ಇ ಕೃಷ್ಣಪ್ಪ-ಯೋಗರಾಜ್ ಭಟ್ 
ಸಿನಿಮಾ ಸುದ್ದಿ

16 ವರ್ಷಗಳ ಬಳಿಕ ಮತ್ತೆ ಒಂದಾದ 'ಮುಂಗಾರು ಮಳೆ' ಜೋಡಿ; ಇ ಕೃಷ್ಣಪ್ಪ- ಯೋಗರಾಜ್ ಭಟ್ ಹೊಸ ಚಿತ್ರ

'ಮುಂಗಾರು ಮಳೆ' ಖ್ಯಾತಿಯ ನಿರ್ಮಾಪಕ ಇ ಕೃಷ್ಣಪ್ಪ ಮತ್ತು ನಿರ್ದೇಶಕ ಯೋಗರಾಜ್ ಭಟ್ ಜೋಡಿ 16 ವರ್ಷಗಳ ನಂತರ ಮತ್ತೆ ಒಂದಾಗುತ್ತಿದ್ದಾರೆ.

ಬೆಂಗಳೂರು: 'ಮುಂಗಾರು ಮಳೆ' ಖ್ಯಾತಿಯ ನಿರ್ಮಾಪಕ ಇ ಕೃಷ್ಣಪ್ಪ ಮತ್ತು ನಿರ್ದೇಶಕ ಯೋಗರಾಜ್ ಭಟ್ ಜೋಡಿ 16 ವರ್ಷಗಳ ನಂತರ ಮತ್ತೆ ಒಂದಾಗುತ್ತಿದ್ದಾರೆ.

16 ವರ್ಷಗಳ ಹಿಂದೆ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿದ್ದ ಮುಂಗಾರು ಮಳೆ ಚಿತ್ರ ನಟ ಗಣೇಶ್ ಗೆ ಗೋಲ್ಟನ್ ಸ್ಟಾರ್ ಪಟ್ಟ ನೀಡಿತ್ತು. ಈ ಚಿತ್ರದಲ್ಲಿ ನಟಿ ಪೂಜಾ ಗಾಂಧಿ ಪದಾರ್ಪಣೆ ಮಾಡಿದ್ದರೆ, ನಾಯಕಿಯ ತಂದೆಯ ಪಾತ್ರದಲ್ಲಿ ಅನಂತ್ ನಾಗ್ ನಟಿಸಿದ್ದರು.

ಈ ಸೂಪರ್ ಹಿಟ್ ಚಿತ್ರದ ಹಿಂದಿನ ಸೂತ್ರದಾರರಾದ ನಿರ್ಮಾಪಕ ಇ ಕೃಷ್ಣಪ್ಪ ಮತ್ತು ನಿರ್ದೇಶಕ ಯೋಗರಾಜ್ ಭಟ್ ಮತ್ತೆ ಒಂದಾಗಿ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ.

ಈ ಹೊಸ ಚಿತ್ರದಲ್ಲಿ ಮತ್ತೆ ಹೊಸ ಮುಖಗಳ ಪರಿಚಯಕ್ಕೆ ಮುಂದಾಗಿದ್ದು, ಈಗಾಗಲೇ ಆಡಿಷನ್ ಪ್ರಕ್ರಿಯೆ ನಡೆಯುತ್ತಿದೆ. ಶೀಘ್ರದಲ್ಲೇ ಅಧಿಕೃತ ಘೋಷಣೆಯಾಗುವ ನಿರೀಕ್ಷೆಯಿದೆ ಎಂದು ಚಿತ್ರತಂಡ ಹೇಳಿದೆ.

ದಾಖಲೆ ಬರೆದಿದ್ದ ಮುಂಗಾರು ಮಳೆ

16 ವರ್ಷಗಳ ಹಿಂದೆ ಬಿಡುಗಡೆಯಾಗಿದ್ದ ''ಮುಂಗಾರು ಮಳೆ'' ಕನ್ನಡ ಚಲನಚಿತ್ರೋದ್ಯಮದಲ್ಲಿ ಹೊಸ ಅಲೆ ಸೃಷ್ಟಿಸಿತ್ತು. ಬಾಕ್ಸಾಫೀಸ್ ನಲ್ಲಿ ಭರ್ಜರಿ ಗಳಿಕೆ ಕಂಡಿದ್ದ ಚಿತ್ರ ಪ್ರೇಕ್ಷಕರ ಮೆಚ್ಚುಗೆ ಗಳಿಸಿತ್ತು. ಒಂದು ಮಲ್ಟಿಪ್ಲೆಕ್ಸ್‌ನಲ್ಲಿ ಒಂದು ವರ್ಷಕ್ಕೂ ಹೆಚ್ಚು ಕಾಲ ನಿರಂತರವಾಗಿ ಓಡಿದ ಭಾರತದ ಮೊದಲ ಚಿತ್ರ ಎಂಬ ದಾಖಲೆ ಕೂಡ ಮುಂಗಾರು ಮಳೆ ಬತ್ತಳಿಕೆಯಲ್ಲಿದೆ.

ಈ ಚಿತ್ರ ದಕ್ಷಿಣ ಭಾರತದ ಚಿತ್ರರಂಗಕ್ಕೆ ಒಂದು ಮೈಲಿಗಲ್ಲು ಸ್ಥಾಪಿಸಿತ್ತು ಮತ್ತು ತೆಲುಗು, ತಮಿಳು, ಹಿಂದಿ ಸೇರಿದಂತೆ ಬಹು ಭಾಷೆಗಳಲ್ಲಿ ರೀಮೇಕ್‌ ಆಗಿತ್ತು. ಅಂತೆಯೇ ನಟ ಗಣೇಶ್ ಅವರನ್ನು 'ಗೋಲ್ಡನ್ ಸ್ಟಾರ್' ಸ್ಥಾನಮಾನಕ್ಕೇರಿಸಿತ್ತು.

ಇದೀಗ ಇದೇ ತಂಡ ಮತ್ತೆ ಇತಿಹಾಸ ಸೃಷ್ಟಿಗೆ ಮುಂದಾಗಿದ್ದು, ಪ್ರಸ್ತುತ ಈ ಬಹು ನಿರೀಕ್ಷಿತ ಚಿತ್ರ ಪ್ರಿ-ಪ್ರೊಡಕ್ಷನ್ ಹಂತದಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತಮ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ