ಪವಿತ್ರಾ ಜಯರಾಮ್‌  
ಸಿನಿಮಾ ಸುದ್ದಿ

ಭೀಕರ ರಸ್ತೆ ಅಪಘಾತ: ತ್ರಿನಯನಿ ಧಾರಾವಾಹಿ ನಟಿ ಪವಿತ್ರಾ ಜಯರಾಮ್ ದುರ್ಮರಣ

ಕಿರುತೆರೆ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ನಟಿ ಪವಿತ್ರಾ ಜಯರಾಮ್‌ (35) ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆಂದು ಭಾನುವಾರ ತಿಳಿದುಬಂದಿದೆ.

ಬೆಂಗಳೂರು: ಕಿರುತೆರೆ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ನಟಿ ಪವಿತ್ರಾ ಜಯರಾಮ್‌ (35) ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆಂದು ಭಾನುವಾರ ತಿಳಿದುಬಂದಿದೆ.

ತ್ರಿನಯಿನಿ ಸೀರಿಯಲ್‌ ಮೂಲಕವೇ ಗುರುತಿಸಿಕೊಂಡಿದ್ದ ಪವಿತ್ರಾ, ಭಾನುವಾರ ಬೆಳಗ್ಗೆ ಆಂಧ್ರ ಪ್ರದೇಶದ ಮೆಹಬೂಬ ನಗರದ ಬಳಿ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ತೆಲುಗಿನ ತ್ರಿನಯಿನಿ ಸೀರಿಯಲ್‌ನಿಂದಲೇ ಹೆಚ್ಚು ಜನಪ್ರಿಯತೆ ಪಡೆದಿದ್ದ ಪವಿತ್ರಾ, ಮೂಲತಃ ಕರ್ನಾಟಕದವರು. ಮಂಡ್ಯ ತಾಲೂಕಿನ ಹನಕೆರೆಯವರು.

ಆಂಧ್ರದ ಕಾರು ಮಹೆಬೂಬ್‌ನಗರ ಜಿಲ್ಲೆಯ ಭೂತ್‌ಪುರ ಪುರಸಭೆ ವ್ಯಾಪ್ತಿಯ ಶೇರಿಪಲ್ಲಿ (ಬಿ) ಗ್ರಾಮದ ಬಳಿ, ಪವಿತ್ರಾ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಬಳಿಕ ಹೈದರಾಬಾದ್‌ನಿಂದ ವನಪರ್ತಿಗೆ ಬರುತ್ತಿದ್ದ ಬಸ್ ಕಾರಿನ ಬಲಭಾಗಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಪವಿತ್ರಾ ಜಯರಾಮ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಡ್ಯದ ಹನಕೆರೆಗೆ ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ.

ಘಟನೆಯಲ್ಲಿ ಪವಿತ್ರಾ ಜಯರಾಮ್ ಅವರ ಸೋದರ ಸಂಬಂಧಿ ಅಪೇಕ್ಷಾ, ಚಾಲಕ ಶ್ರೀಕಾಂತ್ ಮತ್ತು ಸಹ ನಟ ಚಂದ್ರಕಾಂತ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

ಪವಿತ್ರಾ ಜಯರಾಮ್‌ ತೆಲುಗಿನಿ ತ್ರಿನಯನಿ ಸೀರಿಯಲ್‌ ನಟಿಸುತ್ತಿದ್ದರು. ಈ ಧಾರಾವಾಹಿ ಕನ್ನಡಕ್ಕೆ ಡಬ್‌ ಆಗಿ ಜೀ ಕನ್ನಡದಲ್ಲೂ ಪ್ರಸಾರವಾಗುತ್ತಿದೆ. ಧಾರಾವಾಹಿಗೂ ಮುನ್ನ ಕನ್ನಡದ ಕೆಲವು ಧಾರಾವಾಹಿಗಳಲ್ಲೂ ಪವಿತ್ರ ಬಣ್ಣ ಹಚ್ಚಿದ್ದರು. ಜೋಕಾಲಿ, ರೋಬೋ ಫ್ಯಾಮಿಲಿ, ರಾಧಾ ರಮಣ, ನೀಲಿ ಸೀರಿಯಲ್‌ನಲ್ಲೂ ನಟಿಸಿದ್ದರು. ಇದೀಗ ದುರಂತ ಅಪಘಾತದಲ್ಲಿ ನಟಿ ಕಣ್ಮುಚ್ಚಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT