲಿ ನಿವೇದಿತಾಗೆ ಚಂದನ್​ ಶೆಟ್ಟಿ ಅವರು ಪ್ರಪೋಸ್​ ಮಾಡಿದ್ದರು. ಬಳಿಕ ಅವರಿಬ್ಬರು 2020 ಫೆಬ್ರವರಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

ಬಳಿಕ ಗಿಚ್ಚಿಗಿಲಿಗಿಲಿ ಸೇರಿದಂತೆ ಹಲವು ಟಿವಿ ರಿಯಾಲಿಟಿ ಶೋಗಳಲ್ಲಿ ಈ ಜೋಡಿ ಕಾಣಿಸಿಕೊಳ್ಳುತಿತ್ತು. ಇನ್ನೂ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಟಿವ್ ಆಗಿರುವ ನಿವೇದಿತಾ ಗೌಡ ಆಗಾಗ ಹೊಸ ಹೊಸ ರೀಲ್ಸ್​ ಹಂಚಿಕೊಳ್ಳುತ್ತಾರೆ. ಕೆಲವು ರೀಲ್ಸ್‌ಗಳನ್ನು ನೋಡಿ ನೆಟ್ಟಿಗರು ಗರಂ ಆಗುತ್ತಿದ್ದರು. ಕಮೆಂಟ್​ಗಳಲ್ಲಿ ಅನೇಕರು ಚಂದನ್​ ಶೆಟ್ಟಿಯ ಹೆಸರನ್ನೂ ಆಗಾಗ ಎಳೆದು ತರುತ್ತಿದ್ದರು. ಮಗು ವಿಚಾರವೇ ಅವರಿಬ್ಬರ ನಡುವಿನ ದಾಂಪತ್ಯ ಜೀವನ ಬಿರುಕುಗೊಳ್ಳಲು ಕಾರಣ ಎಂಬುದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel