ನಟ ಜಗ್ಗೇಶ್ 
ಸಿನಿಮಾ ಸುದ್ದಿ

ಆನೆ ನಡೆಯೋವಾಗ ಶ್ವಾನಗಳು ಉಸಿರು ಹೋಗುವಂತೆ ಅರಚುತ್ತವೆ: ಜಗ್ಗೇಶ್ ಹೇಳಿದ ಬೊಗಳೊ ನಾಯಿ ಯಾರು?

ಏನು ನಾವು ನೆಲದಷ್ಟೆ ಹೀಗಿದ್ದೇವೆ. ಆನೆ ಮಾತ್ರ ಮುಗಿಲೆತ್ತರ ಬೆಳೆದಿದೆ ಎಂಬ ಸಂಕಟ. ನಿನ್ನ ಕೆಲಸ ನೀನು ಗಾಂಭೀರ್ಯದಿಂದ ಮಾಡುತ್ತಿರು. ಶ್ವಾನವು ಅವುಗಳ ಕೆಲಸ ಮಾಡದೇ ಬೇರೆ ವಿಧಿಯಿಲ್ಲಾ ಬೊಗಳುತ್ತದೆ. ಆನೆಯಾಗಲು ಯೋಗ ಬೇಕು.

ಕನ್ನಡ ಚಿತ್ರರಂಗ ಪ್ರತಿಭಾನ್ವಿತ ನಿರ್ದೇಶಕ ಗುರುಪ್ರಸಾದ್ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾಲಭಾಧೆಯಿಂದ ಅವರು ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ. ‘ಮಠ’ ಹಾಗೂ ‘ಎದ್ದೇಳು ಮಂಜುನಾಥ್’ ರೀತಿಯ ಹಿಟ್ ಸಿನಿಮಾಗಳನ್ನು ನೀಡಿದ ನಿರ್ದೇಶಕ ಹೀಗೆ ದಿಢೀರ್ ಬಾರದಲೋಕಕ್ಕೆ ಪಯಣ ಬೆಳೆಸಿದ್ದು ನಿಜಕ್ಕೂ ಬೇಸರದ ಸಂಗತಿ.

ಇನ್ನು ಗುರುಪ್ರಸಾದ್ ನಿಧನ ಸುದ್ದಿ ಹೊರಬೀಳುತ್ತಿದ್ದಂತೆ ನಟ ಜಗ್ಗೇಶ್ ಮಾಧ್ಯಮಗಳ ಜೊತೆ ಮಾತನಾಡಿದ್ದರು. ಆದರೆ ಗುರು ಪ್ರಸಾದ್ ಕುರಿತು ನವರಸ ನಾಯಕನ ಕೆಲ ಹೇಳಿಕೆ ಬೇಸರ ಮೂಡಿಸಿತ್ತು. ಗುರುಪ್ರಸಾದ್ ಸುತ್ತಾ ನಟ ಜಗ್ಗೇಶ್ ಆಡಿದ ಕೆಲ ಮಾತುಗಳ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅಸಮಾಧಾನ ವ್ಯಕ್ತವಾಗಿತ್ತು.

ತಮ್ಮ ವಿರುದ್ಧ ಮಾತನಾಡಿದವರಿಗೆ ಜಗ್ಗೇಶ್ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. "ಆನೆ ನಡೆಯೋವಾಗ ಶ್ವಾನಗಳು ಉಸಿರು ಹೋಗುವಂತೆ ಅರಚುತ್ತದೆ. ಅದಕ್ಕೆ ಸೈಂಟಿಫಿಕ್ ಕಾರಣ "ಭಯ". ಎರಡನೆಯದು ಏನು ನಾವು ನೆಲದಷ್ಟೆ ಹೀಗಿದ್ದೇವೆ. ಆನೆ ಮಾತ್ರ ಮುಗಿಲೆತ್ತರ ಬೆಳೆದಿದೆ ಎಂಬ ಸಂಕಟ. ಇದರ ತಾತ್ಪಾರ್ಯ "ನಿನ್ನ ಕೆಲಸ ನೀನು ಗಾಂಭೀರ್ಯದಿಂದ ಮಾಡುತ್ತಿರು. ಶ್ವಾನವು ಅವುಗಳ ಕೆಲಸ ಮಾಡದೇ ಬೇರೆ ವಿಧಿಯಿಲ್ಲಾ ಬೊಗಳುತ್ತದೆ. ಆನೆಯಾಗಲು ಯೋಗ ಬೇಕು" ಎಂದು ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಮೂಲಕ ಜಗ್ಗೇಶ್ ತಮ್ಮ ವಿರುದ್ಧ ಮಾತನಾಡಿದವರಿಗೆ ಪರೋಕ್ಷವಾಗಿ ತಿರುಗೇಟು ಕೊಟ್ಟಿರುವುದು ಗೊತ್ತಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!