ನಟ ಉಪೇಂದ್ರ 
ಸಿನಿಮಾ ಸುದ್ದಿ

ರೇಣುಕಾಸ್ವಾಮಿ ಹತ್ಯೆಗೆ ಸಂಬಂಧಪಟ್ಟ ವಿಚಾರಣೆ ವಿಡಿಯೋ-ಸಾಕ್ಷಿ ಹಂಚಿಕೊಳ್ಳಿ: ಪೊಲೀಸರಿಗೆ ನಟ ಉಪೇಂದ್ರ ಆಗ್ರಹ

ದರ್ಶನ್ ಆ್ಯಂಡ್ ಗ್ಯಾಂಗ್ ನಿಂದ ಹತ್ಯೆಗೀಡಾದ ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತ ನಟ ಉಪೇಂದ್ರ ಅವರು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು: ದರ್ಶನ್ ಆ್ಯಂಡ್ ಗ್ಯಾಂಗ್ ನಿಂದ ಹತ್ಯೆಗೀಡಾದ ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತ ನಟ ಉಪೇಂದ್ರ ಅವರು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಕರಣ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ರೇಣುಕಾಸ್ವಾಮಿ ಹತ್ಯೆಗೆ ಸಂಬಂಧಪಟ್ಟ ವಿಚಾರಣೆ ವಿಡಿಯೋ-ಸಾಕ್ಷಿ ಹಂಚಿಕೊಂಡು, ಪಾರದರ್ಶಕ ತನಿಖೆ ನಡೆಸುವಂತೆ ಪೊಲೀಸರಿಗೆ ಒತ್ತಾಯಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್ ಬಂಧನ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆ ಇಡೀ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಭೆರಗಾಗಿ ನೋಡುತ್ತಿದೆ.

ಈ ಹೈ ಪ್ರೊಫೈಲ್ ಕೇಸ್ ನ ವಿಚಾರಣೆಯಲ್ಲಿ ನಿಶ್ಪಕ್ಷಪಾತವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ರೇಣುಕಾ ಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟೀವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ,

ಯಾವುದೇ ಕೇಸ್ ಆದರೂ ಆ ಕೇಸ್ ನ ವಿಚಾರಣೆಯ ವೀಡಿಯೋ ಧಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೋಲೀಸರು ಸಂಬಂದ ಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು. ( ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರೆದಿದ್ದು ಎಲ್ಲವನ್ನೂ ವೀಡಿಯೋ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದು) (ಕಾನೂನು ಸುಧಾರಣೆಗಳು) ಅದೇ ರೀತಿ ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸ್ ನ ವಿಚಾರಣೆಯ ವೀಡಿಯೋ ಧಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೋಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು.

ಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು, ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ. ಆಗ ರೇಣುಕಾ ಸ್ವಾಮಿ ಕುಟುಂಬಕ್ಕೆ, ಜನರಿಗೆ, ಟೀವಿ ಮಾಧ್ಯಮಗಳಿಗೆ ಮತ್ತು ದರ್ಶನ್ ಅಭಿಮಾನಿಗಳಿಗೆ ಮನಸಿನಲ್ಲಿ ಗೊಂದಲಗಳಿಲ್ಲದೆ ಪೋಲೀಸ್ ಮತ್ತು ಟೀವಿ ಮಾಧ್ಯಮಗಳ ಬಗ್ಗೆ ಇನ್ನೂ ಗೌರವ ಹೆಚ್ಚಾಗುತ್ತದೆ ಮತ್ತು ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಬರುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT