ಒಂದು ಸರಳ ಪ್ರೇಮಕಥೆ ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

ಸಿಂಪಲ್‌ ಸುನಿ ನಿರ್ದೇಶನದ 'ಒಂದು ಸರಳ ಪ್ರೇಮಕಥೆ' OTT ಯಲ್ಲಿ ಬಿಡುಗಡೆ

ನಟ ವಿನಯ್ ರಾಜ್‌ಕುಮಾರ್ ಅಭಿನಯದ, ಸಿಂಪಲ್ ಸುನಿ ನಿರ್ದೇಶನದ ‘ಒಂದು ಸರಳ ಪ್ರೇಮ ಕಥೆ’ ಸಿನಿಮಾ ಸದ್ದಿಲ್ಲದೆ ಒಟಿಟಿಯಲ್ಲಿ ಬಿಡುಗಡೆಯಾಗಿದೆ. ಫೆಬ್ರುವರಿ 8 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಂಡಿದ್ದ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ನಟ ವಿನಯ್ ರಾಜ್‌ಕುಮಾರ್ ಅಭಿನಯದ, ಸಿಂಪಲ್ ಸುನಿ ನಿರ್ದೇಶನದ ‘ಒಂದು ಸರಳ ಪ್ರೇಮ ಕಥೆ’ ಸಿನಿಮಾ ಸದ್ದಿಲ್ಲದೆ ಒಟಿಟಿಯಲ್ಲಿ ಬಿಡುಗಡೆಯಾಗಿದೆ. ಫೆಬ್ರುವರಿ 8 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಂಡಿದ್ದ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ವಿನಯ್ ರಾಜ್‌ಕುಮಾರ್ ಅವರಿಗೆ ಜೊತೆಯಾಗಿ ಸ್ವಾತಿಷ್ಠ ಕೃಷ್ಣನ್ ಮತ್ತು ಮಲ್ಲಿಕಾ ಸಿಂಗ್ ನಾಯಕಿಯರಾಗಿ ನಟಿಸಿದ್ದು, ಇನ್ನುಳಿದಂತೆ ರಾಜೇಶ್ ನಟರಂಗ, ಅರುಣಾ ಬಾಲರಾಜ್, ಸಾಧು ಕೋಕಿಲ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಈ ಚಿತ್ರವನ್ನು ಮೈಸೂರಿನ ರಮೇಶ್ ನಿರ್ಮಿಸಿದ್ದಾರೆ. ನಟ ರಾಘವೇಂದ್ರ ರಾಜ್‌ಕುಮಾರ್ ಸಂಗೀತ ಶಿಕ್ಷಕರಾಗಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಮತ್ತು ಶ್ವೇತಾ ಶ್ರೀವಾತ್ಸವ್ ಗಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ವೀರ್ ಸಮರ್ಥ್ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದು, ಕಾರ್ತಿಕ್ ಶರ್ಮಾ ಮತ್ತು ಸಭಾ ಕುಮಾರ್ ಛಾಯಾಗ್ರಹಣವನ್ನು ನಿರ್ವಹಿಸಿದ್ದಾರೆ ಮತ್ತು ಆದಿ ಸಂಕಲನವನ್ನು ನಿರ್ವಹಿಸಿದ್ದಾರೆ.

ಮಾರ್ಚ್ 19 ರಿಂದ ಒಂದು ಸರಳ ಪ್ರೇಮಕಥೆ ಸಿನಿಮಾ ಅಮೇಜಾನ್ ಪ್ರೈಮ್‌ನಲ್ಲಿ ಪ್ರಸಾರವಾಗುತ್ತಿದ್ದು, ವೀಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಈಮಧ್ಯೆ, ಸ್ಟಾರ್ ಸುವರ್ಣ ವಾಹಿನಿಯು ಸ್ಯಾಟಲೈಟ್ ಹಕ್ಕುಗಳನ್ನು ಪಡೆದುಕೊಂಡಿದೆ. ಈ ಮೂಲಕ ಕಿರುತೆರೆಯಲ್ಲೂ ಪ್ರೇಕ್ಷಕರಿಗೆ ಚಿತ್ರ ವೀಕ್ಷಣೆಗೆ ಲಭ್ಯವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್