ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅಮೃತಧಾರೆ’ ಧಾರಾವಾಹಿಯ ನಟಿ ಛಾಯಾ ಸಿಂಗ್ ಅವರ ತಾಯಿ ಮನೆಯಲ್ಲಿ ಕಳ್ಳತನ ಮಾಡಿದ್ದ ಮನೆಕೆಲಸದಾಕೆ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ.
ಛಾಯಾ ಸಿಂಗ್ ಅವರ ತಾಯಿ ಚಮನಲತಾ ಅವರ ಬಸವೇಶ್ವರನಗರದ ನಿವಾಸದಲ್ಲಿ ಕಳ್ಳತನ ನಡೆದಿತ್ತು. 66 ಗ್ರಾಂ ಚಿನ್ನಾಭರಣ, 150 ಗ್ರಾಂ ಬೆಳ್ಳಿ ಆಭರಣ ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಕಳವಾಗಿದ್ದವು. ಇದೀಗ ಮನೆಯಲ್ಲಿ ಕಳ್ಳತನ ಮಾಡಿರುವುದು ಮನೆಕೆಲಸದಾಕೆ ಎಂಬುವುದು ತಿಳಿದುಬಂದಿದ್ದು, ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.
ನಟಿಯ ತಾಯಿ ಮನೆಯಲ್ಲಿ ಚಿನ್ನಾಭರಣ ಕಳವಾಗಿದ್ದ ಬಗ್ಗೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯ ವೇಳೆ ಕೆಲಸದಾಕೆ ಉಷಾ ಈ ಕೃತ್ಯ ಮಾಡಿರುವುದು ಬೆಳಕಿಗೆ ಬಂದಿದ್ದು, ಅವರನ್ನು ಬಂಧಿಸಿ ಆಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಲಸದ ವೇಳೆ, ಚಿನ್ನಾಭರಣ ದೋಚಿ ಏನೂ ಅರಿಯದಂತೆ ಕೆಲಸದಾಕೆ ವರ್ತಿಸಿದ್ದಳು. ಇದೀಗ ಆಕೆಯ ಕಳ್ಳತನ ಮಾಡಿರುವುದು ಪೊಲೀಸರ ತನಿಖೆಯಿಂದ ಬಯಲಾಗಿದೆ. ಛಾಯಾ ಸಿಂಗ್ ಕುಟುಂಬ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದೆ.