ಇಳಯರಾಜ 
ಸಿನಿಮಾ ಸುದ್ದಿ

ಒಪ್ಪಿಗೆ ಇಲ್ಲದೆ ಹಾಡು ಬಳಕೆ: ಮಂಜುಮ್ಮೆಲ್ ಬಾಯ್ಸ್ ವಿರುದ್ಧ ಸಂಗೀತ ನಿರ್ದೇಶಕ ಇಳಯರಾಜ ಕಾನೂನು ಕ್ರಮದ ಎಚ್ಚರಿಕೆ!

ಎಲ್ಲರ ಬಾಯಲ್ಲೂ ಮಲಯಾಳಂನ ಈ ಸಿನಿಮಾದ್ದೇ ಮಾತು, ಮೆಚ್ಚುಗೆ. ಆದರೆ, ಸಂಗೀತ ನಿರ್ದೇಶಕ ಇಳಯರಾಜ ಅವರು ಮಾತ್ರ ಈ ಸಿನಿಮಾದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಇತ್ತೀಚಿಗಷ್ಟೇ ಬಿಡುಗಡೆಯಾಗಿ ಬಹು ಜನಪ್ರಿಯತೆ ಗಳಿಸಿದ್ದ ಮಂಜುಮ್ಮೆಲ್ ಬಾಯ್ಸ್ ಸಿನಿಮಾ ತಂಡಕ್ಕೆ ಇಳಯರಾಜ ಅವರು ಕಾಪಿರೈಟ್ ನೋಟಿಸ್ ನೀಡಿದ್ದಾರೆ.

ಚೆನ್ನೈ: ಎಲ್ಲರ ಬಾಯಲ್ಲೂ ಮಲಯಾಳಂನ ಈ ಸಿನಿಮಾದ್ದೇ ಮಾತು, ಮೆಚ್ಚುಗೆ. ಆದರೆ, ಸಂಗೀತ ನಿರ್ದೇಶಕ ಇಳಯರಾಜ ಅವರು ಮಾತ್ರ ಈ ಸಿನಿಮಾದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಇತ್ತೀಚಿಗಷ್ಟೇ ಬಿಡುಗಡೆಯಾಗಿ ಬಹು ಜನಪ್ರಿಯತೆ ಗಳಿಸಿದ್ದ ಮಂಜುಮ್ಮೆಲ್ ಬಾಯ್ಸ್ ಸಿನಿಮಾ ತಂಡಕ್ಕೆ ಇಳಯರಾಜ ಅವರು ಕಾಪಿರೈಟ್ ನೋಟಿಸ್ ನೀಡಿದ್ದಾರೆ.

1991 ರ ತಮಿಳು ಚಲನಚಿತ್ರ ಗುಣಾದಿಂದ ಕಣ್ಮಣಿ ಅನ್ಬೋಡು ಹಾಡನ್ನು ಬಳಸಿದ್ದಕ್ಕಾಗಿ ಮಲಯಾಳಂ ಬ್ಲಾಕ್ ಬಸ್ಟರ್ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ನಿರ್ಮಾಪಕರಿಗೆ ಇಳಯರಾಜ ಅವರು ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

ಗುಣ ಸಿನಿಮಾ 1991ರಲ್ಲಿ ಬಿಡುಗಡೆಯಾಗಿತ್ತು. ಈ ಚಿತ್ರಕ್ಕೆ ಇಳಯರಾಜ ಅವರು ಸಂಗೀತ ಸಂಯೋಜನೆ ಮಾಡಿದ್ದರು. ಸಿನಿಮಾದ ಕಣ್ಮಣಿ..ಹಾಡು ಗಮನ ಸೆಳೆದಿತ್ತು. ಈ ಹಾಡನ್ನು ಜನರು ಬಹಳ ಇಷ್ಟಪಟ್ಟಿದ್ದರು. ಈ ಹಾಡು ‘ಮಂಜುಮ್ಮೆಲ್ ಬಾಯ್ಸ್’ನಲ್ಲಿ ಬಳಕೆ ಆಗಿದೆ. ಆದರೆ, ಈ ಹಾಡನ್ನು ತಮ್ಮ ಒಪ್ಪಿಗೆ ಇಲ್ಲದೆ ಅಕ್ರಮವಾಗಿ ಬಳಕೆ ಮಾಡಲಾಗಿದೆ ಎಂದು ಇಳಯರಾಜ ಅವರು ಆರೋಪಿಸಿದ್ದಾರೆ.

ಮಂಜುಮ್ಮೆಲ್ ಬಾಯ್ಸ್ ನಿರ್ಮಾಣ ಮಾಡಿದ್ದ ಸೌಬಿನ್ ಶಾಹಿರ್ ಅವರಿಗೆ ಇಳಯರಾಜ ಅವರು ನೋಟಿಸ್ ನೀಡಿದ್ದಾರೆ. ‘ಕಣ್ಮಣಿ ಅನ್ಬೋದು ಕಾದಲನ್..’ ಹಾಡಿನ ಹಕ್ಕು ನಮ್ಮದು, ಈ ಹಾಡನ್ನು ಅಕ್ರಮವಾಗಿ ಬಳಕೆ ಮಾಡಲಾಗಿದೆ. ಇಳಯರಾಜ ಅವರು ಈ ಹಾಡಿನ ಸಂಪೂರ್ಣ ಹಕ್ಕನ್ನು ಹೊಂದಿದ್ದಾರೆ’ ಎಂದು ನೋಟಿಸ್​ನಲ್ಲಿ ಹೇಳಲಾಗಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!

ಕನಸು ಕೊನೆಗೂ ನನಸು: ಲಿಂಗ ಬದಲಿಸಿಕೊಂಡಿದ್ದ Anaya Bangarಗೆ ಕ್ರಿಕೆಟ್‌ಗೆ ಮರಳಲು ಗ್ರೀನ್ ಸಿಗ್ನಲ್!