ಚಿಕ್ಕಮಗಳೂರು: ಸ್ಯಾಂಡಲ್ವುಡ್ ನಟಿ ಮಾನ್ವಿತಾ ಕಾಮತ್ ಅವರು ಮೈಸೂರಿನ ಹುಡುಗ ಅರುಣ್ ಕಮಾರ್ ಜೊತೆ ಬುಧವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಚಿಕ್ಕಮಗಳೂರಿನ ಕಳಸದಲ್ಲಿ ಮಾನ್ವಿತಾ ಹಾಗೂ ಅರುಣ್ ಮದುವೆ ಅದ್ಧೂರಿಯಾಗಿ ನಡೆಯಿತು. 2 ಕುಟುಂಬದವರು, ಆಪ್ತರು ಹಾಗೂ ಕನ್ನಡ ಚಿತ್ರರಂಗದ ಗಣ್ಯರು ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದರು.
ನಿನ್ನೆ ನವಜೋಡಿಯ ಅರಿಶಿನ ಶಾಸ್ತ್ರ, ಮೆಹಂದಿ ಮತ್ತು ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು. ವಿವಾಹ ಪೂರ್ವ ಕಾರ್ಯಕ್ರಮದಲ್ಲಿ ನವಜೋಡಿ ನೇರಳೆ ಬಣ್ಣದ ಧಿರಿಸಿನಲ್ಲಿ ಮಿಂಚಿದ್ದರು.
ಮಾನ್ವಿತಾ ಮದುವೆ ಸಂಭ್ರಮದಲ್ಲಿ ನಿಧಿ ಸುಬ್ಬಯ್ಯ, ಶ್ರುತಿ ಹರಿಹರನ್ , ರಿಲಾಕ್ಸ್ ಸತ್ಯ ನಟ ಪ್ರಭು, ನಿರೂಪಕ ನಿರಂಜನ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಮಾನ್ವಿತಾ ಮತ್ತು ಅರುಣ್ ಅವರದ್ದು ಅರೇಂಜ್ ಮ್ಯಾರೇಜ್ ಆಗಿದ್ದು, ಅಮ್ಮ ನೋಡಿದ ವರನೊಂದಿಗೆ ಮಾನ್ವಿತಾ ದಾಂಪತ್ಯ ಜೀವನಕ್ಕ ಕಾಲಿಟ್ಟಿದ್ದಾರೆ. ಮಾನ್ವಿತಾ, ಅರುಣ್ ಅವರ ವಿವಾಹ ಕೊಂಕಣಿ ಸಂಪ್ರದಾಯದಂತೆ ನಡೆದಿದೆ. ಕಳಸದ 500 ವರ್ಷಗಳ ಇತಿಹಾಸ ಇರುವ ವೆಂಕಟೇಶ್ವರ ದೇವಾಲಯದಲ್ಲಿ ವಿವಾಹ ನೆರವೇರಿದೆ.