ನಟ ದರ್ಶನ್ ಮತ್ತು ಪವಿತ್ರಾ ಗೌಡ(ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

ಹತ್ಯೆ ಪ್ರಕರಣ: ನಟ ದರ್ಶನ್, ಆಪ್ತ ಸ್ನೇಹಿತೆ ಪವಿತ್ರಾ ಗೌಡ ಬಂಧನ- ಗೃಹ ಸಚಿವ ಡಾ. ಪರಮೇಶ್ವರ್

ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಬಂಧನವಾಗಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಖಚಿತಪಡಿಸಿದ್ದಾರೆ.

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಬಂಧನವಾಗಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಖಚಿತಪಡಿಸಿದ್ದಾರೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯದ ಸತ್ವ ಅಪಾರ್ಟ್ ಮೆಂಟ್ ಬಳಿಯ ಮೋರಿಯಲ್ಲಿ ಸುಮಾರು 35 ವರ್ಷದ ಯುವಕನ ಶವ ಪತ್ತೆಯಾದ ಹಿನ್ನೆಲೆಯಲ್ಲಿ ಪ್ರಕರಣದ ಜಾಡು ಹಿಡಿದು ತನಿಖೆ ಮಾಡುತ್ತಾ ಹೋದ ಪೊಲೀಸರಿಗೆ ಇದರಲ್ಲಿ ನಟ ದರ್ಶನ್ ಮತ್ತು ಅವರ ಸಹಚರರ ಕೊಲೆಯ ಕೈವಾಡವಿರುವುದು ಪತ್ತೆಯಾಯಿತು.

ಅದರಂತೆ ಇಂದು ಬೆಳಗ್ಗೆ ಬೆಂಗಳೂರಿನಿಂದ ಮೈಸೂರಿಗೆ ಹೋದ ಪೊಲೀಸರು ಅಲ್ಲಿ ಬ್ಲೂ ರ್ಯಾಡಿಸನ್ ಹೊಟೇಲ್ ನಲ್ಲಿ ಬೆಳಗಿನ ಜಾವ ಜಿಮ್ ಮಾಡುತ್ತಿದ್ದ ನಟ ದರ್ಶನ್ ಅವರನ್ನು ಅಲ್ಲಿಂದಲೇ ವಶಕ್ಕೆ ಪಡೆದು ಬೆಂಗಳೂರಿಗೆ ಕರೆತಂದಿದ್ದಾರೆ.

ಅವರ ಜೊತೆ ಅವರ 9 ಮಂದಿ ಸಹಚರರನ್ನು ವಶಕ್ಕೆ ಪಡೆದು ಅನ್ನಪೂರ್ಣೇಶ್ವರಿ ನಗರ ಪೊಲೀಸರು ತೀವ್ರ ವಿಚಾರಣೆ ನಡೆಸಿ ಬಂಧಿಸಿದ್ದಾರೆ. ಹತ್ಯೆ ಮಾಡಿರುವ ಆರೋಪಿಗಳು ನೀಡಿರುವ ಹೇಳಿಕೆ ಮೇಲೆ ನಟ ದರ್ಶನ್ ಬಂಧನವಾಗಿದೆ ಎಂದು ಗೃಹ ಸಚಿವರು ಹೇಳಿದರು.

ದರ್ಶನ್ ಗೆಳತಿ ವಶಕ್ಕೆ; ದರ್ಶನ್ ಗೆಳತಿ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಸಭ್ಯವಾಗಿ ಮೆಸೇಜ್ ಕಳುಹಿಸಿದ್ದರಂತೆ. ಹೀಗಾಗಿ, ಕೊಲೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಇಂದು ರಾಜರಾಜೇಶ್ವರಿ ನಗರ ಪೊಲೀಸರು ಪವಿತ್ರಾ ಗೌಡರನ್ನು ಕರೆಸಿ ವಿಚಾರಣೆ ನಡೆಸಿದಾಗ ಪಿತೂರಿ ನಡೆಸಿದ ಆರೋಪದ ಮೇಲೆ ವಶಕ್ಕೆ ಪಡೆಯಲಾಗಿದೆ.

ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ: ಪ್ರಕರಣದಲ್ಲಿ ಖ್ಯಾತ ನಟ ದರ್ಶನ್ ಬಂಧನವಾಗಿರುವುದರಿಂದ ಸಿಎಂ ಸಿದ್ದರಾಮಯ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರಿಂದ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಕರೆತಂದ ಪೊಲೀಸರು: ಘಟನೆ ಸಂಬಂಧ ಇಂದು ಪವಿತ್ರಾ ಗೌಡರನ್ನು ವಶಕ್ಕೆ ಪಡೆದು ಆರ್.ಆರ್. ನಗರ ಪೊಲೀಸ್ ಇನ್ಸ್ ಪೆಕ್ಟರ್ ಮಾರ್ಕಂಡಯ್ಯ ಅವರು ಪೊಲೀಸ್ ಸ್ಟೇಷನ್ ಗೆ ಕರೆದುಕೊಂಡು ಹೋಗಿದ್ದಾರೆ. ಪವಿತ್ರಾ ಜೊತೆ ಅವರ ಅಕ್ಕ ಕೂಡ ಠಾಣೆಗೆ ಆಗಮಿಸಿದ್ದರು.

ಈ ಕೊಲೆ ಪ್ರಕರಣದಲ್ಲಿ​​ ನಟ ದರ್ಶನ್​ ಸೇರಿದಂತೆ 10 ಜನರನ್ನು ವಿಜಯನಗರ ಎಸಿಪಿ ಚಂದನ್​ ತಂಡ ಬಂಧಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಮೈಸೂರಿನ ಱಡಿಸನ್​ ಹೋಟೆಲ್​ನಲ್ಲಿ ದರ್ಶನ್​ ಅರೆಸ್ಟ್ ಮಾಡಲಾಗಿದ್ದು ಅವರ ಜೊತೆ ಪಟ್ಟಣಗೆರೆ ಜಯಣ್ಣ ತಂಗಿ ಪುತ್ರ ವಿನಯ್​, ಕಿರಣ್, ಮಧು, ಲಕ್ಷ್ಮಣ್​, ಆನಂದ್​​, ರಾಘವೇಂದ್ರ ಸೇರಿ 10 ಜನರನ್ನು ಅರೆಸ್ಟ್ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT