ಕಿಶೋರ್ ಮತ್ತು ಹರ್ಷಿಲ್ ಕೌಶಿಕ್ 
ಸಿನಿಮಾ ಸುದ್ದಿ

'ಅನಾಮಧೇಯ ಅಶೋಕ್ ಕುಮಾರ್' ಚಿತ್ರಕ್ಕೆ ಹರ್ಷಿಲ್ ಕೌಶಿಕ್ ಜೊತೆಯಾದ ಕಿಶೋರ್!

ಈಗಾಗಲೇ ಚಿತ್ರತಂಡ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದು, ಚಿತ್ರ ಇದೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ವರ್ಷದ ಕೊನೆಯಲ್ಲಿ ಚಿತ್ರ ಬಿಡುಗಡೆಯಾಗುವ ಸಾಧ್ಯತೆಗಳಿವೆ.

ವಿವಿಧ ಭಾಷೆಗಳ ಚಿತ್ರಗಳಲ್ಲಿ ನಟಿಸುತ್ತಿರುವ ಬಹುಮುಖ ನಟ ಕಿಶೋರ್ ಅವರು ಸಾಗರ್ ಕುಮಾರ್ ನಿರ್ದೇಶಿಸುತ್ತಿರುವ ಅನಾಮಧೇಯ ಅಶೋಕ್ ಕುಮಾರ್ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಈಗಾಗಲೇ ಚಿತ್ರತಂಡ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದು, ಚಿತ್ರ ಇದೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ವರ್ಷದ ಕೊನೆಯಲ್ಲಿ ಚಿತ್ರ ಬಿಡುಗಡೆಯಾಗುವ ಸಾಧ್ಯತೆಗಳಿವೆ. ಈಗಾಗಲೇ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದ್ದು ಚಿತ್ರದ ಕೆಲವು ಸ್ಟಿಲ್ ಗಳನ್ನು ಹಂಚಿಕೊಳ್ಳಲಾಗಿದೆ. ಚಿತ್ರದಲ್ಲಿ ನಟ ಹರ್ಶಿಲ್ ಕೌಶಿಕ್ ಕೂಡ ನಟಿಸಿದ್ದಾರೆ.

ದಕ್ಷಿಣ ಭಾರತದ ಹಲವು ಚಿತ್ರಗಳಲ್ಲಿ ನಟಿಸುತ್ತಿರುವ ನಟ ಕಿಶೋರ್ ಅವರು ಸಲ್ಮಾನ್ ಖಾನ್ ಅಭಿನಯದ ಮತ್ತು ಎಆರ್.ಮುರುಗದಾಸ್ ನಿರ್ದೇಶನದ ಸಿಕಂದರ್ ಚಿತ್ರದಲ್ಲಿಯೂ ನಟಿಸುತ್ತಿದ್ದು, ಈ ಮೂಲಕ ಬಾಲಿವುಡ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.

ಅನಾಮಧೇಯ ಅಶೋಕ್ ಕುಮಾರ್ ಚಿತ್ರದ ಕಥೆಯು ಖ್ಯಾತ ವಕೀಲರೊಬ್ಬರ ಕೊಲೆ ಮತ್ತು ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರ ಜೀವನ್ಮರಣದ ಸುತ್ತ ಸುತ್ತುತ್ತದೆ. ಪಟ್ಟುಬಿಡದ ಪತ್ರಕರ್ತನೊಬ್ಬನ ಅನುಮಾನದ ಜಾಲದಲ್ಲಿ ಸಿಲುಕಿಕೊಳ್ಳುವುದು, ಪೊಲೀಸ್ ಅಧಿಕಾರಿಯಾಗಿ ಹರ್ಷಿಲ್ ಕೌಶಿಕ್ ಎಂಟ್ರಿ, ಸತ್ಯವನ್ನು ಬಹಿರಂಗಪಡಿಸುವ ಕಥೆಯನ್ನು ಚಿತ್ರ ಹೊಂದಿದೆ.

ಎಸ್‌ಕೆಎನ್ ಫಿಲ್ಮ್ಸ್ ಅಡಿಯಲ್ಲಿ ನಿರ್ಮಿಸಲಾದ ಮತ್ತು ಜನನಿ ಪಿಕ್ಚರ್ಸ್ ವಿತರಿಸಿದ ಈ ಚಿತ್ರಕ್ಕೆ ಬೆನ್ನಿ ಥಾಮಸ್ ಹಾಗೂ ನಿರ್ದೇಶಕ ಸಾಗರ್ ಕುಮಾರ್ ಅವರು ಕಥೆ ಬರೆದಿದ್ದಾರೆ. ಚಿತ್ರದ ಡಿಒಪಿ ಸುನಿಲ್ ಹೊನಳ್ಳಿ, ಮತ್ತು ಸಂಗೀತವನ್ನು ಆಜಾದ್ ಸಂಯೋಜಿಸಿದ್ದಾರೆ, ಸಂಕಲನವನ್ನು ಕೆ. ಯೇಸು ನಿರ್ವಹಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ಚಿತ್ರವು ತಮಿಳಿನಲ್ಲೂ ಡಬ್ ಆಗುವ ಸಾಧ್ಯತೆ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT