ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಸಿನಿಮಾ ಸುದ್ದಿ

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಚಿತ್ರ ನಿರ್ದೇಶಕ ಎಂ.ಎಸ್. ಸತ್ಯುಗೆ "ಜೀವಮಾನ ಸಾಧನೆ ಪ್ರಶಸ್ತಿ"

ಖ್ಯಾತ ಚಲನಚಿತ್ರ ನಿರ್ದೇಶಕ, ಹಿರಿಯ ರಂಗಕರ್ಮಿ ಹಾಗೂ ಕಲಾ ನಿರ್ದೇಶಕರಾದ ಮೈಸೂರು ಶ್ರೀನಿವಾಸ ಸತ್ಯು (ಎಂ.ಎಸ್.ಸತ್ಯು) ಅವರಿಗೆ ರಾಜ್ಯ ಸರ್ಕಾರದ ವತಿಯಿಂದ "15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ "ಜೀವಮಾನ ಸಾಧನೆ ಪ್ರಶಸ್ತಿ"ಗೆ ಆಯ್ಕೆ ಮಾಡಲಾಗಿದೆ.

ಚಿತ್ರ ನಿರ್ದೇಶಕ MS ಸತ್ಯು
Srinivasa Murthy VN
Updated On : 5 Mar 2024, 10:05 pm

ಬೆಂಗಳೂರು: ಖ್ಯಾತ ಚಲನಚಿತ್ರ ನಿರ್ದೇಶಕ, ಹಿರಿಯ ರಂಗಕರ್ಮಿ ಹಾಗೂ ಕಲಾ ನಿರ್ದೇಶಕರಾದ ಮೈಸೂರು ಶ್ರೀನಿವಾಸ ಸತ್ಯು (ಎಂ.ಎಸ್.ಸತ್ಯು) ಅವರಿಗೆ ರಾಜ್ಯ ಸರ್ಕಾರದ ವತಿಯಿಂದ "15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ "ಜೀವಮಾನ ಸಾಧನೆ ಪ್ರಶಸ್ತಿ"ಗೆ ಆಯ್ಕೆ ಮಾಡಲಾಗಿದೆ.

ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರು ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, 'ಅಂತಾರಾಷ್ಟ್ರೀಯ ಖ್ಯಾತಿಯ ಚಲನಚಿತ್ರ ನಿರ್ದೇಶಕ, ಹಿರಿಯ ರಂಗಕರ್ಮಿ ಹಾಗೂ ಕಲಾ ನಿರ್ದೇಶಕರಾದ ಮೈಸೂರು ಶ್ರೀನಿವಾಸ ಸತ್ಯು (ಎಂ.ಎಸ್.ಸತ್ಯು) ಅವರು ಕಲಾಜಗತ್ತಿಗೆ ಸಲ್ಲಿಸಿರುವ ಅನನ್ಯ ಸೇವೆಯನ್ನು ಗುರುತಿಸಿ "15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ"ದ "ಜೀವಮಾನ ಸಾಧನೆ ಪ್ರಶಸ್ತಿ"ಗೆ ಆಯ್ಕೆ ಮಾಡಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

Also Read

ಮಾರ್ಚ್ 23ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: 300 ಚಿತ್ರಗಳ ಪ್ರದರ್ಶನ

'ಸತ್ಯು ಅವರ ನಿರ್ದೇಶನದ ಹಿಂದಿ ಚಿತ್ರ ಗರಂ ಹಲವಾರು ರಾಷ್ಟ್ರೀಯ - ಅಂತಾರಾಷ್ಟ್ರೀಯ ಪ್ರಶಸ್ತಿ ಗಳಿಸಿದ್ದರೆ, ಕನ್ನಡದ 'ಬರ' ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿಗಳನ್ನು ಪಡೆದಿತ್ತು. ಕಲಾ ನಿರ್ದೇಶಕರಾಗಿ ಅವರು ನಿರ್ದೇಶಿಸಿದ ಮೊದಲ ಚಲನಚಿತ್ರವಾದ ಹಕೀಕತ್ 'ಫಿಲ್ಮ್ ಫೇರ್ ಪ್ರಶಸ್ತಿ'ಯನ್ನು ಪಡೆದಿತ್ತು. ಅವರ ದಾರಾಶೀಕೋ ನಾಟಕವು ಆಧುನಿಕ ಉತ್ಕೃಷ್ಟ ನಾಟಕವೆಂದು ಗುರುತಿಸಲ್ಪಟ್ಟಿದ್ದು ಅವರ ಇನ್ನೊಂದು ಸಾಧನೆಯಾಗಿದೆ. ಹೀಗೆ ನಮ್ಮೂರಿನಲ್ಲಿ ಹುಟ್ಟಿದ ಮೇರು ಸಾಧಕ, ಹಿರಿಯ ರಂಗಕರ್ಮಿಯೊಬ್ಬರು ಈ ಪ್ರಶಸ್ತಿಗೆ ಆಯ್ಕೆಯಾಗಿರುವುದು ಅತ್ಯಂತ ಖುಷಿಯ ವಿಚಾರ. ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement