ದಿ ಡೆವಿಲ್ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

ಮಾರ್ಚ್ 22 ರಿಂದ ದರ್ಶನ್ ನಟನೆಯ ಡೆವಿಲ್ ಸಿನಿಮಾ ಶೂಟಿಂಗ್ ಆರಂಭ

ಕಾಟೇರಾ ಸಿನಿಮಾ ಯಶಸ್ಸಿನ ನಂತರ ದರ್ಶನ್ ಪ್ರಕಾಶ್ ವೀರ್ ನಿರ್ದೇಶನದ ಅವರ ಡೆವಿಲ್ - ದಿ ಹೀರೋ ಸಿನಿಮಾಗಾಗಿ ಸಜ್ಜಾಗುತ್ತಿದ್ದಾರೆ. ಡೆವಿಲ್ ಟೀಸರ್ ಮೂಲಕವೇ ಸಾಕಷ್ಟು ಕುತೂಹಲ ಮೂಡಿಸಿದೆ

ಕಾಟೇರಾ ಸಿನಿಮಾ ಯಶಸ್ಸಿನ ನಂತರ ದರ್ಶನ್ ಪ್ರಕಾಶ್ ವೀರ್ ನಿರ್ದೇಶನದ ಅವರ ಡೆವಿಲ್ - ದಿ ಹೀರೋ ಸಿನಿಮಾಗಾಗಿ ಸಜ್ಜಾಗುತ್ತಿದ್ದಾರೆ. ಡೆವಿಲ್ ಟೀಸರ್ ಮೂಲಕವೇ ಸಾಕಷ್ಟು ಕುತೂಹಲ ಮೂಡಿಸಿದೆ.

ಫೆಬ್ರವರಿಯಲ್ಲಿ ಬಿಡುಗಡೆಯಾದ 2 ನಿಮಿಷಗಳ ಟೀಸರ್ ಬಿಡುಗಡೆಯಾಗಿತ್ತು. ಟೀಸರ್‌ನಲ್ಲಿ ದರ್ಶನ್ ಲುಕ್, ಡೈಲಾಗ್ ಡೆಲಿವರಿ ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ. ಹೀಗಾಗಿ ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎಂಬ ಬಗ್ಗೆ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.

ಅಕ್ಟೋಬರ್ ನಲ್ಲಿ ಸಿನಿಮಾ ಬಿಡುಗಡೆಯಾಗುವುದಾಗಿ ದರ್ಶನ್ ಈ ಹಿಂಗೆ ಸುಳಿವು ನೀಡಿದ್ದರು. ಮಾರ್ಚ್ 22 ರಂದು ಚಿತ್ರದ ಚಿತ್ರೀಕರಣ ಆರಂಭಿಸಲು ನಿರ್ದೇಶಕರು ತೀರ್ಮಾನಿಸಿದ್ದು. ಚಿತ್ರದ ಮೊದಲ ಶೆಡ್ಯೂಲ್ ಬೆಂಗಳೂರಿನಲ್ಲಿ ಪ್ರಾರಂಭವಾಗಲಿದೆ.

ಡೆವಿಲ್ - ದಿ ಹೀರೋ ಮಾಸ್ ಎಂಟರ್‌ಟೈನರ್ ಆಗಲು ಸಿದ್ಧವಾಗಿದೆ ಮತ್ತು ತಾರಕ್ ನಂತರ ನಟ ಮತ್ತು ನಿರ್ದೇಶಕರ ಎರಡನೇ ಸಿನಿಮಾ ಇದಾಗಿದೆ. ಚಿತ್ರದ ಇತರ ಕಲಾವಿದರ ಪಾತ್ರಗಳ ವಿವರಗಳನ್ನು ಇನ್ನೂ ಬಹಿರಂಗ ಪಡಿಸಿಲ್ಲ.

ಜೈ ಮಠ ಕಂಬೈನ್ಸ್ ಪ್ರಸ್ತುತಿ ಮತ್ತು ಜೆ ಜಯಮ್ಮ ಮತ್ತು ಪ್ರಕಾಶ್ ವೀರ್ ಅವರು ತಮ್ಮ ಬ್ಯಾನರ್ ವೈಷ್ಣೋ ಸ್ಟುಡಿಯೋಸ್ ಅಡಿಯಲ್ಲಿ ನಿರ್ಮಿಸಿರುವ ಈ ಚಿತ್ರಕ್ಕೆ ಸುಧಾಕರ್ ಎಸ್ ರಾಜ್ ಅವರ ಛಾಯಾಗ್ರಹಣವಿದೆ. ಇದೇ ಮೊದಲ ಬಾರಿಗೆ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ದರ್ಶನ್ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದಾರೆ, ಈಗಾಗಲೇ ಮ್ಯೂಸಿಕ್ ಲೇಬಲ್ ಸರೆಗಮ ಆಡಿಯೋ ಹಕ್ಕುಗಳನ್ನು ಪಡೆದುಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!