ಮಾಲ್ಡೀವ್ಸ್ ನಲ್ಲಿ ಫೋಟೋ ಶೂಟ್ ಮಾಡಿಸಿರುವ ದಂಪತಿ. 
ಸಿನಿಮಾ ಸುದ್ದಿ

ಅಭಿಮಾನಿಗಳ ಊಹೆ ನಿಜ: ದೀಪಾವಳಿಗೆ ಗುಡ್'ನ್ಯೂಸ್ ಕೊಟ್ಟ ಸಿಂಹ-ಪ್ರಿಯಾ; ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ

ಮಾಲ್ಡೀವ್ಸ್​ನಲ್ಲಿ ವಿಶೇಷ ಫೋಟೋಶೂಟ್ ಮಾಡಿಸಿರುವ ಸಿಂಹಪ್ರಿಯಾ ದಂಪತಿ, ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಬಹಿರಂಗಪಡಿಸಿದೆ.

ಬೆಂಗಳೂರು: ನಟ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ದಂಪತಿ ದೀಪಾವಳಿ ಹಾಗೂ ಕನ್ನಡ ರಾಜ್ಯೋತ್ಸವ ದಿನದಂದು ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಶೀಘ್ರದಲ್ಲೇ ತಂದೆ-ತಾಯಿಯಾಗುತ್ತಿರುವ ಸಿಹಿಸುದ್ದಿಯನ್ನು ಈ ಜೋಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.

ಮಾಲ್ಡೀವ್ಸ್​ನಲ್ಲಿ ವಿಶೇಷ ಫೋಟೋಶೂಟ್ ಮಾಡಿಸಿರುವ ಸಿಂಹಪ್ರಿಯಾ ದಂಪತಿ, ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಬಹಿರಂಗಪಡಿಸಿದೆ.

ಫೋಟೋಗಳಲ್ಲಿ ಹರಿಪ್ರಿಯಾ ಬೇಬಿ ಬಂಪ್ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನೂ ನಟ ವಸಿಷ್ಠ ಸಿಂಹ ಅವರು ಬೇಬಿ ಬಂಪ್ ಹಿಡಿದು ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ.

ಈ ಫೋಟೋಗಳನ್ನು ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿರುವ ನಟಿ ಹರಿಪ್ರಿಯಾ ಅವರು, ಈ ಶುಭ ದಿನದಂದು ನಿಮ್ಮೆಲ್ಲರೊಡನೆ ಶುಭ ಸುದ್ದಿಯೊಂದನ್ನು ಹಂಚಿಕೊಳ್ಳುವಾಸೆ ನಮ್ಮದು. ನಿಮ್ಮಲ್ಲಿ ಬಹುತೇಕರು ಊಹಿಸಿದ್ದು ಸರಿಯೇ. ಹೌದು, ನಾವು ನಮ್ಮ ‘ಕುಡಿ’ಗಾಗಿ ಎದುರು ನೋಡುತ್ತಿದ್ದೇವೆ. ನಿಮ್ಮೆಲ್ಲರ ಹಾರೈಕೆ, ಆರ್ಶಿವಾದಗಳ ನಿರೀಕ್ಷೆಯಲ್ಲಿ ಎಂದು ಬರೆದಿದ್ದಾರೆ.

ನಟಿ ಹರಿಪ್ರಿಯಾ ಅವರು ಇತ್ತೀಚೆಗೆ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದರು. ವಿಡಿಯೋದಲ್ಲಿ ನಟಿ ಗರ್ಭಿಣಿ ಹಾಗೇ ಹಾಣಿಸಿಕೊಂಡಿದ್ದರು. ಬಳಿಕ ಅಭಿಮಾನಿಗಳು ಸಾಕಷ್ಟು ಪ್ರಶ್ನೆಗಳ ಸುರಿಮಳೆ ಸುರಿಸಿದ್ದರು. ಇದೀಗ ಅಭಿಮಾನಿಗಳ ಊಹೆ​ ನಿಜವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT