ಕಲ್ಕಿ ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

ಬಾಕ್ಸ್‌ ಆಫೀಸ್‌ನಲ್ಲಿ ದಾಖಲೆ ಬರೆದ 'ಕಲ್ಕಿ'; ಮೊದಲ ದಿನವೇ 191.5 ಕೋಟಿ ರೂ. ಕಲೆಕ್ಷನ್ಸ್

ವೈಜಯಂತಿ ಮೂವೀಸ್ ನಿರ್ಮಿಸಿದ ದೊಡ್ಡ ಬಜೆಟ್ ನ ಈ ಚಿತ್ರದಲ್ಲಿ ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಬ್ ಬಚ್ಚನ್ ಮತ್ತು ಕಮಲ್ ಹಾಸನ್ ಸೇರಿ ಸ್ಟಾರ್ ಕಲಾವಿದರ ದಂಡೇ ಇದೆ.

ನಾಗ್ ಅಶ್ವಿನ್ ನಿರ್ದೇಶನದ ಕಲ್ಕಿ 2898 AD ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಬರೆದಿದ್ದು, ಬಿಡುಗಡೆಯಾದ ಮೊದಲ ದಿನವೇ 191.5 ಕೋಟಿ ರೂಪಾಯಿ ಗಳಿಸಿದೆ ಎಂದು ಚಿತ್ರ ನಿರ್ಮಾಪಕರು ಶುಕ್ರವಾರ ತಿಳಿಸಿದ್ದಾರೆ.

ಹಿಂದೂ ಮಹಾಕಾವ್ಯ ಮಹಾಭಾರತ ಮತ್ತು ವೈಜ್ಞಾನಿಕ ಕಾಲ್ಪನಿಕ ಕಥೆಯನ್ನಿಟ್ಟುಕೊಂಡ ಅದ್ಭುತ ಗ್ರಾಫಿಕ್ಸ್‌, ಸಾಹಸ ದೃಶ್ಯಗಳು ಪ್ರೇಕ್ಷಕರನ್ನು ಮೋಡಿ ಮಾಡಿವೆ.

ವೈಜಯಂತಿ ಮೂವೀಸ್ ನಿರ್ಮಿಸಿದ ದೊಡ್ಡ ಬಜೆಟ್ ನ ಈ ಚಿತ್ರದಲ್ಲಿ ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಬ್ ಬಚ್ಚನ್ ಮತ್ತು ಕಮಲ್ ಹಾಸನ್ ಸೇರಿ ಸ್ಟಾರ್ ಕಲಾವಿದರ ದಂಡೇ ಇದೆ. ಇದರ ಜೊತೆಗೆ ಅನೇಕ ಸೆಲೆಬ್ರಿಟಿಗಳು ಅತಿಥಿ ಪಾತ್ರ ಮಾಡಿದ್ದಾರೆ.

ಕಲ್ಕಿ ಚಿತ್ರ ಗುರುವಾರ ಆರು ಭಾಷೆಗಳಲ್ಲಿ, ತೆಲುಗು, ತಮಿಳು, ಮಲಯಾಳಂ, ಕನ್ನಡ, ಹಿಂದಿ ಮತ್ತು ಇಂಗ್ಲಿಷ್ ನಲ್ಲಿ ಬಿಡುಗಡೆಯಾಗಿದೆ.

ವೈಜಯಂತಿ ಮೂವೀಸ್ ತನ್ನ ಅಧಿಕೃತ X ಪುಟದಲ್ಲಿ ಚಿತ್ರದ ಆರಂಭಿಕ ದಿನದ ಗಳಿಕೆಯನ್ನು ಕಲ್ಕಿ 2898 AD ಒಟ್ಟು ಬಾಕ್ಸ್ ಆಫೀಸ್ ಕಲೆಕ್ಷನ್ಸ್(GBOC)ನಲ್ಲಿ 191.5 ಕೋಟಿ ರೂ. ಗಳಿಸಿದೆ ಎಂದು ಪೋಸ್ಟರ್ ಮೂಲಕ ಹಂಚಿಕೊಂಡಿದೆ.

ಕಲ್ಚಿ ಚಿತ್ರ ಮೊದಲ ದಿನದ ಗಳಿಕೆಯಲ್ಲಿ ಬಾಹುಬಲಿ, ಆರ್‌ಆರ್‌ಆರ್‌ ಸಿನಿಮಾಗಳ ಬಳಿಕ ಉತ್ತಮ ಆರಂಭ ಪಡೆದ ಮೂರನೇ ಭಾರತೀಯ ಸಿನಿಮಾವೆಂಬ ಖ್ಯಾತಿಗೆ ಪಾತ್ರವಾಗಿದೆ.

ಎಸ್‌ಎಸ್ ರಾಜಮೌಳಿ ಅವರ ಆರ್‌ಆರ್‌ಆರ್ ಚಿತ್ರ ಮೊದಲ ದಿನ 223 ಕೋಟಿ ರೂ. ಗಳಿಸಿತ್ತು ಮತ್ತು ಬಾಹುಬಲಿ 2 ಮೊದಲ ದಿನ 217 ಕೋಟಿ ರೂ. ಗಳಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ