ಜಸ್ಟ್ ಮ್ಯಾರೀಡ್ ಚಿತ್ರತಂಡ 
ಸಿನಿಮಾ ಸುದ್ದಿ

'ಜಸ್ಟ್ ಮ್ಯಾರೀಡ್' ಚಿತ್ರದಲ್ಲಿ ಬಿಗ್ ಬಾಸ್ ವಿನ್ನರ್ ಶೈನ್ ಶೆಟ್ಟಿ ಜಾಹೀರಾತು ನಿರ್ದೇಶಕನ ಪಾತ್ರ!

ಜಸ್ಟ್ ಮ್ಯಾರೀಡ್‌ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದ್ದು, ಸಂಗೀತ ಸಂಯೋಜಕ ಬಿ ಅಜನೀಶ್ ಲೋಕನಾಥ್ ಅವರು ಮೊದಲ ಬಾರಿಗೆ ನಿರ್ಮಾಪಕರಾಗಿ ಪದಾರ್ಪಣೆ ಮಾಡುತ್ತಿದ್ದಾರೆ. ಸಿಆರ್ ಬಾಬಿ ಅವರು ಇದೇ ಮೊದಲ ಬಾರಿಗೆ ಚಿತ್ರದ ನಿರ್ದೇಶನದ ಹೊಣೆ ಹೊತ್ತಿದ್ದಾರೆ. ಅಲ್ಲದೆ, ಸಹ-ನಿರ್ಮಾಣವನ್ನು ಮಾಡುತ್ತಿದ್ದಾರೆ. ಚಿತ್ರದಲ್ಲಿ ಶೈನ್ ಶೆಟ್ಟಿ ಅವರು ಜಾಹೀರಾತು ನಿರ್ದೇಶಕ ಸೂರ್ಯನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಜಸ್ಟ್ ಮ್ಯಾರೀಡ್‌ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದ್ದು, ಸಂಗೀತ ಸಂಯೋಜಕ ಬಿ ಅಜನೀಶ್ ಲೋಕನಾಥ್ ಅವರು ಮೊದಲ ಬಾರಿಗೆ ನಿರ್ಮಾಪಕರಾಗಿ ಪದಾರ್ಪಣೆ ಮಾಡುತ್ತಿದ್ದಾರೆ. ಸಿಆರ್ ಬಾಬಿ ಅವರು ಇದೇ ಮೊದಲ ಬಾರಿಗೆ ಚಿತ್ರದ ನಿರ್ದೇಶನದ ಹೊಣೆ ಹೊತ್ತಿದ್ದಾರೆ. ಅಲ್ಲದೆ, ಸಹ-ನಿರ್ಮಾಣವನ್ನು ಮಾಡುತ್ತಿದ್ದಾರೆ.

ಬಿಗ್ ಬಾಸ್ ವಿನ್ನರ್ ಶೈನ್ ಶೆಟ್ಟಿಯ ಪಾತ್ರದ ಬಗ್ಗೆ ಚಿತ್ರತಂಡ ಮಹತ್ವದ ಮಾಹಿತಿ ನೀಡಿದೆ. ಚಿತ್ರದಲ್ಲಿ ಶೈನ್ ಶೆಟ್ಟಿ ಅವರು ಜಾಹೀರಾತು ನಿರ್ದೇಶಕ ಸೂರ್ಯನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಚಿತ್ರದಲ್ಲಿ ಶೈನ್ ಶೆಟ್ಟಿ ಅವರ ಸೂರ್ಯ ಪಾತ್ರದ ಪ್ರಾಮುಖ್ಯತೆಯನ್ನು ಹೆಚ್ಚಿಸಲು ನಿರ್ದೇಶಕಿ ಬಾಬಿ ಅವರು ಆಸಕ್ತಿದಾಯಕ ತಾರಾಗಣವನ್ನು ಆಯ್ಕೆ ಮಾಡಿದ್ದಾರೆ. ಗೋವಾದ ಮಾಡೆಲ್‌ಗಳಾದ ಅರ್ಹನಾ ಮತ್ತು ಲುವಾನಾ ಅವರನ್ನು ಚಿತ್ರದ ಕೆಲವು ಪಾತ್ರಗಳಿಗೆ ಹಾಕಲು ಬಾಬಿ ನಿರ್ಧರಿಸಿದ್ದಾರೆ. ತಮ್ಮ ಸಿಬ್ಬಂದಿಯಲ್ಲಿ ಒಬ್ಬರಾದ, ವೃತ್ತಿಪರ ನಟರಲ್ಲದ ಜನರೇಟರ್ ಆಪರೇಟರ್ ಗುರು ಮಲ್ಲಪ್ಪ ಅವರು ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಶೈನ್ ಶೆಟ್ಟಿ ಅವರಿಗೆ ಜೋಡಿಯಾಗಿ ಅಂಕಿತಾ ಅಮರ್ ಕಾಣಿಸಿಕೊಂಡಿದ್ದಾರೆ. ಇನ್ನುಳಿದಂತೆ ದೇವರಾಜ್, ಶ್ರುತಿ ಕೃಷ್ಣ, ನಿರ್ದೇಶಕ-ನಟ ಅನೂಪ್ ಭಂಡಾರಿ, ಸಾಕ್ಷಿ ಅಗರ್ವಾಲ್, ಶ್ರುತಿ ಹರಿಹರನ್, ಅಚ್ಯುತ್ ಕುಮಾರ್ ಸೇರಿದಂತೆ ಇತರರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಪಾರ್ತಿಬನ್ ಜಿ ಅವರ ಛಾಯಾಗ್ರಹಣ, ಅಮರ್ ಅವರ ಕಲಾ ನಿರ್ದೇಶನ ಮತ್ತು ಅಜನೀಶ್ ಅವರ ಸಂಗೀತ ಸಂಯೋಜನೆಯಿದೆ. ಚಿತ್ರದ ಸಂಭಾಷಣೆಯನ್ನು ರಘು ನಿಡುವಳ್ಳಿ ಬರೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT