ಯುವ ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

ರಾಜ್ಯದಾದ್ಯಂತ 350ಕ್ಕೂ ಹೆಚ್ಚು ತೆರೆಗಳಲ್ಲಿ ಅಬ್ಬರಿಸಲು 'ಯುವ' ಸಿನಿಮಾ ಸಜ್ಜು!

ದೊಡ್ಮನೆ ಕುಡಿ ಯುವ ರಾಜ್‌ಕುಮಾರ್ ಅವರ ಬಹುನಿರೀಕ್ಷಿತ 'ಯುವ' ಚಿತ್ರವು ಮಾರ್ಚ್ 29ರಂದು ತೆರೆಗೆ ಬರಲು ಸಜ್ಜಾಗಿದ್ದು, ವ್ಯಾಪಕ ನಿರೀಕ್ಷೆ ಹುಟ್ಟುಹಾಕಿದೆ. ಇಂದು ಮಧ್ಯಾಹ್ನ 1 ಗಂಟೆಗೆ ಟ್ರೇಲರ್ ಬಿಡುಗಡೆ ಮಾಡಲಾಗುವುದು ಎಂದು ಚಿತ್ರತಂಡ ಘೋಷಿಸಿದೆ. ಸಿಂಗಲ್ ಸ್ಕ್ರೀನ್‌ಗಳು ಮತ್ತು ಮಲ್ಟಿಪ್ಲೆಕ್ಸ್‌ಗಳು ಸೇರಿದಂತೆ 350ಕ್ಕೂ ಹೆಚ್ಚು ಪರದೆಗಳಲ್ಲಿ ಚಿತ್ರ ಪ್ರದರ್ಶನಕ್ಕೆ ಸಜ್ಜಾಗಿದೆ.

ದೊಡ್ಮನೆ ಕುಡಿ ಯುವ ರಾಜ್‌ಕುಮಾರ್ ಅವರ ಬಹುನಿರೀಕ್ಷಿತ 'ಯುವ' ಚಿತ್ರವು ಮಾರ್ಚ್ 29ರಂದು ತೆರೆಗೆ ಬರಲು ಸಜ್ಜಾಗಿದ್ದು, ವ್ಯಾಪಕ ನಿರೀಕ್ಷೆ ಹುಟ್ಟುಹಾಕಿದೆ. ಇಂದು ಮಧ್ಯಾಹ್ನ 1 ಗಂಟೆಗೆ ಟ್ರೇಲರ್ ಬಿಡುಗಡೆ ಮಾಡಲಾಗುವುದು ಎಂದು ಚಿತ್ರತಂಡ ಘೋಷಿಸಿದೆ.

ಸಂತೋಷ್ ಆನಂದ್‌ರಾಮ್ ನಿರ್ದೇಶನದ ಮತ್ತು ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಯುವ ಚಿತ್ರವು ಕರ್ನಾಟಕದಾದ್ಯಂತ ಗ್ರ್ಯಾಂಡ್ ರಿಲೀಸ್ ಆಗುತ್ತಿದೆ. ಸಿಂಗಲ್ ಸ್ಕ್ರೀನ್‌ಗಳು ಮತ್ತು ಮಲ್ಟಿಪ್ಲೆಕ್ಸ್‌ಗಳು ಸೇರಿದಂತೆ 350ಕ್ಕೂ ಹೆಚ್ಚು ಪರದೆಗಳಲ್ಲಿ ಚಿತ್ರ ಪ್ರದರ್ಶನಕ್ಕೆ ಸಜ್ಜಾಗಿದೆ. ಯುವ ಚಿತ್ರಮಂದಿರಗಳಲ್ಲಿನ ತನ್ನ ಓಟದ ನಂತರ ಬಹು ಭಾಷೆಗಳಲ್ಲಿ OTT ವೇದಿಕೆಗಳಲ್ಲಿ ಬಿಡುಗಡೆಯಾಗಲಿದೆ.

ಯುವ ಚಿತ್ರದ ಕಥಾಹಂದರವು ಕಾಲೇಜು ಮತ್ತು ಕ್ರೀಡೆಗಳ ಹಿನ್ನೆಲೆಯಲ್ಲಿ ಯುವಕನ ಜೀವನದ ಸುತ್ತ ಸುತ್ತುತ್ತದೆ. ಯುವ ರಾಜ್‌ಕುಮಾರ್ ಅವರು ಫುಡ್ ಡೆಲಿವರಿ ಹುಡುಗನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾ ತಂದೆ-ಮಗನ ಸಂಬಂಧದ ಜಟಿಲತೆಗಳನ್ನು ಸಹ ಒಳಗೊಂಡಿದೆ. ಡ್ರಾಮಾ, ಎಮೋಷನ್ಸ್ ಮತ್ತು ಎಂಟರ್‌ಟೈನ್‌ಮೆಂಟ್ ಮಿಶ್ರಣದ ಭರವಸೆ ನೀಡುತ್ತದೆ.

ಕಾಂತಾರ ಖ್ಯಾತಿಯ ನಟಿ ಸಪ್ತಮಿ ಗೌಡ ಅವರು ಯುವ ರಾಜ್‌ಕುಮಾರ್ ಅವರೊಂದಿಗೆ ಮೊದಲ ಬಾರಿಗೆ ತೆರೆ ಹಂಚಿಕೊಳ್ಳಲಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರ ಸಂಗೀತ ಸಂಯೋಜನೆ ಮತ್ತು ಶ್ರೀಶ ಕುದುವಳ್ಳಿ ಅವರ ಛಾಯಾಗ್ರಹಣವಿದೆ. ಇನ್ನುಳಿದಂತೆ ಚಿತ್ರದಲ್ಲಿ ಅಚ್ಯುತ್ ಕುಮಾರ್, ಕಿಶೋರ್ ಮತ್ತು ಹಿತಾ ಚಂದ್ರಶೇಖರ್ ಸೇರಿದಂತೆ ಇತರರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT