ಫ್ಯಾಮಿಲಿ ಸ್ಟಾರ್ ಚಿತ್ರದ ಸ್ಟಿಲ್ - ದಿಲ್ ರಾಜು 
ಸಿನಿಮಾ ಸುದ್ದಿ

ವಿಜಯ್ ದೇವರಕೊಂಡ, ಮೃಣಾಲ್ ಠಾಕೂರ್ ಅಭಿನಯದ 'ಫ್ಯಾಮಿಲಿ ಸ್ಟಾರ್' ಬಿಡುಗಡೆಗೆ ದಿನಾಂಕ ನಿಗದಿ

ಫ್ಯಾಮಿಲಿ ಸ್ಟಾರ್ ತಂಡ ಸದ್ಯ ಆಂಧ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡು ರಾಜ್ಯಗಳಲ್ಲಿ ತಮ್ಮ ಚಿತ್ರದ ಪ್ರಚಾರ ಕಾರ್ಯದಲ್ಲಿ ನಿರತವಾಗಿದೆ. ಶುಕ್ರವಾರ ಚೆನ್ನೈನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಿರ್ಮಾಪಕ ದಿಲ್ ರಾಜು, ತಮ್ಮ ಚಿತ್ರದ ಬಿಡುಗಡೆಯ ಯೋಜನೆ ಮತ್ತು ಇತರ ವಿವರಗಳನ್ನು ತಿಳಿಸಿದರು.

ಫ್ಯಾಮಿಲಿ ಸ್ಟಾರ್ ತಂಡ ಸದ್ಯ ಆಂಧ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡು ರಾಜ್ಯಗಳಲ್ಲಿ ತಮ್ಮ ಚಿತ್ರದ ಪ್ರಚಾರ ಕಾರ್ಯದಲ್ಲಿ ನಿರತವಾಗಿದೆ. ಶುಕ್ರವಾರ ಚೆನ್ನೈನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಿರ್ಮಾಪಕ ದಿಲ್ ರಾಜು, ತಮ್ಮ ಚಿತ್ರದ ಬಿಡುಗಡೆಯ ಯೋಜನೆ ಮತ್ತು ಇತರ ವಿವರಗಳನ್ನು ತಿಳಿಸಿದರು. ವಿಜಯ್ ದೇವರಕೊಂಡ ಕೂಡ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ದಿಲ್ ರಾಜು ಮಾತನಾಡಿ, ತಮಿಳುನಾಡಿನಲ್ಲಿ 250 ಚಿತ್ರಮಂದಿರಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದೇವೆ. ಇದೊಂದು ಕ್ಲೀನ್ ಫ್ಯಾಮಿಲಿ ಎಂಟರ್‌ಟೈನರ್. ಯುವಕರು, ಮಾಸ್, ಕುಟುಂಬ, ಮಕ್ಕಳು, ಎಲ್ಲರೂ ಈ ಚಿತ್ರವನ್ನು ಆನಂದಿಸುತ್ತಾರೆ. ಚಿತ್ರದ ಅಂತಿಮ ರನ್‌ಟೈಮ್ 2 ಗಂಟೆ 40 ನಿಮಿಷಗಳು ಮತ್ತು ಚಿತ್ರದಲ್ಲಿ ಅಳವಡಿಸಲಾದ ಒಂದೆರಡು ಸಾಹಸ ದೃಶ್ಯಗಳಿಂದಾಗಿ ಫ್ಯಾಮಿಲಿ ಸ್ಟಾರ್ ಯು/ಎ ಪ್ರಮಾಣಪತ್ರವನ್ನು ಪಡೆದಿದೆ ಎಂದರು.

ಫ್ಯಾಮಿಲಿ ಸ್ಟಾರ್ ಸಿನಿಮಾವನ್ನು ಪ್ಯಾನ್-ಇಂಡಿಯಾ ಚಿತ್ರವೆಂದು ಹೇಳಲಾಗಿದ್ದರೂ, ಚಿತ್ರವನ್ನು ಆರಂಭದಲ್ಲಿ ತೆಲುಗು ಮತ್ತು ತಮಿಳಿನಲ್ಲಿ ಮಾತ್ರ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಅದಾದ 2 ವಾರಗಳ ನಂತರ ಹಿಂದಿ ಮತ್ತು ಮಲಯಾಳಂನಲ್ಲಿಯೂ ಚಿತ್ರ ಬಿಡುಗಡೆ ಮಾಡಲು ಯೋಜಿಸುತ್ತಿದ್ದೇವೆ ಎಂದು ದಿಲ್ ರಾಜು ವಿವರಿಸಿದರು.

ಪರಶುರಾಮ್ ಪೆಟ್ಲಾ ನಿರ್ದೇಶನದ ಫ್ಯಾಮಿಲಿ ಸ್ಟಾರ್ ಚಿತ್ರದಲ್ಲಿ ನಟ ವಿಜಯ್ ದೇವರಕೊಂಡ ಮತ್ತು ಮೃಣಾಲ್ ಠಾಕೂರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಏಪ್ರಿಲ್ 5ರಂದು ತೆಲುಗು ಮತ್ತು ತಮಿಳಿನಲ್ಲಿ ಚಿತ್ರ ಬಿಡುಗಡೆಯಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT