ಆಡುಜೀವಿತಂ ಚಿತ್ರತಂಡ 
ಸಿನಿಮಾ ಸುದ್ದಿ

ಪೃಥ್ವಿರಾಜ್ ಸುಕುಮಾರನ್ ಅಭಿನಯದ ಬಹುನಿರೀಕ್ಷಿತ 'Aadujeevitham- The Goat Life' ಚಿತ್ರ ನಾಳೆ ತೆರೆಗೆ

ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ನಿರ್ದೇಶನದಲ್ಲಿ ಪೃಥ್ವಿರಾಜ್ ಸುಕುಮಾರನ್ ನಟನೆಯ ಬಹುನಿರೀಕ್ಷಿತ 'ಆಡುಜೀವಿತಂ' (ದಿ ಗೋಟ್ ಲೈಫ್) ಚಿತ್ರ ನಾಳೆ (ಮಾರ್ಚ್ 28) ತೆರೆಗೆ ಬರಲಿದೆ. ಕರ್ನಾಟಕದಲ್ಲಿ ಚಿತ್ರ ವಿತರಣೆಯ ಜವಾಬ್ದಾರಿಯನ್ನು ವಿಜಯ್ ಕಿರಗಂದೂರು ಅವರ ಹೊಂಬಾಳೆ ಫಿಲ್ಮ್ಸ್ ಹೊತ್ತುಕೊಂಡಿದ್ದು, ನಾಳೆ ಈ ಚಿತ್ರ ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ನಿರ್ದೇಶನದಲ್ಲಿ ಪೃಥ್ವಿರಾಜ್ ಸುಕುಮಾರನ್ ನಟನೆಯ ಬಹುನಿರೀಕ್ಷಿತ 'ಆಡುಜೀವಿತಂ' (ದಿ ಗೋಟ್ ಲೈಫ್) ಚಿತ್ರ ನಾಳೆ (ಮಾರ್ಚ್ 28) ತೆರೆಗೆ ಬರಲಿದೆ. ಕರ್ನಾಟಕದಲ್ಲಿ ಚಿತ್ರ ವಿತರಣೆಯ ಜವಾಬ್ದಾರಿಯನ್ನು ವಿಜಯ್ ಕಿರಗಂದೂರು ಅವರ ಹೊಂಬಾಳೆ ಫಿಲ್ಮ್ಸ್ ಹೊತ್ತುಕೊಂಡಿದ್ದು, ನಾಳೆ ಈ ಚಿತ್ರ ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ವಿಜಯ್ ಕಿರಗಂದೂರು ಹಾಗೂ ನಟ ಪೃಥ್ವಿರಾಜ್ ಸುಕುಮಾರನ್ ಸ್ನೇಹಿತರಾಗಿದ್ದು, ಈ ಹಿಂದೆ ಕೆಜಿಎಫ್: ಅಧ್ಯಾಯ 1 ಮತ್ತು 2, ಕಾಂತಾರ ಮತ್ತು ಸಲಾರ್‌ನಂತಹ ಯಶಸ್ವಿ ಸಿನಿಮಾಗಳನ್ನು ಕೇರಳದಲ್ಲಿ ಪೃಥ್ವಿರಾಜ್ ಪ್ರೊಡಕ್ಷನ್ಸ್‌ ವಿತರಿಸಿತ್ತು. ಇದೀಗ ಹೊಂಬಾಳೆ ಫಿಲ್ಮ್ಸ್ ಆಡುಜೀವಿತಂ ಚಿತ್ರವನ್ನು ಬಿಡುಗಡೆ ಮಾಡುತ್ತಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಟ ಪೃಥ್ವಿರಾಜ್, ವಿಜಯ್ ಕಿರಗಂದೂರು ಅವರು ನನಗೆ ಆತ್ಮೀಯ ಸ್ನೇಹಿತರು. ನಮ್ಮ ಆಡುಜೀವಿತಂ ಚಿತ್ರವನ್ನು ಕರ್ನಾಟಕದಾದ್ಯಂತ ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಬಿಡುಗಡೆ ಮಾಡುತ್ತಿದೆ. ಕೆಜಿಎಫ್, ಕಾಂತಾರದಂತಹ ಯಶಸ್ವಿ ಚಿತ್ರಗಳನ್ನು ನಿರ್ಮಾಣ ಮಾಡಿರುವ ಹೊಂಬಾಳೆ ಫಿಲ್ಮ್ಸ್ ಮೂಲಕ ನಮ್ಮ ಚಿತ್ರ ಬಿಡುಗಡೆಯಾಗುತ್ತಿರುವುದು ತುಂಬಾ ಸಂತೋಷವಾಗಿದೆ ಎಂದರು.

2008ರಲ್ಲಿ ಬ್ಲೆಸ್ಸಿ ಅವರು 'ದಿ ಗೋಟ್ ಲೈಫ್' ಚಿತ್ರ ಮಾಡಬೇಕೆಂದುಕೊಂಡಿದ್ದರು. ಆದರೆ, 2018ರಲ್ಲಿ ಚಿತ್ರದ ಚಿತ್ರೀಕರಣ ಪ್ರಾರಂಭವಾಯಿತು. ಈ ಚಿತ್ರದ ಹಿಂದೆ 16 ವರ್ಷಗಳ ಪರಿಶ್ರಮವಿದೆ. ನಾನು ಈ ಚಿತ್ರಕ್ಕಾಗಿ 31 ಕೆಜಿ ತೂಕ ಕಡಿಮೆ ಮಾಡಿಕೊಂಡಿದ್ದೇನೆ. ಇದು ಬೆನ್ಯಾಮಿನ್ ಅವರು ಬರೆದಿರುವ 'ಆಡುಜೀವಿತಂ' ಕಾದಂಬರಿ ಆಧರಿಸಿದೆ. ಈ ಜನಪ್ರಿಯ ಕಾದಂಬರಿ ಈವರೆಗೂ 251 ಬಾರಿ ಮುದ್ರಣವಾಗಿದೆ. ನಜೀಬ್ ಎಂಬುವವರ ಜೀವನದ ನೈಜ ಕಥೆ ಇದಾಗಿದೆ. ಚಿತ್ರದಲ್ಲಿ ನಟಿ ಅಮಲಾ ಪೌಲ್, ಹಾಲಿವುಡ್ ನಟ ಜಿಮ್ಮಿ ಜೀನ್ ಲೂಯಿಸ್ ಸೇರಿ ಇತರರು ನಟಿಸಿದ್ದಾರೆ. ಎ.ಆರ್ ರೆಹಮಾನ್ ಅವರು ಸಂಗೀತ ಸಂಯೋಜಿಸಿದ್ದಾರೆ ಎಂದು ಹೇಳಿದರು.

ಚಿತ್ರವು ಮಾರ್ಚ್ 28 ರಂದು ಮಲಯಾಳಂ, ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಚಿತ್ರವನ್ನು ಎಲ್ಲರೂ ನೋಡಿ ಎಂದರು.

ನಿರ್ದೇಶಕ ಬ್ಲೆಸ್ಸಿ. ಹಾಲಿವುಡ್ ನಟ ಜಿಮ್ಮಿ ಜೀನ್ ಲೂಯಿಸ್ ಸಹ ಈ ಚಿತ್ರದಲ್ಲಿ ನಟಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT