ಬೆಂಗಳೂರು: ಮೊದಲನೇ ಪತ್ನಿ ನಾಗರತ್ನ ರಿಂದ ವಿಚ್ಛೇದನ ಪಡೆಯಲು ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಗುರುವಾರ ವಜಾಗೊಳಿಸಿದೆ.
ನಾಗರತ್ನಗೆ ವಿಚ್ಛೇದನ ನೀಡದೆ ಕೀರ್ತಿ ಗೌಡ ಅವರನ್ನು ವಿವಾಹವಾಗಿರುವ ದುನಿಯಾ ವಿಜಯ್ ಕ್ರೌರ್ಯದ ಆಧಾರದಲ್ಲಿ ನಾಗರತ್ನ ಅವರಿಗೆ ವಿಚ್ಚೇದನ ನೀಡಲು ಶಾಂತಿನಗರದ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ, ಪತ್ನಿ ನಾಗರತ್ನ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸುವಲ್ಲಿ ವಿಫಲವಾದ ಕಾರಣ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ.
2018ರಲ್ಲಿ ಮಾರುತಿ ಗೌಡ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದುನಿಯಾ ವಿಜಯ್ ಜೈಲು ಪಾಲಾಗಿದ್ದಾಗ, ಕೀರ್ತಿ ಗೌಡ ಮೇಲೆ ನಾಗರತ್ನ ಹಲ್ಲೆ ನಡೆಸಿದ್ದರು. ಕ್ರೌರ್ಯದ ಕಾರಣ ನೀಡಿ ನಾಗರತ್ನರಿಂದ ವಿಚ್ಛೇದನ ಪಡೆಯಲು ಕೌಟುಂಬಿಕ ನ್ಯಾಯಾಲಯಕ್ಕೆ ದುನಿಯಾ ವಿಜಯ್ ಎರಡನೇ ಬಾರಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ನಾಗರತ್ನ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ವಿಜಯ್ ಅವರ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.