ನಟ ಗೋವಿಂದ 
ಸಿನಿಮಾ ಸುದ್ದಿ

ಬಾಲಿವುಡ್ ನಟ ಗೋವಿಂದ ಕಾಲಿಗೆ ಆಕಸ್ಮಿಕ ಗುಂಡೇಟು: ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ

ಘಟನೆ ವೇಳೆ ಮನೆಯಲ್ಲಿ ಗೋವಿಂದ ಒಬ್ಬರೇ ಇದ್ದರು. ಶಿವಸೇನೆ ನಾಯಕರಾಗಿರುವ ಗೋವಿಂದ ಅವರು ಇಂದು ಬೆಳಗ್ಗೆ ಕೋಲ್ಕತ್ತಾಗೆ ತೆರಳುವಾಗ ಈ ಘಟನೆ ನಡೆದಿದೆ

ಮುಂಬಯಿ: ಶಿವಸೇನೆ ನಾಯಕ, ಬಾಲಿವುಡ್‌ ನಟ ಗೋವಿಂದ ಅವರಿಗೆ ಇಂದು ಬೆಳಗ್ಗೆ ತಮ್ಮ ಮನೆಯಲ್ಲಿ ಕಾಲಿಗೆ ಆಕಸ್ಮಿಕವಾಗಿ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಳಗ್ಗೆ 4:45 ರ ಸುಮಾರಿಗೆ ಅವರ ಪರವಾನಗಿ ಪಡೆದ ರಿವಾಲ್ವರ್‌ನಿಂದ ಮಿಸ್‌ಫೈರ್‌ ಆಗಿ ಗಾಯವಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ನಟ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ವೇಳೆ ಮನೆಯಲ್ಲಿ ಗೋವಿಂದ ಒಬ್ಬರೇ ಇದ್ದರು. ಶಿವಸೇನೆ ನಾಯಕರಾಗಿರುವ ಗೋವಿಂದ ಅವರು ಇಂದು ಬೆಳಗ್ಗೆ ಕೋಲ್ಕತ್ತಾಗೆ ತೆರಳುವಾಗ ಈ ಘಟನೆ ನಡೆದಿದೆ. ‘ಅವರು ತಮ್ಮ ಪರವಾನಗಿ ಗನ್​ನ ಇಟ್ಟುಕೊಳ್ಳುತ್ತಿದ್ದರು. ಅದು ಅವರ ಕೈ ತಪ್ಪಿದ್ದು, ಬುಲೆಟ್​ ಸಿಡಿದಿದೆ. ಅವರ ಕಾಲಿಗೆ ಗುಂಡು ತಾಗಿದೆ. ವೈದ್ಯರು ಬುಲೆಟ್​ನ ತೆಗೆದಿದ್ದಾರೆ. ಅವರು ಆಸ್ಪತ್ರೆಯಲ್ಲಿ ಇದ್ದು, ಆರೋಗ್ಯ ಸ್ಥಿರವಾಗುತ್ತಿದೆ’ ಎಂದು ಗೋವಿಂದ ಅವರ ಮ್ಯಾನೇಜರ್ ಶಶಿ ಸಿನ್ಹಾ ಹೇಳಿದ್ದಾರೆ.

ವೈದ್ಯರು ಬುಲೆಟ್ ಅನ್ನು ತೆಗೆದಿದ್ದಾರೆ, ಗೋವಿಂದ ಆಸ್ಪತ್ರೆಯಲ್ಲಿದ್ದಾರೆ ಎಂದು ತಿಳಿಸಿದ್ದಾರೆ. ಇದೀಗ ನಟನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ನಟನ ಸ್ಥಿತಿ ಸ್ಥಿರವಾಗಿದ್ದು, ಐಸಿಯುನಲ್ಲಿ ಇರಿಸಲಾಗಿದೆ. ಗುಂಡಿನ ಶಬ್ದ ಕೇಳಿದ ಬಳಿಕ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಸದ್ಯ ಗೋವಿಂದ ಅವರ ಗನ್​ನ ವಶಕ್ಕೆ ಪಡೆಯಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ