ಜಯರಾಮ್ - ಕಾಂತಾರ: ಅಧ್ಯಾಯ 1ರ ಫಸ್ಟ್ ಲುಕ್ 
ಸಿನಿಮಾ ಸುದ್ದಿ

ರಿಷಬ್ ಶೆಟ್ಟಿ ನಿರ್ದೇಶನದ 'ಕಾಂತಾರ: ಅಧ್ಯಾಯ 1' ಚಿತ್ರಕ್ಕೆ ಬಹುಭಾಷಾ ನಟ ಜಯರಾಮ್ ಎಂಟ್ರಿ?

ಬಹುನಿರೀಕ್ಷಿತ ಬಹುಭಾಷಾ ಯೋಜನೆಯು ಸದ್ಯ ನಿರ್ಮಾಣ ಹಂತದಲ್ಲಿದ್ದು, ಜಯರಾಮ್ ಇದರಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಆದರೆ, ಹೊಂಬಾಳೆ ಫಿಲ್ಮ್ಸ್ ಈ ಯೋಜನೆಯಲ್ಲಿ ಜಯರಾಮ್ ಅವರ ಪಾಲ್ಗೊಳ್ಳುವಿಕೆ ಬಗ್ಗೆ ಅಧಿಕೃತ ಹೇಳಿಕೆಯನ್ನು ಇನ್ನಷ್ಟೇ ನೀಡಬೇಕಿದೆ.

ದಕ್ಷಿಣ ಭಾರತದಾದ್ಯಂತ ಹೆಸರಾಗಿರುವ ಮಲಯಾಳಂನ ಹೆಸರಾಂತ ನಟ ಜಯರಾಮ್, ಶಿವರಾಜಕುಮಾರ್ ನಟನೆಯ ಶ್ರೀನಿ ನಿರ್ದೇಶನದ ಘೋಸ್ಟ್ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಮುಂಬರುವ ತಮಿಳು ಚಿತ್ರಗಳಾದ ಧನುಷ್‌ ನಟನೆಯ ರಾಯನ್ ಮತ್ತು ವಿಜಯ್‌ ನಟನೆಯ 'ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್‌'ನ ಭಾಗವಾಗಿರುವ ನಟ ಇದೀಗ ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ: ಅಧ್ಯಾಯ 1ಕ್ಕೆ ಸಜ್ಜಾಗುತ್ತಿದ್ದಾರೆ ಎನ್ನಲಾಗಿದೆ.

ಬಹುನಿರೀಕ್ಷಿತ ಬಹುಭಾಷಾ ಯೋಜನೆಯು ಸದ್ಯ ನಿರ್ಮಾಣ ಹಂತದಲ್ಲಿದ್ದು, ಜಯರಾಮ್ ಇದರಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಆದರೆ, ಹೊಂಬಾಳೆ ಫಿಲ್ಮ್ಸ್ ಈ ಯೋಜನೆಯಲ್ಲಿ ಜಯರಾಮ್ ಅವರ ಪಾಲ್ಗೊಳ್ಳುವಿಕೆ ಬಗ್ಗೆ ಅಧಿಕೃತ ಹೇಳಿಕೆಯನ್ನು ಇನ್ನಷ್ಟೇ ನೀಡಬೇಕಿದೆ.

ಕಾಂತಾರ: ಅಧ್ಯಾಯ 1 ಚಿತ್ರವನ್ನು ವಿಜಯ್ ಕಿರಗಂದೂರು ನಿರ್ಮಿಸಿದ್ದು, ದಟ್ಟ ಅರಣ್ಯದ ನಡುವೆ ಹೊರಾಂಗಣ ದೃಶ್ಯಗಳ ಚಿತ್ರೀಕರಣಕ್ಕಾಗಿ ನಿರ್ಮಾಣ ತಂಡವು ತಾತ್ಕಾಲಿಕವಾಗಿ ಕುಂದಾಪುರದಲ್ಲಿ ಬೀಡುಬಿಟ್ಟಿದೆ. ಈಮಧ್ಯೆ, ಕಾಂತಾರ ಹಿಂದಿನ ತಂಡವು ಭಾರತೀಯ ಚಿತ್ರರಂಗದಲ್ಲಿ ಮತ್ತೊಮ್ಮೆ ಕ್ರಾಂತಿಯನ್ನುಂಟುಮಾಡಲು ಯೋಜಿಸಿದೆ. ರಾಮೋಜಿ ಫಿಲ್ಮ್ ಸಿಟಿಗೆ ಹೋಲಿಸಬಹುದಾದ 200x200 ಅಡಿಯ ವಿಸ್ತಾರವಾದ ಕಸ್ಟಮ್-ನಿರ್ಮಿತ ಸೆಟ್ ಅನ್ನು ಕುಂದಾಪುರದಲ್ಲಿ ನಿರ್ಮಿಸಲಾಗಿದೆ. ಈ ಸೆಟ್‌ ಹವಾನಿಯಂತ್ರಣ, ಡಬ್ಬಿಂಗ್ ಸ್ಟುಡಿಯೋ ಮತ್ತು ಎಡಿಟಿಂಗ್ ಸೂಟ್‌ನಂತಹ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದೆ.

ಅನಿರುದ್ಧ್ ಮಹೇಶ್ ಮತ್ತು ಶನಿಲ್ ಗುರು ಅವರೊಂದಿಗೆ ಕಥೆಯನ್ನು ಬರೆದಿರುವ ರಿಷಬ್ ಶೆಟ್ಟಿ ಅವರು ನಿರ್ದೇಶನದೊಂದಿಗೆ ತಾವೇ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಮತ್ತು ಅರವಿಂದ್ ಕಶ್ಯಪ್ ಅವರ ಛಾಯಾಗ್ರಹಣವಿದೆ. ಈ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಮೂಲ ಚಿತ್ರದ ಕೆಲವು ನಟರು ಕಾಣಿಸಿಕೊಳ್ಳುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್