ರಾಜು ಜೇಮ್ಸ್ ಬಾಂಡ್ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

'ರಾಜು ಜೇಮ್ಸ್ ಬಾಂಡ್' ಸಿನಿಮಾ ಡಿಸೆಂಬರ್ 27ಕ್ಕೆ ಬಿಡುಗಡೆ

ಹಲವು ದಿನಗಳ ಊಹಾಪೋಹಗಳ ನಂತರ ಕಳೆದ ಶನಿವಾರ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದ್ದು, ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ.

'ಫಸ್ಟ್ ರ‍್ಯಾಂಕ್ ರಾಜು' ಸಿನಿಮಾ ಮೂಲಕ ಗಮನ ಸೆಳೆದಿದ್ದ ನಟ ಗುರುನಂದನ್ ಅಭಿನಯದ ರಾಜು ಜೇಮ್ಸ್ ಬಾಂಡ್ ಸಿನಿಮಾ ಡಿಸೆಂಬರ್ 27 ರಂದು ಬಿಡುಗಡೆಯಾಗುತ್ತಿದೆ.

ದೀಪಕ್ ಮಧುವನಹಳ್ಳಿ ನಿರ್ದೇಶನದ ಈ ಚಿತ್ರವು ಶುದ್ಧ ಮನೋರಂಜನೆ ಸಿನಿಮಾ ಆಗಿದೆ. ಹಲವು ದಿನಗಳ ಊಹಾಪೋಹಗಳ ನಂತರ ಕಳೆದ ಶನಿವಾರ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದ್ದು, ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ.

ನಿರ್ಮಾಪಕರಾದ ಮಂಜುನಾಥ್ ವಿಶ್ವಕರ್ಮ ಮತ್ತು ಕಿರಣ್ ಭರ್ತೂರು ಅವರು ಮೋಷನ್ ಪೋಸ್ಟರ್ ಅನಾವರಣ ಮಾಡುವ ಮೂಲಕ ಚಿತ್ರದ ಪ್ರಚಾರಕ್ಕೆ ಚಾಲನೆ ನೀಡಿದರು.

ಗುರುನಂದನ್ ಅವರು 'ಫಸ್ಟ್ ರ‍್ಯಾಂಕ್ ರಾಜು' ಇಮೇಜ್ ನಿಂದ ಹೊರಬಂದಿದ್ದು, ಈ ಚಿತ್ರದಲ್ಲಿ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ನಿರ್ದೇಶಕ ಮಧುವನಹಳ್ಳಿ ಅವರು ಹೇಳಿದ್ದಾರೆ.

‘ರಾಜು ಜೇಮ್ಸ್ ಬಾಂಡ್’ ಸಿನಿಮಾದಲ್ಲಿ ಯಾವುದೇ ಅಶ್ಲೀಲ ಸಂಭಾಷಣೆ ಇರುವುದಿಲ್ಲ. ಇದೊಂದು ಶುದ್ಧ ಮನೋರಂಜನೆ ಸಿನಿಮಾ ಆಗಿದೆ.. ಎರಡುಕಾಲು ಗಂಟೆಗಳ ಚಿತ್ರದಲ್ಲಿ ಮಕ್ಕಾಲು ಗಂಟೆ ನೀವು ನಗುವಿಗೆ ಮೀಸಲಿಡಬೇಕು. ವರ್ಷದ ಕೊನೆಯಲ್ಲಿ ನಗುನಗುತ್ತಾ ನೂತನ ವರ್ಷವನ್ನು ನಮ್ಮ ಸಿನಿಮಾ ಮೂಲಕ ಸ್ವಾಗತಿಸೋಣ’ ಎಂದರು.

‘ಫಸ್ಟ್ ರ‍್ಯಾಂಕ್ ರಾಜು’ ಸಿನಿಮಾದ ನಾಯಕ ಗುರುನಂದನ್ ಮಾತನಾಡಿ, ‘ಜೇಮ್ಸ್ ಬಾಂಡ್’ ರಾಜುಗೂ ‘ಫಸ್ಟ್ ರ‍್ಯಾಂಕ್’ ರಾಜೂಗೂ ಬಹಳ ವ್ಯತ್ಯಾಸ ಇದೆ. ಎರಡು ಪಾತ್ರಗಳು ಒಂದಕ್ಕೊಂದು ಬಹಳ ಭಿನ್ನ, ವೈರುದ್ಯ ಹೊಂದಿವೆ ಎಂದರು.

ಚಿತ್ರದಲ್ಲಿ ಮೃದುಲಾ ನಾಯಕಿಯಾಗಿ ನಟಿಸಿದ್ದು, ರವಿಶಂಕರ್, ಚಿಕ್ಕಣ್ಣ, ಸಾಧು ಕೋಕಿಲ, ಅಚ್ಯುತ್ ಕುಮಾರ್ ಮತ್ತು ಜೈ ಜಗದೀಶ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ನೃತ್ಯ ನಿರ್ದೇಶಕ ಮುರಳಿ ಅವರು ನಾಲ್ಕು ಹಾಡುಗಳನ್ನು ನಿರ್ದೇಶಿಸಿದ್ದಾರೆ, ಎರಡು ಭಾರತದಲ್ಲಿ ಮತ್ತು ಎರಡು ಲಂಡನ್‌ನಲ್ಲಿ ಚಿತ್ರೀಕರಿಸಲಾಗಿದೆ. ರಾಜು ಜೇಮ್ಸ್ ಬಾಂಡ್ ಕನ್ನಡ ಮತ್ತು ಹಿಂದಿಯಲ್ಲಿ ಬಿಡುಗಡೆಯಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶಾದ್ಯಂತ 'ಗ್ಯಾಸ್ ಟ್ರಬಲ್': ಪ್ರಮುಖ ನಗರಗಳಲ್ಲಿ LPG ಕೊರತೆಯ ಭೀತಿ; ಸಮಸ್ಯೆ ಬಗೆಹರಿಸಲು ಅಗತ್ಯ ಸರಕುಗಳ ಕಾಯ್ದೆ ಬಳಸಿದ ಕೇಂದ್ರ!

KPCC ಅಧ್ಯಕ್ಷರಾಗಿ ಆರು ವರ್ಷ: ಡಿ ಕೆ ಶಿವಕುಮಾರ್ ಔತಣಕೂಟ ಆಯೋಜನೆ; ಸಿಎಂ ಸೇರಿ ಸಚಿವರು, ಶಾಸಕರು ಭಾಗಿ, ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ತೀವ್ರ

No friendship only business: ತೈಲ ಬೇಕಾದರೆ..; ಸಂಕಷ್ಟದ ಸಮಯದಲ್ಲಿ ಕೈಹಿಡಿದಿದ್ದ ಭಾರತಕ್ಕೆ ಕೈ ಕೊಟ್ಟ ರಷ್ಯಾ!

1998-2025ರವರೆಗೆ ಕರ್ನಾಟಕದ ಮುಖ್ಯಮಂತ್ರಿಗಳಲ್ಲಿ ಸಿದ್ದರಾಮಯ್ಯನೇ ಹೆಚ್ಚು ಸಾಲ ಮಾಡಿದ್ದಾರೆ: ಆರ್.ಅಶೋಕ್

ಆತ ಅಪ್ಪಿಕೊಳ್ಳುತ್ತಾರೆ, ಕಣ್ಣು ಹೊಡೆಯುತ್ತಾರೆ; ಪ್ರಿಯಾಂಕಾ ಉತ್ತಮ ವಿಪಕ್ಷ ನಾಯಕಿಯಾಗಬಹುದು: ರಾಹುಲ್ ವಿರುದ್ಧ ಕಿರಣ್ ರಿಜಿಜು ಟೀಕಾ ಪ್ರಹಾರ

SCROLL FOR NEXT