ಮಧ್ಯಂತರ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

ರಾಷ್ಟ್ರ ಪ್ರಶಸ್ತಿ ಪುರಸ್ಕೃತ 'ಮಧ್ಯಂತರ' ಕಿರುಚಿತ್ರಕ್ಕೆ ಗಣ್ಯರ-ವಿಮರ್ಶಕರ ಮೆಚ್ಚುಗೆ

ಇತ್ತೀಚೆಗೆ 70 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ನಾನ್ ಫೀಚರ್ ಫಿಲಂ ವಿಭಾಗದಲ್ಲಿ ಎರಡು ಪ್ರಶಸ್ತಿಗಳು ಬಂದಿದೆ. ಮೂವತ್ತಾರು ನಿಮಿಷಗಳಲ್ಲಿ ಎಲ್ಲರ ಮನಸ್ಸಿಗೆ ಮುದನೀಡುವ ಅದ್ಭುತ ಕಿರುಚಿತ್ರವನ್ನು ದಿನೇಶ್ ಶೆಣೈ ಅವರು ರಚಿಸಿ, ನಿರ್ದೇಶಿಸಿದ್ದಾರೆ.

ದಿನೇಶ್ ಶೆಣೈ ನಿರ್ದೇಶನದ ಮಧ್ಯಂತರ ಕಿರುಚಿತ್ರವು ಪ್ರೇಕ್ಷಕರು ಮತ್ತು ವಿಮರ್ಶಕರ ಹೃದಯ ಗೆದ್ದಿದೆ. ಚಿತ್ರರಂಗದ ಅನೇಕ ನಟರಿಂದ ಪ್ರಶಂಸೆಯನ್ನು ಗಳಿಸಿದೆ. ಕೇವಲ ಮೂವತ್ತನಾಲ್ಕು ನಿಮಿಷಗಳಲ್ಲಿ, ಈ ಸಣ್ಣ ಕಥೆಯು ಪ್ರಭಾವ ಬೀರಿದೆ.

ಇತ್ತೀಚೆಗೆ 70 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ನಾನ್ ಫೀಚರ್ ಫಿಲಂ ವಿಭಾಗದಲ್ಲಿ ಎರಡು ಪ್ರಶಸ್ತಿಗಳು ಬಂದಿದೆ. ಮೂವತ್ತಾರು ನಿಮಿಷಗಳಲ್ಲಿ ಎಲ್ಲರ ಮನಸ್ಸಿಗೆ ಮುದನೀಡುವ ಅದ್ಭುತ ಕಿರುಚಿತ್ರವನ್ನು ದಿನೇಶ್ ಶೆಣೈ ಅವರು ರಚಿಸಿ, ನಿರ್ದೇಶಿಸಿದ್ದಾರೆ. ಇತ್ತೀಚೆಗೆ ಈ ಕಿರುಚಿತ್ರದ ಪ್ರದರ್ಶನ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ಮಾಜಿ ಸಚಿವೆ, ನಟಿ, ನಿರ್ಮಾಪಕಿ ಡಾ. ಜಯಮಾಲ ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ನನಗೂ ಚಿತ್ರರಂಗಕ್ಕೂ ಇಪ್ಪತ್ತೇಳು ವರ್ಷಕ್ಕೂ ಮೀರಿದ‌ ನಂಟು. ಆದರೆ ಈ ಕಥೆ ಹೊಳೆದ್ದದ್ದು ಕೊರೋನ ಸಮಯದಲ್ಲಿ. ದೊಡ್ಡ ಚಿತ್ರ ಮಾಡುವ ಮುನ್ನ ಮೊದಲು ಈ ಕಿರುಚಿತ್ರ ಮಾಡೋಣ ಅಂದುಕೊಂಡೆ. ಇದು ಜನರಿಗೆ ಹಿಡಿಸಿದರೆ, ಮುಂದೆ ಚಲನಚಿತ್ರ ಮಾಡೋಣ. ಆಗ ನಿರ್ಮಾಪಕರು ಸಿಗುತ್ತಾರೆ ಎಂಬ ಉದ್ದೇಶದಿಂದ ಕಿರುಚಿತ್ರ ನಿರ್ದೇಶಿಸಿದೆ. ಈ ಕಿರುಚಿತ್ರವನ್ನು ನೋಡಿದ ದಯಾಳ್ ಪದ್ಮನಾಭನ್‌ ಅವರು ಪನೋರಮಾ ಗೆ ಕಳುಹಿಸಲು ಸಲಹೆ ನೀಡಿದರು.

ಹಾಗೆ ಡಿಸೆಂಬರ್ ಒಳಗೆ ಸೆನ್ಸಾರ್ ಮಾಡಿಸಿದರೆ ರಾಷ್ಟ್ರಪ್ರಶಸ್ತಿಗೂ ಕಳುಹಿಸಬಹುದು ಎಂದು ಮತ್ತೊಬ್ಬ ಸ್ನೇಹಿತರು ಹೇಳಿದರು. ಅದೇ ರೀತಿ ಕಳುಹಿಸಲಾಯಿತು. ನಾನ್ ಫೀಚರ್ ವಿಭಾಗದಲ್ಲಿ ನಮ್ಮ “ಮಧ್ಯಂತರ”ಕ್ಕೆ ಎರಡು ಪ್ರಶಸ್ತಿಗಳು ಬಂದಿದೆ. ಈ ಸಮಯದಲ್ಲಿ ನನ್ನ ತಂಡಕ್ಕೆ ಧನ್ಯವಾದ ತಿಳಿಸುತ್ತೇನೆ. ಇದು 1976ರಿಂದ 85 ರವರೆಗಿನ ಕಾಲಘಟ್ಟದ ಕಥೆ. ಇದನ್ನು ನೆಗೆಟೀವ್ ನಲ್ಲೇ ಚಿತ್ರೀಕರಣ ಮಾಡಿದ್ದೇವೆ‌. ಹನ್ನೊಂದು ದಿನಗಳ ಚಿತ್ರೀಕರಣ ಮಾಡಲಾಗಿದೆ. ನಿರ್ಮಾಪಕ ಮಾಣಿಕ್ ಚಂದ್ ಅವರು ಸಂದರ್ಶನವೊಂದರಲ್ಲಿ ಹೇಳಿದ ಮಾತೇ ನನ್ನ “ಮಧ್ಯಂತರ “ಕ್ಕೆ ಸ್ಪೂರ್ತಿ. ಮುಂದಿನ ದಿನಗಳಲ್ಲಿ ಇದೇ ಕಥೆಯನ್ನು ಮುಂದುವರೆಸಿ ಹಿರಿತೆರೆಯಲ್ಲಿ ಸಿನಿಮಾ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ನಿರ್ದೇಶಕ ದಿನೇಶ್ ಶೆಣೈ ತಿಳಿಸಿದರು.

ನನ್ನ ಐವತ್ತು ವರ್ಷಗಳ ಸಿನಿ ಜರ್ನಿಯಲ್ಲಿ ಮಾಧ್ಯಮ ನೀಡಿರುವ ಪ್ರೋತ್ಸಾಹ ಅಪಾರ. ಅವರಿಗೆ ಈ ಸಂದರ್ಭದಲ್ಲಿ ವಿಶೇಷ ಧನ್ಯವಾದ ತಿಳಿಸುವುದಾಗಿ ಸಂಕಲನಕಾರ ಸುರೇಶ್ ಅರಸ್ ತಿಳಿಸಿದರು. ಇಂತಹ ಅದ್ಭುತ ಕಥೆಯನ್ನು ಕೆಲವೇ ನಿಮಿಷಗಳಲ್ಲಿ ಹೇಳುವುದು ಸುಲಭವಲ್ಲ. ದಿನೇಶ್ ಶೆಣೈ ಅವರು ಆ ಪ್ರಯತ್ನ ಮಾಡಿದ್ದಾರೆ. ರಾಷ್ಟ್ರಪ್ರಶಸ್ತಿ ಪಡೆದು ಮೊದಲ ಪ್ರಯತ್ನದಲ್ಲೇ ಗೆದ್ದಿದ್ದಾರೆ‌, ಅವರಿಗೆ ಹಾಗೂ ತಂಡಕ್ಕೆ ನಟಿ ಜಯಮಾಲಾ ಶುಭಾಶಯ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT