ಸುಭಾಶ್ರೀ ರಾಯಗುರು 
ಸಿನಿಮಾ ಸುದ್ದಿ

ಬಿಗ್ ಬಾಸ್ ಸುಂದರಿಯ ಕಾರು ಅಪಘಾತ; ಸಂಪೂರ್ಣ ನಜ್ಜುಗುಜ್ಜು; ಆತಂಕದಲ್ಲಿ ಅಭಿಮಾನಿಗಳು!

ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ನಾಗಾರ್ಜುನ ಸಾಗರದ ಬಸ್ ನಿಲ್ದಾಣದಲ್ಲಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಬೈಕ್‌ನಲ್ಲಿ ಬರುತ್ತಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಟಾಲಿವುಡ್ ನಟಿ ಹಾಗೂ ಬಿಗ್ ಬಾಸ್ ಏಳನೇ ಆವೃತ್ತಿಯ ಸ್ಪರ್ಧಿ ಸುಭಾಶ್ರೀ ರಾಯಗುರು ರಸ್ತೆ ಅಪಘಾತಕ್ಕೀಡಾಗಿದ್ದಾರೆ. ಚಿತ್ರೀಕರಣಕ್ಕೆ ತೆರಳುತ್ತಿದ್ದ ವೇಳೆ ಆಕೆಯ ಕಾರಿಗೆ ಎದುರಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿತ್ತು.

ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ನಾಗಾರ್ಜುನ ಸಾಗರದ ಬಸ್ ನಿಲ್ದಾಣದಲ್ಲಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಬೈಕ್‌ನಲ್ಲಿ ಬರುತ್ತಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸುಭಾಶ್ರೀಗೆ ಯಾವುದೇ ಗಾಯವಾಗಿಲ್ಲ. ಆದರೆ ಅಪಘಾತದಲ್ಲಿ ಆಕೆ ಪ್ರಯಾಣಿಸುತ್ತಿದ್ದ ಕಾರು ಸಂಪೂರ್ಣ ಜಖಂಗೊಂಡಿದೆ. ಆದರೆ ಬೈಕ್ ನಲ್ಲಿ ತೆರಳುತ್ತಿದ್ದವರು ಮದ್ಯ ಸೇವಿಸಿದ್ದರಿಂದ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಈ ನಡುವೆ ಶುಭಶ್ರೀ ಅವರ ಕಾರು ಅಪಘಾತಕ್ಕೆ ಸಂಬಂಧಿಸಿದ ಫೋಟೋಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಇದನ್ನು ನೋಡಿದ ಅಭಿಮಾನಿಗಳು ಆತಂಕಗೊಂಡಿದ್ದರು. ಆದರೆ ಶುಭಶ್ರೀಗೆ ಗಾಯವಾಗಿಲ್ಲ ಎಂದು ತಿಳಿದಾಗ ಎಲ್ಲರೂ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಹಾಡಿನ ಚಿತ್ರೀಕರಣಕ್ಕೆ ಹೋಗುತ್ತಿದ್ದಾಗ ಆಕಸ್ಮಿಕವಾಗಿ ಈ ಅವಘಡ ಸಂಭವಿಸಿತ್ತು.

ಬಿಗ್ ಬಾಸ್ ತೆಲುಗು ರಿಯಾಲಿಟಿ ಶೋ ಮೂಲಕ ಉತ್ತಮ ಮನ್ನಣೆ ಗಳಿಸಿದವರಲ್ಲಿ ಶುಭಶ್ರೀ ರಾಯಗುರು ಅಲಿಯಾಸ್ ಸುಬ್ಬು ಕೂಡ ಒಬ್ಬರು. ಬಿಗ್ ಬಾಸ್ ನ ಏಳನೇ ಸೀಸನ್ ನಲ್ಲಿ ಸ್ಪರ್ಧಿಯಾಗಿ ಬಂದು ತಮ್ಮ ನಟನೆ ಮತ್ತು ಮಾತಿನ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದರು. ಪ್ರಶಸ್ತಿ ಗೆಲ್ಲದಿದ್ದರೂ ತನ್ನ ಸೌಂದರ್ಯ ಹಾಗೂ ಮುದ್ದಾದ ಮಾತುಗಳಿಂದ ಕಿರುತೆರೆ ಅಭಿಮಾನಿಗಳ ಮನ ಗೆದ್ದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!