ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್‌ 
ಸಿನಿಮಾ ಸುದ್ದಿ

ಚೆನ್ನೈ: ಧನುಷ್- ಐಶ್ವರ್ಯಾ ರಜನಿಕಾಂತ್‌ಗೆ ಅಧಿಕೃತ ವಿಚ್ಛೇದನ ನೀಡಿದ ಕೌಟುಂಬಿಕ ನ್ಯಾಯಾಲಯ

2004ರ ನವೆಂಬರ್ 18ರಂದು ವಿವಾಹವಾಗಿದ್ದ ಈ ಜೋಡಿಗೆ ಇಬ್ಬರು ಮಕ್ಕಳಿದ್ದಾರೆ. 18 ವರ್ಷಗಳ ದಾಂಪತ್ಯ ಜೀವನವನ್ನು ಅಂತ್ಯಗೊಳಿಸುತ್ತಿರುವುದಾಗಿ 2022ರ ಸೆಪ್ಟೆಂಬರ್‌ನಲ್ಲಿ ಘೋಷಿಸಿದ್ದರು.

ಚೆನ್ನೈ: ತಮಿಳು ನಟ ಧನುಷ್ ಮತ್ತು ಐಶ್ವರ್ಯ ರಜನಿಕಾಂತ್ ಅವರಿಗೆ ಚೆನ್ನೈನ ಕೌಟುಂಬಿಕ ನ್ಯಾಯಾಲಯವು ಅಧಿಕೃತವಾಗಿ ವಿಚ್ಛೇದನ ಮಂಜೂರು ಮಾಡಿದೆ.

ಧನುಷ್ ಅವರು ನಿರ್ದೇಶಕ ಕಸ್ತೂರಿರಾಜಾ ಅವರ ಮಗನಾಗಿದ್ದು, ಐಶ್ವರ್ಯ ಅವರು ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ. 2004ರ ನವೆಂಬರ್ 18ರಂದು ವಿವಾಹವಾಗಿದ್ದ ಈ ಜೋಡಿಗೆ ಇಬ್ಬರು ಮಕ್ಕಳಿದ್ದಾರೆ. 18 ವರ್ಷಗಳ ದಾಂಪತ್ಯ ಜೀವನವನ್ನು ಅಂತ್ಯಗೊಳಿಸುತ್ತಿರುವುದಾಗಿ 2022ರ ಸೆಪ್ಟೆಂಬರ್‌ನಲ್ಲಿ ಘೋಷಿಸಿದ್ದರು. ಬಳಿಕ, ಕಾನೂನಾತ್ಮಕವಾಗಿ ಬೇರೆಯಾಗಲು, ವಿಚ್ಛೇದನ ಪಡೆಯಲು ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಿದ್ದರು.

ಕಳೆದ ನವೆಂಬರ್ 21ರಂದು ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶೆ ಸುಭಾದೇವಿ ಮುಂದೆ ಹಾಜರಾಗಿದ್ದ ದಂಪತಿ ನಾವಿಬ್ಬರು ಒಟ್ಟಿಗೆ ಬದುಕುವುದು ಸಾಧ್ಯವಿಲ್ಲ, ವಿಚ್ಛೇದನ ನಿರ್ಧಾರ ಅಚಲವಾಗಿದೆ ಎಂದು ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ವಿಚ್ಛೇದನ ಮಂಜೂರು ಮಾಡಿದೆ. ಐಶ್ವರ್ಯಾ ಮತ್ತು ಧನುಷ್ 2004 ರಲ್ಲಿ ಚೆನ್ನೈನಲ್ಲಿ ಅದ್ಧೂರಿ ವಿವಾಹ ಸಮಾರಂಭದಲ್ಲಿ ವಿವಾಹವಾಗಿದರು. 2022 ರಲ್ಲಿ ಬೇರೆಯಾಗಲು ನಿರ್ಧರಿಸಿರುವುದಾಗಿ ಘೋಷಿಸಿದ್ದರು. ದಯವಿಟ್ಟು ನಮ್ಮ ನಿರ್ಧಾರವನ್ನು ಗೌರವಿಸಿ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್