ರುದ್ರ ಗರುಡ ಪುರಾಣ ಪೋಸ್ಟರ್ 
ಸಿನಿಮಾ ಸುದ್ದಿ

ಮಿಸ್ಟರಿ ಥ್ರಿಲ್ಲರ್ 'ರುದ್ರ ಗರುಡ ಪುರಾಣ'ದಲ್ಲಿ ತನಿಖಾಧಿಕಾರಿಯಾಗಿ ರಿಷಿ; ಚಿತ್ರದ ಫಸ್ಟ್ ಲುಕ್ ಬಿಡುಗಡೆ

ಸದ್ಯ ತೆಲುಗು ಮತ್ತು ಕನ್ನಡ ಇಂಡಸ್ಟ್ರಿಯ ನಡುವೆ ಜಗ್ಗಾಡುತ್ತಿರುವ 'ಆಪರೇಷನ್ ಅಲಮೇಲಮ್ಮ' ಚಿತ್ರದ ನಟ ರಿಷಿ 'ರಾಮನ ಅವತಾರ' ಚಿತ್ರ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಈಮಧ್ಯೆ, ರಿಷಿ 'ರುದ್ರ ಗರುಡ ಪುರಾಣ' ಸಿನಿಮಾದಲ್ಲಿ ನಟಿಸಿದ್ದಾರೆ. ಚಿತ್ರದಲ್ಲಿ, ರಿಷಿ ತನಿಖಾಧಿಕಾರಿ ರುದ್ರನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಸದ್ಯ ತೆಲುಗು ಮತ್ತು ಕನ್ನಡ ಇಂಡಸ್ಟ್ರಿಯ ನಡುವೆ ಜಗ್ಗಾಡುತ್ತಿರುವ 'ಆಪರೇಷನ್ ಅಲಮೇಲಮ್ಮ' ಚಿತ್ರದ ನಟ ರಿಷಿ 'ರಾಮನ ಅವತಾರ' ಚಿತ್ರ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಈಮಧ್ಯೆ, ರಿಷಿ 'ರುದ್ರ ಗರುಡ ಪುರಾಣ' ಸಿನಿಮಾದಲ್ಲಿ ನಟಿಸಲು ಸಿದ್ಧರಾಗಿದ್ದಾರೆ. ಕೆಎಸ್ ನಂದೀಶ್ ('ಡಿಯರ್ ವಿಕ್ರಮ್') ನಿರ್ದೇಶನದ ಈ ಚಿತ್ರವನ್ನು ಅಶ್ವಿನಿ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಅಶ್ವಿನಿ ಲೋಹಿತ್ ಅವರು ಮೊದಲ ಬಾರಿಗೆ ನಿರ್ಮಿಸುತ್ತಿದ್ದಾರೆ.

'ರುದ್ರ ಗರುಡ ಪುರಾಣ'ದ ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜ್‌ಕುಮಾರ್ ತಂಡಕ್ಕೆ ಶುಭ ಹಾರೈಸಿದರು. ಚಿತ್ರದ ಫಸ್ಟ್ ಲುಕ್ ಅನೇಕ ನಿರೀಕ್ಷೆಗಳನ್ನು ಹುಟ್ಟುಹಾಕಿದ್ದು, ನಟ ರಿಷಿ ಖಡಕ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

ಚಿತ್ರದಲ್ಲಿ, ರಿಷಿ ನಿಗೂಢ ಕ್ರೈಮ್ ಅನ್ನು ಪತ್ತೆಹಚ್ಚುವ ತನಿಖಾಧಿಕಾರಿ ರುದ್ರನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪಿಆರ್‌ಕೆ ಪ್ರೊಡಕ್ಷನ್ಸ್ ನಿರ್ಮಿಸಿದ ಹೇಮಂತ್ ಎಂ ರಾವ್ ಅವರ 'ಕವಲುದಾರಿ' ನಂತರ ರಿಷಿ ಮತ್ತೊಮ್ಮೆ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸೂರಿ ನಿರ್ದೇಶನದ 'ಬ್ಯಾಡ್ ಮ್ಯಾನರ್ಸ್' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಪ್ರಿಯಾಂಕಾ ಕುಮಾರ್, 'ರುದ್ರ ಗರುಡ ಪುರಾಣ'ದಲ್ಲಿ ರಿಷಿ ಜೊತೆಗೆ ಕಾಣಿಸಿಕೊಳ್ಳಲಿದ್ದಾರೆ.

ಚಿತ್ರದಲ್ಲಿ ವಿನೋದ್ ಆಳ್ವ, ಅವಿನಾಶ್, ಶಿವರಾಜ್ ಕೆಆರ್ ಪೇಟೆ, ಗಿರಿ, ಕೆಎಸ್ ಶ್ರೀಧರ್, ಅಶ್ವಿನಿ ಗೌಡ, ರಾಮ್ ಪವನ್, ವಂಶಿ, ಆಕರ್ಷ್, ಜೋಸೆಫ್, ಪ್ರಭಾಕರ್, ಗೌತಮ್ ಮೈಸೂರು, ಸ್ನೀಕ್ ಶ್ಯಾಮ್ ಮತ್ತು ರಂಗನಾಥ್ ಭಾರದ್ವಾಜ್, ಕಾಮಿಡಿ ಸ್ಟಾರ್ಸ್‌ಗಳಾದ ಜಗ್ಗಪ್ಪ, ಪ್ರಸನ್ನ ಹಂಡ್ರಾಂಗ್, ರದ್ವಿ ಮತ್ತು ಇತರರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಈಗಾಗಲೇ ಚಿತ್ರದ ಶೂಟಿಂಗ್ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ. 'ರುದ್ರ ಗರುಡ ಪುರಾಣ' ಜುಲೈನಲ್ಲಿ ಬಿಡುಗಡೆಯಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT